ಬೆಂಗಳೂರು: ಚಾಮರಾಜನಗರ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಅವರು ಜೆಡಿಎಸ್ ಅಭ್ಯರ್ಥಿ ಮಲ್ಲಿಕಾರ್ಜುನ ಸ್ವಾಮಿ (ಆಲುರು ಮಲ್ಲು) ಅವರಿಗೆ ನಾಮಪತ್ರ ವಾಪಾಸ್ ಪಡೆಯುವಂತೆ ಆಮಿಷ ಒಡ್ಡಿದ್ದರು ಎಂಬ ಆಡಿಯೋ ವೈರಲ್ ಆದ ಹಿನ್ನೆಲೆ ಮೂವರು ಅಪರಿಚಿತರ ವಿರುದ್ಧ ಚಾಮರಾಜನಗರ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


COMMERCIAL BREAK
SCROLL TO CONTINUE READING

ಸಚಿವ ವಿ.ಸೋಮಣ್ಣ, ನಟರಾಜು, ಸುದೀಪ್ ಎಂದು ಆಡಿಯೋದಲ್ಲಿ ಉಲ್ಲೇಖಗೊಂಡ ಮೂವರು ಹೆಸರುಗಳ ಮೇಲೆ ಅಪರಿಚಿತರು ಎಂದು ನಮೂದಿಸಿ ಚಾಮರಾಜನಗರ ಪಟ್ಟಣ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.


ಇದನ್ನೂ ಓದಿ: ಕೋವಿಡ್‌ ಸಮಯದಲ್ಲಿ ಬಾರದವರು, ಚುನಾವಣೆ ಸಂಬಂಧ ಬಂದಿದಾರೆ..!


ಚಾಮರಾಜನಗರ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಯೋಗಾನಂದ ಮೌಖಿಕ ಆದೇಶದ ಮೇರೆಗೆ ಜಯಣ್ಣ ಎಂಬವರು ದೂರು ಕೊಟ್ಟಿದ್ದು, ಚಾಮರಾಜನಗರ ಪಟ್ಟಣ ಠಾಣೆಯಲ್ಲಿ ಮೂವರು ಅಪರಿಚಿತರ ವಿರುದ್ಧ ಪ್ರಕರಣ ದಾಖಲಾಗಿದೆ.


ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ಕಾಂಗ್ರೆಸ್ ದೂರು!


ಜೆಡಿಎಸ್ ಅಭ್ಯರ್ಥಿ ಮಲ್ಲಿಕಾರ್ಜುನ ಸ್ವಾಮಿಗೆ ನಾಮಪತ್ರ ವಾಪಸ್ ಪಡೆಯಲು ಒತ್ತಡ ಹೇರಿದ್ದ ಆರೋಪದಡಿ ಕ್ರಮಕ್ಕೆ ಆಗ್ರಹಿಸಿ ಸಚಿವ ವಿ.ಸೋಮಣ್ಣ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ಕಾಂಗ್ರೆಸ್ ದೂರು ನೀಡಿತ್ತು.


ಇದನ್ನೂ ಓದಿ: Karnataka Assembly Election 2023: ಮೈಸೂರಿನಲ್ಲಿ ಯಾರ ಕೈ ಹಿಡಿಯಲಿದ್ದಾನೆ ಮತದಾರ ಪ್ರಭು?


ಈ ದೂರಿನಲ್ಲಿ ಚಾಮರಾಜನಗರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಮಲ್ಲಿಕಾರ್ಜುನ ಸ್ವಾಮಿ ಜೊತೆಗೆ ನಡೆಸಿದ ಸಂಭಾಷಣೆಯ ಮಾಹಿತಿಯನ್ನು ಉಲ್ಲೇಖ ಮಾಡಲಾಗಿತ್ತು. ವೈರಲ್ ಆದ ಆಡಿಯೋದಲ್ಲಿ ಮಲ್ಲಿಕಾರ್ಜುನ ಸ್ವಾಮಿಗೆ 50 ಲಕ್ಷ ರೂ. ಹಾಗೂ ಗೂಟದ ಕಾರು ನೀಡುವ ಆಶ್ವಾಸನೆ ನೀಡಲಾಗಿತ್ತು. ಇದನ್ನು ಸ್ವತಃ ಮಲ್ಲಿಕಾರ್ಜುನ ಸ್ವಾಮಿಯವರೇ ಒಪ್ಪಿಕೊಂಡಿದ್ದಾರೆ.  


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.