ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆ ಬೆಂಗಳೂರಿನಲ್ಲಿ ಪ್ರಧಾನಿ ಮೋದಿ ನಡೆಸುತ್ತಿರುವ ರೋಡ್ ಶೋಗೆ ಮಾಜಿ ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ‘ನೀಟ್ ಪರೀಕ್ಷಾರ್ಥಿಗಳು ಮತ್ತು ಬೆಂಗಳೂರಿನ ಜನರ ವಿರೋಧವನ್ನು ಧಿಕ್ಕರಿಸಿ ಪ್ರಧಾನಿ ಮೋದಿ ನಾಳೆ ಬೆಂಗಳೂರಿನಲ್ಲಿ ನಡೆಸಲಿರುವ ರೋಡ್ ಶೋ ಅತ್ಯಂತ ಬೇಜವಾಬ್ದಾರಿತನದ ನಡೆ. ಮೋದಿ ಅವರು ಪ್ರಚಾರ ಮಾಡಲಿ ನಮ್ಮ ತಕರಾರು ಇಲ್ಲ. ಆದರೆ ವಿದ್ಯಾರ್ಥಿಗಳಿಗೆ ಆಗುವ ತೊಂದರೆಗೆ ಯಾರು ಹೊಣೆ?’ ಎಂದು ಪ್ರಶ್ನಿಸಿದ್ದಾರೆ.


ಪ್ರಧಾನಿ ಮೋದಿಯವರ ರೋಡ್ ಶೋವನ್ನು 1 ದಿನ ಮುಂದಕ್ಕೆ ಹಾಕಬಹುದು. ಆದರೆ ವಿದ್ಯಾರ್ಥಿಗಳು ಪರೀಕ್ಷೆ ನಾಳೆ ಬರೆಯುತ್ತೇನೆ ಎಂದರೆ ಆಗುತ್ತಾ? ವಿನಾಶಕಾಲೇ ವಿಪರೀತ ಬುದ್ದಿ ಎನ್ನುವ ಹಾಗಿದೆ ಬಿಜೆಪಿ ನಾಯಕರ ಹಠಮಾರಿತನ. ಜನಾಕ್ರೋಶಕ್ಕೆ ಮಣಿದು ರೋಡ್ ಶೋವನ್ನು ರದ್ದುಗೊಳಿಸುವುದು ಬಿಟ್ಟು ಅದನ್ನು ಸಮರ್ಥಿಸಿಕೊಂಡು, ವಿರೋಧಿಸುವವರ ಮೇಲೆ ಎರಗುತ್ತಿರುವುದು ಬಿಜೆಪಿ ನಾಯಕರ ತಲೆಗೇರಿರುವ ಅಧಿಕಾರದ ಮದವನ್ನು ತೋರಿಸುತ್ತದೆ’ ಎಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ.


Special Gift To Modi : ಮೋದಿಗೆ ವಿಶೇಷ ಉಡುಗೊರೆ ನೀಡಲು ಸಜ್ಜಾದ ಹಾವೇರಿ ಬಿಜೆಪಿ ನಾಯಕರು


ವಿರೋಧ ಪಕ್ಷದ ನಾಯಕನಿಗೆ ಹೀಗಾದರೆ, ಸಾಮಾನ್ಯ ಜನರ ಗತಿಯೇನು ಬಿಜೆಪಿ?’ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.


ಚಿತ್ರದುರ್ಗದಲ್ಲಿ ಸಮಾಜವಾದಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಖಿಲೇಶ್ ಯಾದವ್ ಭರ್ಜರಿ ಪ್ರಚಾರ 


COMMERCIAL BREAK
SCROLL TO CONTINUE READING

https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.