Karnataka Vidhan Sabha Election Results 2023: ಕರ್ನಾಟಕ ವಿಧಾನಸಭೆಗೆ ಮೇ 10 ರಂದು ನಡೆದ ಮತದಾನದ ಫಲಿತಾಂಶ ಇಂದು ಬಹುತೇಕ ಪ್ರಕಟಗೊಂಡಿದೆ. ರಾಜ್ಯದಲ್ಲಿ ಸಂಪೂರ್ಣ ಬಹುಮತದ ಕಾಂಗ್ರೆಸ್ ಸರ್ಕಾರ ಬರುವುದು ಬಹುತೇಕ ಖಚಿತವಾಗಿದೆ. ಏತನ್ಮಧ್ಯೆ ಚುನಾವಣಾ ಫಲಿತಾಂಶಗಳ ಕುರಿತು ಬಿಎಸ್ ಯಡಿಯೂರಪ್ಪ ತಮ್ಮ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. 

COMMERCIAL BREAK
SCROLL TO CONTINUE READING

ಇಂದು ಪ್ರಕಟಗೊಂಡ ಫಲಿತಾಂಶಗಳಿಗೆ ತನ್ನ ಮೊದಲ ಪ್ರತಿಕ್ರಿಯೆ ನೀಡಿರುವ ಬಿ.ಎಸ್ ಯಡಿಯೂರಪ್ಪ, ನಾವು ಜನರ ಮತದಾನದ ಹಕ್ಕನ್ನು ಗೌರವಿಸುತ್ತೇವೆ ಎಂದಿದ್ದಾರೆ. ಈಗ ನಾವು ಪ್ರತಿಪಕ್ಷದ ಪಾತ್ರ ನಿರ್ವಹಿಸುತ್ತೇವೆ ಮತ್ತು ಕಾರ್ಯಕರ್ತರೊಂದಿಗೆ ಕುಳಿತು ಎಲ್ಲಿ ತಪ್ಪು ನಡೆದಿದೆ ಎಂಬುದರ ಕುರಿತು ವಿಚಾರ ಮಂಥನ ನಡೆಸುತ್ತೇವೆ. ಬಿಜೆಪಿ ಕಾರ್ಯಕರ್ತರು ಪ್ರಾಮಾಣಿಕತೆ ಮತ್ತು ಕಠಿಣ ಪರಿಶ್ರಮದಿಂದ ಕೆಲಸ ಮಾಡಿದ್ದಾರೆ ಎಂದು ಅವರು ಹೇಳಿದ್ದಾರೆ.


ಬಿಜೆಪಿಗೆ ಸೋಲು ಗೆಲುವು ದೊಡ್ಡ ವಿಷಯವಲ್ಲ ಎಂದು ಮಾಜಿ ಸಿಎಂ ಈ ಸಂದರ್ಭದಲ್ಲಿ ಹೇಳಿದ್ದಾರೆ. ರಾಜ್ಯದಲ್ಲಿ ಕೇವಲ ಎರಡು ಸ್ಥಾನಗಳಿಂದ ಆರಂಭವಾದ ಬಿಜೆಪಿ ಪಕ್ಷ ಇಂದು ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಕಾರ್ಯಕರ್ತರು ಹುಮ್ಮಸ್ಸು ಕಳೆದುಕೊಳ್ಳುವ ಅವಶ್ಯಕತೆ ಇಲ್ಲ.  ನಮ್ಮ ಸೋಲಿನ ಮರುಪರಿಶೀಲನೆ ಮಾಡುತ್ತೇವೆ. ನಮಗೆ ಮತ ಹಾಕಿದ ಸಾರ್ವಜನಿಕರಿಗೆ ಧನ್ಯವಾದ ಅರ್ಪಿಸುತ್ತೇವೆ. ಈ ಫಲಿತಾಂಶದ ಬಗ್ಗೆ ಪಕ್ಷದ ಕಾರ್ಯಕರ್ತರು ಆತಂಕಪಡುವ ಅಗತ್ಯವಿಲ್ಲ ಎಂದು ಅವರು ಹೇಳಿದ್ದಾರೆ.


ಬಂಪರ್ ಗೆಲುವಿನತ್ತ ಕಾಂಗ್ರೆಸ್
ಕರ್ನಾಟಕ ಚುನಾವಣೆಯ ಮತ ಎಣಿಕೆ ಕಾರ್ಯ ನಡೆಯುತ್ತಿದೆ. ಇದರಲ್ಲಿ ಕಾಂಗ್ರೆಸ್ ಗೆಲುವು ಬಹುತೇಕ ಖಚಿತವಾಗಿದೆ. ಇತ್ತೀಚಿನ ಟ್ರೆಂಡ್ ಗಳನ್ನು ಗಮನಿಸುವುದಾದರೆ, ಕಾಂಗ್ರೆಸ್ ಪಕ್ಷ 136 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದರೆ, ಬಿಜೆಪಿ 64 ಸ್ಥಾನಗಳಲ್ಲಿ ಮುನ್ನಡೆಯನ್ನು ಕಾಯ್ದುಕೊಂಡಿದೆ.  ಜೆಡಿಎಸ್ 20 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.


ಇದನ್ನೂ ಓದಿ-Karantaka Election Results 2023: ಕಾಂಗ್ರೆಸ್ ಮುಖಂಡರಿಂದ ಗದಾಧಾರಿ ರಾಹುಲ್ ಚಿತ್ರ ಹಂಚಿಕೆ, ಬಜರಂಗಬಳಿ ನಮ್ ಜೊತೆಗೆ ಎಂದ ಛತ್ತೀಸ್ಗಡ್ ಮುಖ್ಯಮಂತ್ರಿ


ಸಿಎಂ ಬೊಮ್ಮಾಯಿ ಹೇಳಿದ್ದೇನು?
ಇದಕ್ಕೂ ಮೊದಲು ಚುನಾವಣಾ ಫಲಿತಾಂಶಗಳ ಕುರಿತು ತನ್ನ ಪ್ರತಿಕ್ರಿಯೆ ನೀಡಿದ್ದ ಸಿಎಂ ಬಸವರಾಜ ಬೊಮ್ಮಾಯಿ ಅವರು, ಎಲ್ಲಾ ಫಲಿತಾಂಶಗಳು ಹೊರಬಿದ್ದ ನಂತರ ನಾವು ವಿವರವಾದ ವಿಶ್ಲೇಷಣೆ ಮಾಡುತ್ತೇವೆ ಮತ್ತು ರಾಷ್ಟ್ರೀಯ ರಾಜಕೀಯ ಪಕ್ಷವಾಗಿ ನಾವು ವಿವಿಧ ಹಂತಗಳಲ್ಲಿ ನಮ್ಮ ನ್ಯೂನತೆಗಳನ್ನು ನೋಡುತ್ತೇವೆ ಮತ್ತು ಅವುಗಳನ್ನು ಸರಿಪಡಿಸುತ್ತೇವೆ ಎಂದು ಹೇಳಿದ್ದಾರೆ. ಅವುಗಳನ್ನು ಸರಿಪಡಿಸಿ ಲೋಕಸಭೆ ಚುನಾವಣೆಯಲ್ಲಿ ಮತ್ತೆ ಹಿಂತಿರುಗಿಸುತ್ತೇವೆ ಎಂದು ಅವರು ಹೇಳಿದ್ದಾರೆ.


ಇದನ್ನೂ ಓದಿ-Karnataka Election Result 2023: 38 ವರ್ಷಗಳ ಹಳೆ ಸಂಪ್ರದಾಯವನ್ನು ಮುರಿಯಲು ವಿಫಲವಾದ ಬಿಜೆಪಿ


ಪ್ರಧಾನಿ ಮೋದಿ ಮತ್ತು ಬಿಜೆಪಿ ಕಾರ್ಯಕರ್ತರು ಸಾಕಷ್ಟು ಪ್ರಯತ್ನ ಮಾಡಿದರೂ ನಮ್ಮ ಛಾಪು ಬಿಡಲು ನಮ್ಮಿಂದ ಸಾಧ್ಯವಾಗಿಲ್ಲ ಎಂಬುದನ್ನು ಅವರು ಒಪ್ಪಿಕೊಂಡಿದ್ದಾರೆ. ಬಿಜೆಪಿ ಗೆಲುವಿನ ವಿಶ್ವಾಸವಿದೆ ಎಂದು ಬೊಮ್ಮಾಯಿ ಈ ಹಿಂದೆ ಹೇಳಿದ್ದರು. ಕರ್ನಾಟಕದ 224 ಸದಸ್ಯ ಬಲದ ವಿಧಾನಸಭೆಗೆ ಮೇ 10 ರಂದು ಮತದಾನ ನಡೆದಿದ್ದು, ಇಂದು ಫಲಿತಾಂಶ ಪ್ರಕಟವಾಗಿದೆ.


ಇದನ್ನೂ ನೋಡಿ-


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ