Karnataka Election 2023: ಮೈಸೂರಿನ ಮೈಲಾರಿ ಹೋಟೆಲ್‌ನಲ್ಲಿ ಇಡ್ಲಿ-ದೋಸೆ ಸವಿದ ಪ್ರಿಯಾಂಕಾ ಗಾಂಧಿ
Karnataka Assembly Election 2023: ಮೈಸೂರಿನ ಪ್ರಸಿದ್ಧ ಮೈಲಾರಿ ಹೋಟೆಲ್‌ನಲ್ಲಿ ಕಾಂಗ್ರೆಸ್ ವರಿಷ್ಠೆ ಪ್ರಿಯಾಂಕಾ ಗಾಂಧಿ ಇಡ್ಲಿ-ದೋಸೆ ಸವಿದು ಖುಷಿ ಪಟ್ಟಿದ್ದಾರೆ.
ಮೈಸೂರು: ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಪ್ರಚಾರ ಕೈಗೊಂಡಿರುವ ಎಐಸಿಸಿ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಬುಧವಾರ ಅಗ್ರಹಾರದಲ್ಲಿರುವ 80 ವರ್ಷಗಳಷ್ಟು ಹಳೆಯ ಪ್ರಸಿದ್ಧ ಮೈಲಾರಿ ಹೋಟೆಲ್‌ನಲ್ಲಿ ಇಡ್ಲಿ-ದೋಸೆ ಸವಿದರು.
ಬುಧವಾರ ಬೆಳಗ್ಗೆ ಮೈಸೂರಿನ ಅಗ್ರಹಾರದಲ್ಲಿರುವ ಖ್ಯಾತ ಮೈಲಾರಿ ಹೋಟೆಲ್‌ಗೆ ತೆರಳಿದ ಪ್ರಿಯಾಂಕಾ ಗಾಂಧಿ ಇಡ್ಲಿ ಮತ್ತು ದೋಸೆ ಸವಿದರು. ಇದೇ ವೇಳೆ ಹೋಟೆಲ್‍ನ ಅಡುಗೆ ಕೋಣೆಗೆ ಹೋದ ಪ್ರಿಯಾಂಕಾ ಬಾಣಸಿಗರ ಜೊತೆ ದೋಸೆಯನ್ನು ತಯಾರಿಸಿ ಖುಷಿಪಟ್ಟರು.
ಇದನ್ನೂ ಓದಿ: ಮತಗಟ್ಟೆ ಸಾಮಗ್ರಿ ವಿಚಾರ: ಟೆಂಡರ್‌ನಲ್ಲಿ ಕಪ್ಪುಪಟ್ಟಿಯಲ್ಲಿದ್ದ ಚಿಲುಮೆ ಸಂಸ್ಥೆ ಭಾಗಿ
ಎಸ್.ಟಿ.ಸೋಮಶೇಖರ್ ಮುಂತಾದವರು ಸಾಥ್ ನೀಡಿದರು.
ಇದನ್ನೂ ಓದಿ: "ಸವಾರಿ ಮಾಡುವ ನಿಮ್ಮ ಸರ್ವಾಧಿಕಾರಿ ಧೋರಣೆಯನ್ನು ಕನ್ನಡಿಗರು ಈಗ ಚೆನ್ನಾಗಿ ಅರ್ಥಮಾಡಿಕೊಂಡಿದ್ದಾರೆ"
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.