Karnataka Election 2023: ಜಗದೀಶ್ ಶೆಟ್ಟರ್ & ಲಕ್ಷ್ಮಣ ಸವದಿ ಸೋಲಿಸಲು ಪಣ ತೊಟ್ಟ ಬಿಎಸ್ವೈ!
Karnataka Assembly Election 2023: ಜಗದೀಶ್ ಶೆಟ್ಟರ್ ಮತ್ತು ಲಕ್ಷ್ಮಣ ಸವದಿ ಸೋಲಿಸಲು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಪಣತೊಟ್ಟಿದ್ದಾರೆ. ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿ ಸೆಡ್ಡುಹೊಡೆದ ಕ್ಷೇತ್ರಗಳಿಗೆ ರಾಜಾಹುಲಿ ಎಂಟ್ರಿ ಕೊಟ್ಟಿದ್ದಾರೆ.
ಬೆಂಗಳೂರು: ಜಗದೀಶ್ ಶೆಟ್ಟರ್ ಮತ್ತು ಲಕ್ಷ್ಮಣ ಸವದಿ ಸೋಲಿಸಲು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಪಣತೊಟ್ಟಿದ್ದಾರೆ. ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿ ಸೆಡ್ಡುಹೊಡೆದ ಕ್ಷೇತ್ರಗಳಿಗೆ ಬಿಎಸ್ವೈ ಎಂಟ್ರಿ ಕೊಟ್ಟಿದ್ದಾರೆ. ಇಂದು ಶೆಟ್ಟರ್ ಮತ್ತು ಸವದಿ ಕೋಟೆಯಲ್ಲಿ ರಾಜಾಹುಲಿ ಮತಬೇಟೆ ನಡೆಸಲಿದ್ದಾರೆ. ಮಾಜಿ ಸಿಎಂ & ಮಾಜಿ ಡಿಸಿಎಂ ಸೋಲಿಸಲು ಬಿಜೆಪಿ ಪಣ ತೋಟ್ಟಿದೆ.
ಜಗದೀಶ್ ಶೆಟ್ಟರ್ ಸೋಲಿಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಬಿಎಸ್ವೈಗೆ ಉಸ್ತುವಾರಿ ನೀಡಿದ್ದಾರೆ. ಈ ಹಿನ್ನೆಲೆ ಯಡಿಯೂರಪ್ಪ ಹುಬ್ಬಳ್ಳಿಯಲ್ಲಿ ಬಿಜೆಪಿ ಪರ ಮತಯಾಚನೆ ನಡೆಸಲಿದ್ದಾರೆ. ಬೆಳಗಾವಿ ಮತ್ತು ಧಾರವಾಡ ಜಿಲ್ಲೆಯಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಪ್ರವಾಸ ಕೈಗೊಳ್ಳುತ್ತಿದ್ದಾರೆ.
ಇದನ್ನೂ ಓದಿ: "ಸವಾರಿ ಮಾಡುವ ನಿಮ್ಮ ಸರ್ವಾಧಿಕಾರಿ ಧೋರಣೆಯನ್ನು ಕನ್ನಡಿಗರು ಈಗ ಚೆನ್ನಾಗಿ ಅರ್ಥಮಾಡಿಕೊಂಡಿದ್ದಾರೆ"
ಬೆಳಗ್ಗೆ 11 ಗಂಟೆಗೆ ಅಥಣಿ ಕ್ಷೇತ್ರದಲ್ಲಿ ಸಾರ್ವಜನಿಕ ಪ್ರಚಾರ ಸಭೆ
ಮಧ್ಯಾಹ್ನ 12:40ಕ್ಕೆ ಮುಗಳಕೊಡದಲ್ಲಿ ಯಲ್ಲಾಲಿಂಗೇಶ್ವರ ಗದ್ದುಗೆ ದರ್ಶನ ಪಡೆಯಲಿದ್ದಾರೆ
ಮಧ್ಯಾಹ್ನ 2 ಗಂಟೆಗೆ ಕುಡಚಿಯಲ್ಲಿ ರೋಡ್ ಶೋ ಹಾಗೂ ಸಾರ್ವಜನಿಕ ಸಭೆಯಲ್ಲಿ ಭಾಗಿ
ಸಂಜೆ 4:15ಕ್ಕೆ ಸವದತ್ತಿಯಲ್ಲಿ ಸಾರ್ವಜನಿಕ ಪ್ರಚಾರ ಸಭೆಯಲ್ಲಿ ಭಾಗಿ
ಸಂಜೆ 6:20ಕ್ಕೆ ಹುಬ್ಬಳ್ಳಿಯಲ್ಲಿ ರೋಡ್ ಶೋ ನಡೆಸಲಿದ್ದಾರೆ
ನಾಳೆ ರಾತ್ರಿ ಹುಬ್ಬಳ್ಳಿಯಲ್ಲಿ ಯಡಿಯೂರಪ್ಪ ವಾಸ್ತವ್ಯ ಹೂಡಲಿದ್ದಾರೆ
ಪಕ್ಷಕ್ಕೆ ‘ಕೈ’ ಕೊಟ್ಟ ಇಬ್ಬರು ನಾಯಕರನ್ನು ಹೇಗಾದರೂ ಮಾಡಿ ಸೋಲಿಸಲು ಯಡಿಯೂರಪ್ಪ ಪ್ಲಾನ್ ಮಾಡಿದ್ದಾರೆ.
ಇದನ್ನೂ ಓದಿ: "ಇಡಿ, ಸಿಬಿಐ ,ಐಟಿ ತನಿಖಾ ಸಂಸ್ಥೆಗಳು ರಾಜ್ಯದಲ್ಲಿರುವ ಭ್ರಷ್ಟಾಚಾರದ ಕಡೆ ಯಾಕೆ ನೋಡುತ್ತಿಲ್ಲ"
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.