ಮೈಸೂರು: ಬಿಜೆಪಿ ಈಗ ಬಿ.ಎಲ್.ಸಂತೋಷ ಕಪಿಮುಷ್ಟಿಯಲ್ಲಿ ಸಿಲುಕಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಮಂಗಳವಾರ ಮೈಸೂರಿನಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿರುವ ಅವರು ಬಿಜೆಪಿಯ ದಿಗ್ಗಜ ನಾಯಕರಿಗೆ ಟಿಕೆಟ್ ಕೈತಪ್ಪಿರುವ ವಿಚಾರವಾಗಿ ಮಾತನಾಡಿದ್ದಾರೆ.
ಕೆ.ಎಸ್.ಈಶ್ವರಪ್ಪಗೆ ಬಾಯಿ ಸರಿ ಇರಲಿಲ್ಲ. ಹೀಗಾಗಿ ಆತನಿಗೆ ಬಿಜೆಪಿ ನಾಯಕರು ಸರಿಯಾದ ಬುದ್ದಿ ಕಲಿಸಿದ್ದಾರೆ. ಆದರೆ ಜಗದೀಶ್ ಶೆಟ್ಟರ್, ಲಕ್ಷ್ಮಣ ಸವದಿ, ಎಸ್.ಎ.ರಾಮದಾಸ್ ಅವರು ಏನು ತಪ್ಪು ಮಾಡಿದ್ದರು? ಅವರ ಮೇಲೆ ಯಾವ ಆರೋಪಗಳು ಇಲ್ಲ. ಆದರೂ ಟಿಕೆಟ್ ತಪ್ಪಿಸಲಾಗಿದೆ ಎಂದು ಹೇಳಿದರು.
ಇದನ್ನೂ ಓದಿ: Karnataka Election 2023: ಸುಡಾನ್ನಲ್ಲಿ ಸಿಲುಕಿರುವ ಹಕ್ಕಿ ಪಿಕ್ಕಿ ಜನರ ರಕ್ಷಣೆಗೆ ಸಿದ್ದರಾಮಯ್ಯ ಆಗ್ರಹ
ಬಿಜೆಪಿಯ ಈ ಎಲ್ಲಾ ಬೆಳವಣಿಗೆಗೆ ಬಿ.ಎಲ್.ಸಂತೋಷ್ ನೇರ ಕಾರಣ. ಜಗದೀಶ್ ಶೆಟ್ಟರ್ ಅವರು ಬಿ.ಎಲ್.ಸಂತೋಷ ಮೇಲೆ ಮಾಡಿರುವ ಆರೋಪಗಳು ಸರಿ ಇದೆ. ಬಿಜೆಪಿಯ ಲಿಂಗಾಯಿತ ನಾಯಕರಿಗೆ ಟಿಕೆಟ್ ಕೈತಪ್ಪಲು ಬಿ.ಎಲ್.ಸಂತೋಷ್ ಕಾರಣವೆಂದು ಸಿದ್ದರಾಮಯ್ಯ ಹೇಳಿದರು.
ಸಿದ್ದರಾಮಯ್ಯಗೆ ಜ್ವರ!
ಮಾಜಿ ಸಿಎಂ ಸಿದ್ದರಾಮಯ್ಯನವರು ಜ್ವರದಿಂದ ಬಳಲುತ್ತಿದ್ದಾರೆ. ಅವರ ಎಡಗೈಗೆ ಗಾಯವಾಗಿದ್ದು, ನಂಜು ಹೆಚ್ಚಾಗಿ ಜ್ವರ ಬಂದಿದೆ ಎಂದು ತಿಳಿದುಬಂದಿದೆ. ಈ ಬಗ್ಗೆ ಸ್ವತಃ ಸಿದ್ದರಾಮಯ್ಯನವರೇ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: Karnataka Assembly Election: ಶೆಟ್ಟರ್ ಟಿಕೆಟ್ ತಪ್ಪಿಸಲು ನಡೆದಿತ್ತಾ ಷಡ್ಯಂತ್ರ
ಚುನಾವಣಾ ಸಮಯ ಅದು ಇದು ಎಂದು ಹೇಳಿಕೊಂಡು ಬರುವುದಿಲ್ಲ. ಇದು ನಿಸರ್ಗದ ನಿಯಮ. ಇನ್ನೂ ನಾಲ್ಕೈದು ದಿನ ನನಗೆ ಸ್ವಲ್ಪ ವಿಶ್ರಾಂತಿ ಬೇಕು. ಆಮೇಲೆ ಎಲ್ಲಾ ಸರಿ ಹೋಗುತ್ತೇನೆ ಎಂದ ಸಿದ್ದರಾಮಯ್ಯ ಹೇಳಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.