Karnataka Election 2023: ಬಿಜೆಪಿಯವರು ಕೊಲೆ ಮಾಡಲು ಹೇಸುವುದಿಲ್ಲ- ಸಿದ್ದರಾಮಯ್ಯ ಆಕ್ರೋಶ
Karnataka Assembly Election 2023: ಬಿಜೆಪಿಯವರಿಗೆ ಸೈದ್ಧಾಂತಿಕವಾಗಿ ನಮ್ಮನ್ನು ಎದುರಿಸಲು ಬರಲ್ಲ. ಅದಕ್ಕೆ ಈ ರೀತಿಯ ದಾರಿಯನ್ನು ತುಳಿಯುತ್ತಾರೆ. ಮರ್ಲಿಕಾರ್ಜುನ್ ಖರ್ಗೆ ಕುಟುಂಬಕ್ಕೆ ಹತ್ಯೆಯ ಬೆದರಿಕೆ ಹಾಕಿರುವ ವ್ಯಕ್ತಿಯ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
ಚಿಕ್ಕಮಗಳೂರು: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಕುಟುಂಬದ ಹತ್ಯೆ ಸಂಚಿಗೆ ಸಂಬಂಧಿಸಿದ ಆಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ. ಚಿತ್ತಾಪುರದ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಥೋಡ್ ಬಿಜೆಪಿ ಕಾರ್ಯಕರ್ತ ರವಿ ಎಂಬಾತನ ಜೊತೆ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ಇದೀಗ ಸಖತ್ ಸೌಂಡ್ ಮಾಡ್ತಿದೆ.
ಮಲ್ಲಿಕಾರ್ಜುನ್ ಖರ್ಗೆ ಹೆಂಡತಿ, ಮಕ್ಕಳನ್ನು ಸಾಫ್ ಮಾಡ್ತೇನೆಂದು ಮಣಿಕಂಠ ರಾಥೋಡ್ ಹೇಳಿದ್ದಾರೆಂಬ ಆಡಿಯೋ ವೈರಲ್ ಆಗಿದೆ. ಈ ಬಗ್ಗೆ ಕಾಂಗ್ರೆಸ್ ನಾಯಕರು ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಣಿಕಂಠ ರಾಥೋಡ್ ಹೇಳಿಕೆಯಿಂದ ಮಲ್ಲಿಕಾರ್ಜುನ್ ಖರ್ಗೆ ಕುಟುಂಬ ಆತಂಕದಲ್ಲಿದೆ. ಶೀಘ್ರವೇ ಆತನ ವಿರುದ್ಧ ಕ್ರಮಕೈಗೊಳ್ಳಬೇಕೆಂದು ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಆಗ್ರಹಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಆಡಿಯೋ ತುಣಕನ್ನು ಕಾಂಗ್ರೆಸ್ ಬಿಡುಗಡೆಗೊಳಿಸಿದೆ.
ಇದನ್ನೂ ಓದಿ: "ಬಿಜೆಪಿಗೆ ಮಲ್ಲಿಕಾರ್ಜುನ್ ಖರ್ಗೆಯವರನ್ನು ಕೊಲ್ಲುವಷ್ಟು ದ್ವೇಷ ಏಕೆ? "-ಕಾಂಗ್ರೆಸ್ ಪ್ರಶ್ನೆ
ಬಿಜೆಪಿ ವಿರುದ್ಧ ಸಿದ್ದರಾಮಯ್ಯ ಆಕ್ರೋಶ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಕುಟುಂಬದ ಹತ್ಯೆಗೆ ಸಂಚು ವಿಚಾರವಾಗಿ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ತರೀಕೆರೆಯಲ್ಲಿ ಮಾತನಾಡಿರುವ ಅವರು, ‘ಬಿಜೆಪಿಯವರು ಕೊಲೆ ಮಾಡಲು ಹೇಸುವುದಿಲ್ಲ’ವೆಂದು ಕಿಡಿಕಾರಿದ್ದಾರೆ.
ಬಿಜೆಪಿಯವರಿಗೆ ಸೈದ್ಧಾಂತಿಕವಾಗಿ ನಮ್ಮನ್ನು ಎದುರಿಸಲು ಬರಲ್ಲ. ಅದಕ್ಕೆ ಈ ರೀತಿಯ ದಾರಿಯನ್ನು ತುಳಿಯುತ್ತಾರೆ. ಮರ್ಲಿಕಾರ್ಜುನ್ ಖರ್ಗೆ ಕುಟುಂಬಕ್ಕೆ ಹತ್ಯೆಯ ಬೆದರಿಕೆ ಹಾಕಿರುವ ವ್ಯಕ್ತಿಯ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಇದೇ ವೇಳೆ ಅವರು ಒತ್ತಾಯಿಸಿದ್ದಾರೆ.
ಇದನ್ನೂ ಓದಿ: "ಮೋದಿ ಅವರು ಎಷ್ಟು ಬಾರಿ ಬಂದರೂ ಮತದಾರರ ಮೇಲೆ ಪರಿಣಾಮ ಬೀರಲ್ಲ"
ಸಿದ್ದರಾಮಯ್ಯ ಬಾದಾಮಿಯಿಂದ ಓಡಿ ಹೋಗಿದ್ದಾರೆಂಬ ಪ್ರಧಾನಿ ಮೋದಿ ಹೇಳಿಕೆಗೆ ತಿರುಗೇಟು ನೀಡಿರುವ ಸಿದ್ದರಾಮಯ್ಯ, ‘ನಾನು ಬಾದಾಮಿಯಿಂದ ಓಡಿ ಹೋಗಿಲ್ಲ. ಪಾಪ... ನಾನೇ ಬೇಡ ಅಂತ ನಿಂತಿಲ್ಲ. ಅಲ್ಲಿನ ಜನರು ನಿಲ್ಲಬೇಕು ಅಂತಾ ಮನೆಗೆ ಬಂದು ಕೇಳಿದರು. ಐದಾರು ಬಾರಿ ಮನೆಗೆ ಬಂದು ಒತ್ತಾಯ ಮಾಡಿದ್ರು. ನಾನು ದೂರ ಅಂತಾ ಅಲ್ಲಿಗೆ ಹೋಗಲಿಲ್ಲ’ವೆಂದು ಹೇಳಿದರು.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.