ಹುಬ್ಬಳ್ಳಿ: ಇನ್ನೆರಡು ದಿನಗಳಲ್ಲಿ ಭಿನ್ನಮತದ ಸಮಸ್ಯೆ ಬಗೆಹರಿಯಲಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಶನಿವಾರ ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಶಾಸಕ ನೆಹರೂ ಓಲೇಕಾರ್ ಮಾಡಿರುವ ಆರೋಪಗಳಿಗೆ ಪ್ರತಿಕ್ರಿಯೆ ನೀಡಿದರು. ಓಲೇಕಾರ್ ಮಾಡಿರುವ ಆರೋಪಗಳಿಗೆ ದಾಖಲೆ ಕೊಡಲಿ. ಪ್ರಕರಣವೊಂದರಲ್ಲಿ ಅವರ ಅಪರಾಧ ಸಾಬೀತಾಗಿದೆ ಎಂದರು.
ಬಹುಮತದ ದೊರೆಯುವ ವಿಶ್ವಾಸವಿದೆ
ಇಂದು ಇಡೀದಿನ ಕ್ಷೇತ್ರದಲ್ಲಿ ಇರುವುದಾಗಿ ತಿಳಿಸಿದ ಸಿಎಂ ಬೊಮ್ಮಾಯಿ, ರಾಜ್ಯದಲ್ಲಿ ಚುನಾಚಣೆ ಕಣ ಸಿದ್ಧವಾಗಿದೆ. ಬಿಜೆಪಿಗೆ ಸಂಪೂರ್ಣ ಬಹುಮತ ದೊರೆಯಲಿದೆ ಎಂಬ ಆತ್ಮವಿಶ್ವಾಸ ನಮಗಿದೆ. ಉಳಿದ ಕ್ಷೇತ್ರಗಳಿಗೆ ಇನ್ನೆರಡು ದಿನಗಳಲ್ಲಿ ಕೇಂದ್ರ ಚುನಾವಣೆ ಸಮಿತಿ ತೀರ್ಮಾನ ಮಾಡಲಿದ್ದು, 12 ಕ್ಷೇತ್ರಗಳ ಬಗ್ಗೆ ಚರ್ಚೆಯಾಗಿದೆ ಎಂದರು.
ಇದನ್ನೂ ಓದಿ: ಜಗದೀಶ್ ಶೆಟ್ಟರ್ಗೆ ಟಿಕೆಟ್ ತಪ್ಪಿಸುತ್ತಿರೋದು ನಾವಲ್ಲ..!
ಜಗದೀಶ್ ಶೆಟ್ಟರ್ ಮನವೊಲಿಕೆ ಪ್ರಯತ್ನ
ಜಗದೀಶ ಶೆಟ್ಟರ್ ಅವರ ಮನವೊಲಿಕೆಗೆ ಇಂದಿಗೂ ಪ್ರಯತ್ನ ನಡೆಯುತ್ತಿದ್ದು, ಶುಕ್ರವಾರ ಧರ್ಮೇಂದ್ರ ಪ್ರಧಾನ ಅವರ ಬಳಿ ಚರ್ಚೆ ಮಾಡಲಾಗಿದೆ ಎಂದರು.
ಜಗದೀಶ್ ಶೆಟ್ಟರ್ ಉಳಿಸಿಕೊಳ್ಳುವ ವಿಶ್ವಾಸ
ಜಗದೀಶ್ ಶೆಟ್ಟರ್ ಅವರದ್ದು ಭಾರತೀಯ ಜನಸಂಘ ಕಾಲದ ಮನೆತನ. ಬಿಜೆಪಿಗೆ ಅವರು ಅತ್ಯಂತ ನಿಷ್ಠರು. ಉತ್ತರ ಕರ್ನಾಟಕ ಭಾಗಕ್ಕೆ ಅತ್ಯಂತ ಅವಶ್ಯಕವಾಗಿದ್ದಾರೆ. ಅತ್ಯಂತ ಅವಶ್ಯವಿರುವ ನಾಯಕ. ಅವರನ್ನು ಉಳಿಸಿಕೊಳ್ಳಬೇಕೆಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರೊಂದಿಗೆ ಮಾತನಾಡಿದ್ದು, ಉಳಿಸಿಕೊಳ್ಳುವ ವಿಶ್ವಾಸ ಇದೆ ಎಂದರು.
ಇದನ್ನೂ ಓದಿ: Karnataka Assembly election 2023: 15 ದಿನದಲ್ಲಿ 150 ಕೋಟಿ ರೂ. ಮುಟ್ಟಿದ ಚುನಾವಣಾ ಅಕ್ರಮ!
ಸುಳ್ಳು ವದಂತಿ
ಶೆಟ್ಟರ್ ಅವರಿಗೆ ಟಿಕೆಟ್ ತಪ್ಪಲು ಸಿಎಂ ಅವರೇ ಕಾರಣವೆಂಬ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ ಬೊಮ್ಮಾಯಿ, ಇದು ಸುಳ್ಳು ವದಂತಿ. ಯಾರೂ ಅದನ್ನು ಹೇಳಬಾರದು. ಅತ್ಯಂತ ಪ್ರಾಮಾಣಿಕವಾಗಿ ಶೆಟ್ಟರ್ ಉಳಿಸಿಕೊಳ್ಳುವ ಪ್ರಯತ್ನ ಮಾಡಿದ್ದೇವೆ. ಹೇಳುವವರು ನೂರಾರು ಹೇಳುತ್ತಾರೆ. ಶೆಟ್ಟರ್ ಮತ್ತು ನಾವು ಆತ್ಮೀಯರು ಎಂದು ಹೇಳಿದರು.
ಚುನಾವಣೆ ಒಂದು ಸವಾಲು!
ಕಾಂಗ್ರೆಸ್ಗೆ ಚುನಾವಣೆ ಗೆಲ್ಲುವ ಶಕ್ತಿ ಇಲ್ಲ. ಚುನಾವಣೆ ಅಂದರೆ ಒಂದು ಸವಾಲು ಎಂದು ಸಿಎಂ ಬೊಮ್ಮಾಯಿ ಇದೇ ವೇಳೆ ತಿಳಿಸಿದರು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.