ಬಿಜೆಪಿಗೆ ಮಾಡಾಳ್ ವಿರೂಪಾಕ್ಷಪ್ಪ ಪುತ್ರನ ಸೆಡ್ಡು; ಪಕ್ಷೇತರ ಸ್ಪರ್ಧೆಗೆ ಘೋಷಣೆ!
Karnataka Assembly Election 2023: ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ ಟೆಂಡರ್ಗಾಗಿ ಲಂಚ ಪಡೆದ ಆರೋಪ ಎದುರಿಸುತ್ತಿರುವ ಮಾಡಾಳ್ ವಿರೂಪಾಕ್ಷಪ್ಪಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಶನಿವಾರ ಜಾಮೀನು ಮಂಜೂರು ಮಾಡಿದೆ.
ದಾವಣಗೆರೆ: ಭ್ರಷ್ಟಾಚಾರ ಪ್ರಕರಣದಲ್ಲಿ ಜೈಲುಪಾಲಾಗಿದ್ದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಹಿರಿಯ ಪುತ್ರ ಮಲ್ಲಿಕಾರ್ಜುನ ಬಿಜೆಪಿಗೆ ಸೆಡ್ಡು ಹೊಡೆದಿದ್ದಾರೆ. ಚನ್ನಗಿರಿ ಕ್ಷೇತ್ರದಿಂದ ಮಾಡಾಳ್ ಮಲ್ಲಿಕಾರ್ಜನ ಬಿಜೆಪಿ ಟಿಕೆಟ್ ಕೇಳಿದ್ದರು. ಟಿಕೆಟ್ ನಿರಾಕರಿಸಿದ ಹಿನ್ನೆಲೆ ಪಕ್ಷೇತರನಾಗಿ ಸ್ಪರ್ಧಿಸುವುದಾಗಿ ಮಾಡಾಳ್ ಮಲ್ಲಿಕಾರ್ಜುನ ಘೋಷಿಸಿದ್ದಾರೆ.
ಚನ್ನಗಿರಿಯ ಚನ್ನೇಶಪುರದಲ್ಲಿ ಮಾಡಾಳ್ ಮಲ್ಲಿಕಾರ್ಜುನ ಬೆಂಬಲಿಗರ ಸಭೆ ನಡೆಸಿದ್ದಾರೆ. ಈ ವೇಳೆ ಪಕ್ಷೇತರನಾಗಿ ಸ್ಪರ್ಧಿಸಲು ಮಾಡಾಳ್ ಮಲ್ಲಿಕಾರ್ಜುನ ನಿರ್ಧರಿಸಿದ್ದಾರೆ. ಸೋಮವಾರ ಸಾಂಕೇತಿಕವಾಗಿ ಅವರು ನಾಮಪತ್ರ ಸಲ್ಲಿಸಲಿದ್ದಾರೆ. ಬಳಿಕ ಗುರುವಾರ 50 ಸಾವಿರ ಅಭಿಮಾನಿಗಳ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.
ಇದನ್ನೂ ಓದಿ: ಬೆಳೆಸಿದ ಪಕ್ಷ ಬಿಟ್ಟು ದುಡುಕಿದ್ರಾ ಸವದಿ, ಶೆಟ್ಟರ್..? : ಇಬ್ಬರಿಗೂ ಬಿಜೆಪಿ ಕೊಟ್ಟ ಬಿಗ್ ಆಫರ್ ಇವು..!
ಸ್ವಾಭಿಮಾನದ ಚನ್ನಗಿರಿ ಕ್ಷೇತ್ರ ಉಳಿಸಿಕೊಳ್ಳಲು ಬೆಂಬಲಿಗರಿಗೆ ಕರೆ ನೀಡಲಾಗಿತ್ತು. ಚನ್ನಗಿರಿ ಕ್ಷೇತ್ರ ಬೇರೆಯವರ ಪಾಲಾಗುವುದು ಬೇಡ, ಈ ಮಣ್ಣಿನವರಿಗೆ ಇರಲಿ. ಆ ಸ್ವಾಭಿಮಾನದಿಂದ ನಮಗೆ ಬೆಂಬಲ ನೀಡಿ. ಚನ್ನಗಿರಿ ಕ್ಷೇತ್ರ ಬೇರೆಯವರಿಗೆ ಬಿಟ್ಟು ಕೊಡುವುದು ಬೇಡವೆಂದು ಬೆಂಬಲಿಗರ ಸಭೆಯಲ್ಲಿ ಮಾಡಾಳ್ ಮಲ್ಲಿಕಾರ್ಜುನ ಮನವಿ ಮಾಡಿಕೊಂಡಿದ್ದಾರೆ.
ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ ಟೆಂಡರ್ಗಾಗಿ ಲಂಚ ಪಡೆದ ಆರೋಪ ಎದುರಿಸುತ್ತಿರುವ ಮಾಡಾಳ್ ವಿರೂಪಾಕ್ಷಪ್ಪಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಶನಿವಾರ ಜಾಮೀನು ಮಂಜೂರು ಮಾಡಿದೆ. ಜಾಮೀನು ಪ್ರಕ್ರಿಯೆ ಮುಗಿಸಿ ಬೆಂಗಳೂರಿನ ಪರಪ್ಪನ ಅಗ್ರಹಾರ ಕಾರಾಗೃಹದಿಂದ ವಿರೂಪಾಕ್ಷಪ್ಪ ಬಿಡುಗಡೆಯಾಗಿದ್ದಾರೆ. ಹೀಗಾಗಿ ಅವರು ಮಗನ ಚುನಾವಣೆ ಪ್ರಚಾರದಲ್ಲಿ ಭಾಗವಹಿಸಲಿದ್ದಾರೆ.
ಇದನ್ನೂ ಓದಿ: "ಬಿಜೆಪಿಗೆ ಹಿಂದುಳಿದ ವರ್ಗಗಳ ಬಗ್ಗೆ ಕಾಳಜಿ ಇದ್ದರೆ ಶೇ.50 ಮೀಸಲಾತಿ ಮಿತಿಯನ್ನು ತೆರವುಗೊಳಿಸಲಿ"
ಲೋಕಾಯುಕ್ತ ದಾಳಿಗೊಳಗಾಗಿದ್ದರಿಂದ ಮಾಡಾಳ್ ವಿರೂಪಾಕ್ಷಪ್ಪ ಬಿಜೆಪಿ ಟಿಕೆಟ್ ತಪ್ಪಿಸಿಕೊಂಡಿದ್ದರು. ಅವರ ಪುತ್ರ ಮಾಡಾಳ್ ಮಲ್ಲಿಕಾರ್ಜುನ ಬಿಟ್ಟು ಬಿಜೆಪಿ.ಬೇರೆಯವರಿಗೆ ಟಿಕೆಟ್ ನೀಡಿದೆ. ಇದರಿಂದ ಬೇಸರಗೊಂಡಿರುವ ಮಾಡಾಳ್ ಮಲ್ಲಿಕಾರ್ಜುನ ಪಕ್ಷೇತರನಾಗಿ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ.
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.