ಹುಬ್ಬಳ್ಳಿ: ಕೇಂದ್ರ ಗೃಹ ಸಚಿವ ಅಮಿತ್ ಶಾ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಜೆ.ಪಿ‌.ನಡ್ಡಾ, ಸ್ಮೃತಿ ಇರಾನಿ ಹೀಗೆ ಎಲ್ಲರೂ ಸೇರಿ ನನ್ನ ಸೋಲಿಸಲು ಪಣ ತೊಟ್ಟಿದ್ದಾರೆಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬೇಸರ ವ್ಯಕ್ತಪಡಿಸಿದ್ದಾರೆ.


COMMERCIAL BREAK
SCROLL TO CONTINUE READING

ಹುಬ್ಬಳ್ಳಿಯ ಸುದ್ದಿಗೋಷ್ಠಿಯಲ್ಲಿ ಬುಧವಾರ ಮಾತನಾಡಿದ ಅವರು, ಬಿಜೆಪಿ ನನ್ನನ್ನು ಸೋಲಿಸುವ ಅಭಿಯಾನ ನಡೆಸುತ್ತಿದೆ. ಬಡಪಾಯಿ ಮೇಲೆ ಯಾಕೆ ಮುಗಿ ಬೀಳುತ್ತಿದ್ದಾರೋ ಗೊತ್ತಿಲ್ಲ..? ಆಯನೂರ ಮಂಜುನಾಥ್, ಲಕ್ಷ್ಮಣ ಸವದಿ, ಎನ್.ಆರ್.ಸಂತೋಷ್ ಸೇರಿದಂತೆ ಹಲವರು ಪಕ್ಷ ತೋರೆದಿದ್ದಾರೆ. ಆದರೆ ನಾನು ಪಕ್ಷ ತೊರೆದಿದ್ದನ್ನು ದೊಡ್ಡ ಅಪರಾಧ ಮಾಡಿದವನಂತೆ ಮುಗಿಬಿದ್ದಿದ್ದಾರೆ’ ಎಂದು ಹೇಳಿದ್ದಾರೆ.


ಬಿ.ಎಸ್.ಯಡಿಯೂರಪ್ಪನವರು ಕೆಜೆಪಿ‌ ಕಟ್ಟುವಾಗ ಐಡಿಯಲಾಜಿ ಎಲ್ಲಿ ಹೋಗಿತ್ತು.? ನಾನು ಪಕ್ಷ ದ್ರೋಹದ ಕೆಲಸ ಮಾಡಿಲ್ಲ, ನನ್ನ ಸ್ವಾಭಿಮಾನಕ್ಕೆ ಧಕ್ಕೆಯಾಗಿದೆ. ಪಕ್ಷದಲ್ಲಿ ನನ್ನ ವಿರುದ್ಧ ಕುತಂತ್ರ- ಷಡ್ಡ್ಯಂತ್ರ ನಡೆದಿದೆ. ಯಡಿಯೂರಪ್ಪರ ಬಗ್ಗೆ ನನಗೆ ಅಪಾರ ಗೌರವವಿದೆ. ಅವರ ಬೈಗುಳ, ಟೀಕೆಯನ್ನು ಅಶೀವಾರ್ದ ಎಂದು ತೆಗೆದುಕೊಂಡಿದ್ದೇನೆ. ಟಿಕೆಟ್ ಕೊಡಿಸುವುದಾಗಿ ಹೇಳಿ ಯಡಿಯೂರಪ್ಪ ಈಗ ಅಸಹಾಯಕರಾಗಿದ್ದಾರೆ’ ಎಂದು ಶೆಟ್ಟರ್ ಹೇಳಿದ್ದಾರೆ.


ಇದನ್ನೂ ಓದಿ: ಹೊಸಕೋಟೆಯಲ್ಲಿ ಶರತ್ ಪತ್ನಿಯ ಕಾರು ಧ್ವಂಸ


ನನಗೆ ಟಿಕೆಟ್ ಕೈತಪ್ಪಿದ್ದಕ್ಕೆ ಹಿನ್ನೆಲೆ ನಾನು ನೇರವಾಗಿ ಟೀಕಿಸಿದ್ದು ಬಿ.ಎಲ್.ಸಂತೋಷ್ ಬಗ್ಗೆ, ಆದರೆ ಅವರು ನನ್ನ ಟೀಕೆಗಳಿಗೆ ಉತ್ತರಿಸಿಲ್ಲ. ಯಡಿಯೂರಪ್ಪನವರ ಹೆಗಲ ಮೇಲೆ ಬಂದೂಕು ಇಟ್ಟು ಹೊಡೆಯುವ ಕೆಲಸ ನಡೆದಿದೆ. ಕೆಜೆಪಿ ಕಟ್ಟಿ ಶಿಗ್ಗಾಂವಿಗೆ  ಪ್ರಚಾರಕ್ಕೆ‌ ಹೋದಾದ ಇದೇ ಯಡಿಯೂರಪ್ಪ ಬೊಮ್ಮಾಯಿ‌ ಅವರನ್ನು ಬೈಯ್ದಿದ್ದರು. ಆದರೆ ಬೊಮ್ಮಾಯಿ ಗೆದ್ದು ಬಂದಿದ್ದರು’ ಎಂದು ಅವರು ಹೇಳಿದ್ದಾರೆ.


ಹುಬ್ಬಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ನಾನು ಗೆಲ್ಲುವುದು ನಿಶ್ಚಿತ. ಎಷ್ಟು ಜನರು ನನ್ನ ಮೇಲೆ ಅಟ್ಯಾಕ್ ಮಾಡ್ತಾರೆ, ಟೀಕೆ ಮಾಡ್ತಾರೋ ಮಾಡಲಿ. ಅದು ನನಗೆ ಲಾಭವಾಗಲಿದೆ. ಐಡಿಯಾಲಜಿ ಬಗ್ಗೆ ಮಾತನಾಡುವವರು ಈ ಹಿಂದೆ ಆಪರೇಶನ್ ಮೂಲಕ ಕಾಂಗ್ರೆಸ್‍ನವರನ್ನು ಪಕ್ಷಕ್ಕೆ ಕರೆತಂದರು. ನಾನು ಯಾವತ್ತೂ ಬಿಜೆಪಿಗೆ ಅನ್ಯಾಯ, ದ್ರೋಹ ಮಾಡಿಲ್ಲ’ವೆಂದು ಶೆಟ್ಟರ್ ಹೇಳಿದ್ದಾರೆ.


ಕೇವಲ ಹುದ್ದೆಗಾಗಿ ನಾನು ಪಕ್ಷ ತೊರೆದಿಲ್ಲ. ಸ್ವಾಭಿಮಾನಕ್ಕೆ ಧಕ್ಕೆಯಾಗಿದ್ದರಿಂದ ಪಕ್ಷ ತೊರೆದಿದ್ದೇನೆ. ಯಡಿಯೂರಪ್ಪನವರ ಬೈಗುಳ ನನ್ನ ಗೆಲುವಿಗೆ ಅನುಕೂಲವಾಗಲಿದೆ. ನನಗೆ ಬೈದಷ್ಟು ನನ್ನ ಮೇಲೆ ಜನರ‌ ಪ್ರೀತಿ, ವಿಶ್ವಾಸ ಹೆಚ್ಚಿಗೆಯಾಗುತ್ತದೆ ಎಂದು ಶೆಟ್ಟರ್ ಹೇಳಿದ್ದಾರೆ.


ಇದನ್ನೂ ಓದಿ: ಮುಸ್ಲಿಂ ಮೀಸಲಾತಿ ರದ್ದತಿಗೆ ತಡೆಯಾಜ್ಞೆ: ಬಿಜೆಪಿ ಸರ್ಕಾರಕ್ಕೆ ‘ಸುಪ್ರೀಂ’ ಕಪಾಳಮೋಕ್ಷ! –ಸಿದ್ದರಾಮಯ್ಯ


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.