Karnataka Assembly Election 2023: ಕರ್ನಾಟಕದಲ್ಲಿ ಹಲವಾರು ದಿನಗಳ ಬಿರುಸಿನ ಪ್ರಚಾರದ ನಂತರ, ಇಂದು ವಿಧಾನಸಭಾ ಚುನಾವಣೆಗೆ ಮತ ಚಲಾವಣೆ ನಡೆಯಲಿದೆ. ಇಂದು ಬೆಳಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದ್ದು, ಸಂಜೆ 6 ಗಂಟೆಯವರೆಗೆ ಮತದಾನ ನಡೆಯಲಿದೆ. ಚುನಾವಣೆ ಮುಗಿದ ನಂತರ ಮೇ 13 ರಂದು ಮತ ಎಣಿಕೆ ನಡೆಯಲಿದ್ದು, ಕರ್ನಾಟಕದಲ್ಲಿ ಯಾರ ಸರ್ಕಾರ ರಚನೆಯಾಗಲಿದೆ ಎಂಬುದು ತಿಳಿಯಲಿದೆ.
ಇದನ್ನೂ ಓದಿ: ಮತದಾನ ಪ್ರಕ್ರಿಯೆ ಆರಂಭಕ್ಕೆ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ
ಈ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಸಿಎಂ ಬಸವರಾಜ ಬೊಮ್ಮಾಯಿ ಆಡಳಿತಾರೂಢ ಬಿಜೆಪಿ ಪರ ಕೊನೆಯವರೆಗೂ ಪ್ರಚಾರ ನಡೆಸಿದ್ದರು. ಇದೇ ವೇಳೆ ಕಾಂಗ್ರೆಸ್, ಜೆಡಿಎಸ್ ಕೂಡ ಚುನಾವಣಾ ಪ್ರಚಾರದಲ್ಲಿ ಸಂಪೂರ್ಣ ಶಕ್ತಿ ತುಂಬಿದ್ದವು.
ಇನ್ನು ಕರ್ನಾಟಕ ಚುನಾವಣೆಗೆ ಮತದಾನ ಆರಂಭವಾಗಿದ್ದು, ಸುಮಾರು 5 ಕೋಟಿಗೂ ಹೆಚ್ಚು ಮತದಾರರು ತಮ್ಮ ಹಕ್ಕು ಚಲಾಯಿಸಲಿದ್ದಾರೆ. ಈಗಾಗಲೇ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ಮತಗಟ್ಟೆ ಕೇಂದ್ರದತ್ತ ಮತದಾರ ಮುಖ ಮಾಡಿದ್ದಾನೆ.
ಕರ್ನಾಟಕದಲ್ಲಿ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು:
ಈ ಬಾರಿಯ ಚುನಾವಣೆಯಲ್ಲಿ 2400 ಪುರುಷ ಅಭ್ಯರ್ಥಿಗಳಿದ್ದರೆ, 186 ಮಂದಿ ಮಹಿಳಾ ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಒಟ್ಟಾರೆ 2586 ಮಂದಿ ಅಖಾಡಕ್ಕೆ ಧುಮುಕಿದ್ದಾರೆ. ಇನ್ನುಳಿದಂತೆ ಬಿಜೆಪಿ, ಕಾಂಗ್ರೆಸ್ ಪಕ್ಷಗಳು ತೊಡೆತಟ್ಟಿನಿಂತಿವೆ. 58,545 ಮತಗಟ್ಟೆಗಳಲ್ಲಿ ಮತದಾನವನ್ನು ನಿಗದಿಪಡಿಸಲಾಗಿದ್ದು, ಒಟ್ಟು 42,48,028 ಹೊಸ ಮತದಾರರು ಚುನಾವಣೆಗೆ ಮತ ಚಲಾಯಿಸಲು ನೋಂದಾಯಿಸಿಕೊಂಡಿದ್ದಾರೆ.
ಇದನ್ನೂ ಓದಿ: ರಾಜಧಾನಿಯ ಮಹಿಳೆಯರಿಗೆ ಪ್ರತೀ ಕ್ಷೇತ್ರದಲ್ಲಿ ಪಿಂಕ್ ಬೂತ್ ನಿರ್ಮಾಣ
37,777 ಸ್ಥಳಗಳಲ್ಲಿರುವ 58,545 ಮತಗಟ್ಟೆಗಳಲ್ಲಿ 5.3 ಕೋಟಿ ಮತದಾರರು ಮತದಾನ ಮಾಡಲಿದ್ದಾರೆ ಎಂದು ಭಾರತೀಯ ಚುನಾವಣಾ ಆಯೋಗ ತಿಳಿಸಿದೆ. ಇದರಲ್ಲಿ 11,71,558 ಯುವ ಮತದಾರರು ಮತ್ತು 12,15,920 80 ಹಿರಿಯ ನಾಗರಿಕ ಮತದಾರರಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.