ಬೆಂಗಳೂರು: ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರ ಆಯ್ಕೆಯನ್ನು ಎಐಸಿಸಿ ಅಧ್ಯಕ್ಷರ ನಿರ್ಧಾರಕ್ಕೆ ಬಿಡಲು ಕಾಂಗ್ರೆಸ್ ಶಾಸಕಾಂಗ ಪಕ್ಷವು ಸರ್ವಾನುಮತದಿಂದ ನಿರ್ಧರಿಸಿದೆ. ಬೆಂಗಳೂರಿನ ಖಾಸಗಿ ಹೋಟೆಲ್‍ನಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಈ ತೀರ್ಮಾನಕ್ಕೆ ಬರಲಾಗಿದೆ.


COMMERCIAL BREAK
SCROLL TO CONTINUE READING

ಸಿಎಲ್‍ಪಿ ನಾಯಕನ ಆಯ್ಕೆ ಕಗ್ಗಂಟು ಬಗೆಹರಿದಿಲ್ಲ. ಈ ಹಿನ್ನೆಲೆ ಸಿಎಂ ಆಯ್ಕೆ ವಿಚಾರ ಇದೀಗ ದೆಹಲಿ ಅಂಗಳಕ್ಕೆ ತಲುಪಿದೆ. ಶಾಸಕಾಂಗ ಸಭೆಯಲ್ಲಿ ಡಿ.ಕೆ.ಶಿವಕುಮಾರ್ ಹೊಸ ಪಟ್ಟು ಹಿಡಿದಿದ್ದಾರೆ. ಸಿದ್ದರಾಮಯ್ಯ ವಿರುದ್ಧ ಅವರು ನಿರ್ಣಯ ಮಂಡಿಸಿದ್ದಾರೆ. ಅಧಿಕಾರ ಹಂಚಿಕೆ ಸೂತ್ರಕ್ಕೆ ಡಿಶಿಕೆ ಒಪ್ಪಿಗೆ ನೀಡಿಲ್ಲ. ಸಿದ್ದರಾಮಯ್ಯ ಮತ್ತು ನಿಮಗೂ ಸಮಾನ ಅವಕಾಶ ಎಂದಿದ್ದಕ್ಕೆ ಡಿಕೆಶಿ ಒಪ್ಪಿಗೆ ನೀಡಿಲ್ಲ.


ಇದನ್ನೂ ಓದಿ: 'ಅಂಬಲಿ ಹಳಸಿತು ಕಂಬಳಿ ಬಿಸಿತಲೆ ಪರಾಕ್' ಭವಿಷ್ಯವಾಣಿ ನಿಜವಾಯಿತಾ...!


ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರ ಆಯ್ಕೆ ವಿಚಾರ ಇದೀಗ ದೊಡ್ಡ ತಲೆನೋವಾಗಿದೆ. ಕಾಂಗ್ರೆಸ್ ಹೈಕಮಾಂಡ್ ಅಂತಿಮವಾಗಿ ಯಾರನ್ನು ಆಯ್ಕೆ ಮಾಡುತ್ತಾರೆ ಅನ್ನೋದು ತೀವ್ರ ಕೂತುಹಲ ಮೂಡಿಸಿದೆ. ಮುಂದಿನ ಸಿಎಂ ಡಿ.ಕೆ.ಶಿವಕುಮಾರ್ ಅಥವಾ ಸಿದ್ದರಾಮಯ್ಯರಾ ಅನ್ನೋ ಪ್ರಶ್ನೆ ಮೂಡಿದೆ.


ಇತ್ತ ತಮಗೆ ಡಿ.ಕೆ.ಶಿವಕುಮಾರ್ ಅವರೇ ಸಿಎಂ ಆಗಬೇಕೆಂದು ಡಿಕೆಶಿ ಅಭಿಮಾನಿಗಳು ಮತ್ತು ಸಿದ್ದರಾಮಯ್ಯನವರೇ ಸಿಎಂ ಆಗಬೇಕೆಂದು ಸಿದ್ದು ಅಭಿಮಾನಿಗಳು ಪಟ್ಟು ಹಿಡಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಸಿದ್ದರಾಮಯ್ಯರ ಫೋಟೋ ಹಿಡಿದುಕೊಂಡು ಸಿದ್ದು ಸಿಎಂ ಎಂದು ಅಭಿಮಾನಿಗಳು ಘೋಷಣೆ ಕೂಗುತ್ತಿದ್ದರೆ, ಡಿಕೆಶಿ ಸಿಎಂ, ಡಿಕೆಶಿ ಸಿಎಂ ಎಂದು ಡಿಕೆಶಿ ಬೆಂಬಲಿಗರು ಘೋಷಣೆ ಕೂಗುತ್ತಿದ್ದಾರೆ. ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಎಲ್ಲಾ ಶಾಸಕರು ಭಾಗಿಯಾಗಿದ್ದಾರೆ. ಒಂದು ಕಡೆ ಸಿಎಲ್‍ಪಿ ಮೀಟಿಂಗ್ ನಡೆಯುತ್ತಿದ್ದರೆ, ಮತ್ತೊಂದು ಕಡೆ  ಸಿದ್ದರಾಮಯ್ಯ ‌ಹಾಗೂ ಡಿಕೆಶಿ ಅಭಿಮಾನಿಗಳು ಘೋಷಣೆ ಕೂಗುತ್ತಾ ಗಲಾಟೆ ಎಬ್ಬಿಸಿದ್ದಾರೆ.  


ಇದನ್ನೂ ಓದಿ: ಗುರುವಾರದಂದು ರಾಜ್ಯದ ನೂತನ ಮುಖ್ಯಮಂತ್ರಿ ಪ್ರಮಾಣವಚನ !


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.