`ಸಿಟಿ` ರವಿಗೂ `ಓಟಿ` ಮದ್ಯಕ್ಕೂ ಯಾವ ಜನ್ಮದ ಮೈತ್ರಿ!?: ಕಾಂಗ್ರೆಸ್ ವ್ಯಂಗ್ಯ
ಮತದಾರರಿಗೆ ಸಾಧನೆ ತೋರಿಸಿ ಮತ ಕೇಳಲಾಗದ ಬಿಜೆಪಿ ಹೆಂಡದ ಮೊರೆ ಹೋಗಿರುವುದು ನಾಚಿಕೆಗೇಡು. ಹೆಂಡ ಹಂಚುವ ಕಾರ್ಯಸೂಚಿ RSS ಕಚೇರಿಯಿಂದ ಬಂದಿದ್ದೇ ಸಿಟಿ ರವಿಯವರೇ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.
ಬೆಂಗಳೂರು: ಚಿಕ್ಕಮಗಳೂರಿನ ಎಐಟಿ ವೃತ್ತ ಸಮೀಪ ಅಪಘಾತಕೀಡಾಗಿದ್ದ ಕಾರಿನಲ್ಲಿ ಶಾಸಕ ಸಿ.ಟಿ.ರವಿ ಭಾವಚಿತ್ರದ ಕ್ಯಾಲೆಂಡರ್‌ಗಳು, ಮದ್ಯದ ಪ್ಯಾಕೆಟ್‌ಗಳು, ಕತ್ತಿ ಸಿಕ್ಕ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಟೀಕಾಪ್ರಹಾರ ನಡೆಸಿದೆ.
ಈ ಬಗ್ಗೆ ಸೋಮವಾರ ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್, "ಸಿಟಿ" ರವಿಗೂ "ಓಟಿ" ಮದ್ಯಕ್ಕೂ ಯಾವ ಜನ್ಮದ ಮೈತ್ರಿ!?’ ಎಂದು ವ್ಯಂಗ್ಯವಾಡಿದೆ. ‘ಮತದಾರರಿಗೆ ಸಾಧನೆ ತೋರಿಸಿ ಮತ ಕೇಳಲಾಗದ ಬಿಜೆಪಿ ಹೆಂಡದ ಮೊರೆ ಹೋಗಿರುವುದು ನಾಚಿಕೆಗೇಡು. ಹೆಂಡ ಹಂಚುವ ಕಾರ್ಯಸೂಚಿ RSS ಕಚೇರಿಯಿಂದ ಬಂದಿದ್ದೇ ಸಿಟಿ ರವಿಯವರೇ? ಹೆಂಡ ಪೂರೈಕೆ ಮಾಡಲೆಂದೇ ವಾರಕ್ಕೊಮ್ಮೆ ಪ್ರಧಾನಿ ಮೋದಿ, ಅಮಿತ್ ಶಾ ಕರ್ನಾಟಕಕ್ಕೆ ಬರುತ್ತಿದ್ದಾರೆಯೇ ಬಿಜೆಪಿ?’ ಎಂದು ಪ್ರಶ್ನಿಸಿದೆ.
ಇದನ್ನೂ ಓದಿ: ಶಂಕರ್ ನಾಗ್ ಕನಸು ನನಸು: ಸಿಎಂ ಬೊಮ್ಮಾಯಿ
ಸಿಎಂ ಬಲಗೈ ಭಂಟ ಕಾಂಗ್ರೆಸ್ ಸೇರ್ಪಡೆ, ಬಿಜೆಪಿ ಶೋಚನೀಯ ಸ್ಥಿತಿಗೆ ಸಾಕ್ಷಿ: ಡಿ.ಕೆ.ಶಿವಕುಮಾರ್
ಕಾಂಗ್ರೆಸ್ ಟೀಕಿಸಿದೆ.
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.