ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ 136 ಸ್ಥಾನಗಳನ್ನು ಗೆಲ್ಲುವ ಮೂಲಕ ಕಾಂಗ್ರೆಸ್ ಸ್ಪಷ್ಟಬಹುಮತ ಪಡೆದುಕೊಂಡಿದೆ. ಇದರ ಬೆನ್ನಲ್ಲಿಯೇ ಮುಖ್ಯಮಂತ್ರಿ ಯಾರಾಗಬೇಕೆಂದು ವ್ಯಾಪಕ ಚರ್ಚೆಯಾಗುತ್ತಿದೆ. ಸಿದ್ದರಾಮಯ್ಯನವರೇ ಬಹುತೇಕ ಸಿಎಂ ಆಗೋದು ಅಂತಾ ಹೇಳಲಾಗುತ್ತಿದೆ. ಕುರುಬ ಸಮುದಾಯದವರು ಸಹ ಸಿದ್ದರಾಮಯ್ಯರನ್ನೇ ಸಿಎಂ ಮಾಡ್ಬೇಕು ಅಂತಾ ಆಗ್ರಹಿಸಿದ್ದಾರೆ. ಹೀಗಾಗಿ ಕರ್ನಾಟಕದ ಮುಖ್ಯಮಂತ್ರಿ ಯಾರಾಗ್ತಾರೆ ಅನ್ನೋ ಪ್ರಶ್ನೆ ಮೂಡಿದೆ.  


COMMERCIAL BREAK
SCROLL TO CONTINUE READING

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಸಿಎಂ ಮಾಡಬೇಕೆಂದು ಒಕ್ಕಲಿಗ ಮುಖಂಡರು ಸಭೆ ಆಯೋಜಿಸಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಘೋಷಣೆಗೂ ಮೊದಲೇ ಒಕ್ಕಲಿಗ ಮುಖಂಡರಿಂದ ಸಿಎಂ ಸ್ಥಾನಕ್ಕೆ ಒತ್ತಡ ಕೇಳಿಬಂದಿದೆ. ಕಾಂಗ್ರೆಸ್ ಪಕ್ಷದ ವರಿಷ್ಠರ ಮೇಲೆ ಒತ್ತಡ ಹಾಕಲು ಒಕ್ಕಲಿಗರ ಸಮುದಾಯದವರ ಸಭೆ.


ಇದನ್ನೂ ಓದಿ: ಜನರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ: ಸಿದ್ದರಾಮಯ್ಯ


ಬೆಂಗಳೂರಿನ ವಿಜಯನಗರದ ಆದಿಚುಂಚನಗಿರಿ ಶಾಖಾ ಮಠದಲ್ಲಿ ಮಹತ್ವದ ಸಭೆಗೆ ಸಿದ್ಧತೆ ನಡೆದಿದೆ. ಸಭೆಯಲ್ಲಿ ಒಕ್ಕಲಿಗ ಸಮುದಾಯದ ಮುಖಂಡರು ಭಾಗಿಯಾಗಲಿದ್ದಾರೆ. ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರ ನೇತೃತ್ವದಲ್ಲಿ ಸಭೆ ನಡೆಯಲಿದೆ ಅಂತಾ ಹೇಳಲಾಗುತ್ತಿದೆ. ಈ ಸಭೆಯಲ್ಲಿ ಚರ್ಚಿಸಿ ಡಿಕೆಶಿ ಅವರನ್ನೇ ಸಿಎಂ ಮಾಡಬೇಕು ಅಂತಾ ಒಕ್ಕಲಿಗ ಮುಖಂಡರು ಕಾಂಗ್ರೆಸ್ ಹೈಕಮಾಂಡ್‍ಗೆ ಮನವಿ ಸಲ್ಲಿಸುವ ಸಾಧ್ಯತೆ ಇದೆ.


ಈ ನಿಟ್ಟಿನಲ್ಲಿ ಒಕ್ಕಲಿಗ ಸಿಎಂ ಬೆಂಬಲಕ್ಕೆ ನಿಲ್ಲಲು ಒಕ್ಕಲಿಗ ನಾಯಕರು ಸಭೆ ಆಯೋಜಿಸಿದ್ದಾರೆ. ಒಕ್ಕಲಿಗ ಸಮುದಾಯದಿಂದ ಸ್ವಾಮೀಜಿಗಳಿಗೂ ಬೇಡಿಕೆ ವ್ಯಕ್ತವಾಗಿದೆ. ಕಾಂಗ್ರೆಸ್ ಪಕ್ಷದಲ್ಲಿ ಸಿಎಂ ಸ್ಥಾನಕ್ಕೆ ಪೈಪೋಟಿ ಹಿನ್ನೆಲೆ ಸಭೆ ನಡೆಸಲಾಗುತ್ತಿದೆ. ಡಿಕೆಶಿಯನ್ನು ಸಿಎಂ ಮಾಡಬೇಕೆಂದು ಸ್ವಾಮೀಜಿಗಳಿಂದಲೂ ಒತ್ತಡ ಸಾಧ್ಯತೆ ಇದೆ. ಕೆಲವೇ ಕ್ಷಣಗಳಲ್ಲಿ ಆದಿಚುಂಚನಗಿರಿ ಮಠದಲ್ಲಿ ಒಕ್ಕಲಿಗ ಸಮುದಾಯದ ಮುಖಂಡರ ಸಭೆ ನಡೆಯಲಿದೆ.


ಇದನ್ನೂ ಓದಿ: ಇದು ಕಾಂಗ್ರೆಸ್ ಗೆಲುವಲ್ಲ, ಕರ್ನಾಟಕ ಮತ್ತು ಕನ್ನಡಿಗರ ಗೆಲುವು: ಸಿದ್ದರಾಮಯ್ಯ


ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಆಧ್ಯಾತ್ಮ, ಜೀವನಶೈಲಿ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.