ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆ ಮತಬೇಟೆ ನಡೆಸಲು ಬಿಜೆಪಿ ಅಬ್ಬರ ಪ್ರಚಾರ ಶುರು ಮಾಡಿದೆ. ಈಗಾಗಲೇ ರಾಜ್ಯಕ್ಕೆ ಆಗಮಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಭರ್ಜರಿ ರೋಡ್ ಶೋ ನಡೆಸಿದ್ದಾರೆ.


COMMERCIAL BREAK
SCROLL TO CONTINUE READING

ನಾಳೆ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಕ್ಕರೆನಾಡು ಮಂಡ್ಯಕ್ಕೆ ಆಗಮಿಸಲಿದ್ದು ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ನಡೆಸಲಿದ್ದಾರೆ. ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನಲ್ಲಿರುವ ಆದಿಚುಂಚನಗಿರಿ ಮಠಕ್ಕೆ ಯೋಗಿ ಆದಿತ್ಯನಾಥ್ ಭೇಟಿ ನೀಡಲಿದ್ದಾರೆ.


ಇದನ್ನೂ ಓದಿ: ವರುಣದಲ್ಲಿ ಸೋಮಣ್ಣ ಪ್ರಚಾರಕ್ಕೆ ಅಡ್ಡಿಪಡಿಸಿದ್ದು ಸರಿಯಲ್ಲ: ಸಿದ್ದರಾಮಯ್ಯ


ಬೆಂಗಳೂರಿನಲ್ಲಿ ಪ್ರಧಾನಿ ಮೋದಿ ರೋಡ್ ಶೋ


ಎಪ್ರಿಲ್ 29ರಂದು ಬೆಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ ನಡೆಸಲಿದ್ದಾರೆ. ಬೆಂಗಳೂರಿನ ಮಾಗಡಿ ರಸ್ತೆ ನೈಸ್ ಜಂಕ್ಷನ್‍ನಿಂದ ಸುಂಕದಕಟ್ಟೆವರೆಗೂ ಮೋದಿ ರೋಡ್ ಶೋ ನಡೆಸಲಿದ್ದಾರೆ. ಅಂದು ರಾತ್ರಿ ರಾಜಭವನದಲ್ಲಿ ಅವರು ವಾಸ್ತವ್ಯ ಹೂಡಲಿದ್ದಾರೆ.


ಮರುದಿನ ಅಂದರೆ ಏಪ್ರಿಲ್ 30ಕ್ಕೆ 3 ಕಡೆ ಸಮಾವೇಶದಲ್ಲಿ ಪ್ರಧಾನಿ ಮೋದಿ ಭಾಗಿಯಾಗಲಿದ್ದಾರೆ. ಕೋಲಾರ, ಚನ್ನಪಟ್ಟಣ ಹಾಗೂ ಮೈಸೂರಿನಲ್ಲಿ ನಡೆಯಲಿರುವ ಸಮಾವೇಶದಲ್ಲಿ ಮೋದಿ ಭಾಗಿಯಾಗಲಿದ್ದು, ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ.


ಇದನ್ನೂ ಓದಿ: ರಾಹುಲ್ ಗಾಂಧಿ ತೋರಿಕೆಗೆ ಲಿಂಗಾಯತ ಮಠಗಳಿಗೆ ಭೇಟಿ: ಸಿಎಂ ಬಸವರಾಜ ಬೊಮ್ಮಾಯಿ


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.