ಹಾವೇರಿ: ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಅವರಿಗೆ ಬಹಳ ಕಡಿಮೆ ಅವಧಿ ಸಿಕ್ಕಿದೆ. ಕಡಿಮೆ ಅವಧಿಯಲ್ಲಿ ಬಹಳ ಅಭಿವೃದ್ಧಿ ಮಾಡಿದ್ದಾರೆ. ಇಷ್ಟು ಜನ ಸೇರಿದ್ದೀರಿ ಅಂದರೆ ಅವರು ಮಾಡಿದ ಕೆಲಸ ಗೊತ್ತಾಗುತ್ತದೆ. ಅವರ ಪರವಾಗಿ ನಾನು ಬಂದಿದ್ದೇನೆ. ಜನರಿಗೆ ಒಳ್ಳೆಯದು ಆಗಬೇಕಬೇಕಾದರೆ ಮತ್ತೊಮ್ಮೆ ನೀವು ಅವರನ್ನು ಗೆಲ್ಲಿಸಬೇಕು ಎಂದು ನಟ ಕಿಚ್ಚ ಸುದೀಪ್ ಹೇಳಿದರು.


COMMERCIAL BREAK
SCROLL TO CONTINUE READING

ಸಿಎಂ ಬಸವರಾಜ ಬೊಮ್ಮಾಯಿ ಪರ ಮಂಗಳವಾರ ರೋಡ್‌ ಶೋ ನಡೆಸಿ ಬಹಿರಂಗ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಸುದೀಪ್,  ಮೊದಲ ಬಾರಿಗೆ ನಾನು ಈ ಊರಿಗೆ ಬಂದಿದ್ದೇನೆ. ಬಹಳ ಸುಂದರವಾಗಿ ನನ್ನನ್ನು ಸ್ವಾಗತ ಮಾಡಿದ್ದೀರಿ. ಸಂತ ಶಿಶುನಾಳ ಶರೀಫರ ಭೂಮಿಯಲ್ಲಿ ಪ್ರಚಾರ ಆರಂಭಿಸಿದ್ದು ಬಹಳ ಸಂತಸ ತಂದಿದೆ. ಬೊಮ್ಮಾಯಿಯವರು ನಾಮಕಾವಸ್ಥೆ ಅಲ್ಲ, ಕಾಮಕಾವಸ್ಥೆ. ಅಭಿವೃದ್ಧಿ ಆಗಬೇಕೆಂದರೆ ಮತ್ತೆ ಬೊಮ್ಮಾಯಿಯವರಿಗೆ ಮತ್ತೊಂದು ಅವಕಾಶ ನೀಡಿ ಎಂದು ಹೇಳಿದರು.


ಇದನ್ನೂ ಓದಿ: ಬಿಜೆಪಿಯ 40 ಜನ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ; ಸುದೀಪ್ ಹೆಸರು ಮಿಸ್ಸಿಂಗ್!


ನಿಮ್ಮ ಬೆಂಬಲ ಇದ್ದರೆ ಕೆಲಸ ಆಗುತ್ತದೆ. ನಾನು ಕೆಲಸ ಆಗುವವರ ಪರ ಇರುತ್ತೇನೆ. ನಾನು ಒಬ್ಬ ಭಾರತೀಯನಾಗಿ ಪ್ರಧಾನಿ ಮೋದಿಯವರ ಕೆಲಸವನ್ನು ಮೆಚ್ಚುತ್ತೇನೆ. ವಿದೇಶದಲ್ಲಿ ಭಾರತದ ಬಗ್ಗೆ ಹೆಮ್ಮೆಯಿಂದ ಮಾತನಾಡುತ್ತಾರೆ ಎಂದು ಮೋದಿ ಕೆಲಸಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.


ನಾನು ಸುಮ್ಮನೆ ಪ್ರಚಾರಕ್ಕೆ ಇಳಿಯಲ್ಲ. ಗೆದ್ದೇ ಗೆಲ್ಲುವೆ ಒಂದು ದಿನ, ಗೆಲ್ಲಲೇಬೇಕು ಒಳ್ಳೆತನ. ಬೊಮ್ಮಾಯಿ ಅವರನ್ನು ಗೆಲ್ಲಿಸಿಕೊಂಡು ಹೋಗುತ್ತೇನೆ. ಬೊಮ್ಮಾಯಿ ಅವರಿಗೆ ಮತ್ತೊಮ್ಮೆ ಅವಕಾಶ ನೀಡಿ ಎಂದು ಜನರಲ್ಲಿ ಕಿಚ್ಚ ಸುದೀಪ್ ಮನವಿ ಮಾಡಿದರು. ಈ ಸಂದರ್ಭದಲ್ಲಿ  ಬಿಜೆಪಿ ರಾಷ್ಟೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಹಿರಿಯ ನಾಯಕರಾದ ಗೋವಿಂದ ಕಾರಜೋಳ, ಮುರಗೇಶ್ ನಿರಾಣಿ, ಬಿ.ಸಿ.ಪಾಟೀಲ್ ಸೇರಿದಂತೆ ಇತರರು ಉಪಸ್ಥಿತರಿದ್ದರು.


ಇದನ್ನೂ ಓದಿ: "ಯಾರೆಲ್ಲಾ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ವ್ಯಕ್ತಪಡಿಸಿರುತ್ತಾರೆ ಅಂತಹವರ ಮೇಲೆ ಐಟಿ ದಾಳಿ ಆಗುತ್ತಿದೆ"


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.