ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ 136 ಸ್ಥಾನಗಳನ್ನು ಗೆಲ್ಲುವ ಮೂಲಕ ಭರ್ಜರಿ ಬಹುಮತ ಸಾಧಿಸಿರುವ ಕಾಂಗ್ರೆಸ್ ಇದೀಗ ಸಿಎಂ ಆಯ್ಕೆ ವಿಚಾರದಲ್ಲಿ ಮಹತ್ವದ ಹೆಜ್ಜೆ ಇಡುತ್ತಿದೆ. ಮುಂದಿನ ಮುಖ್ಯಮಂತ್ರಿ ಯಾರಾಗಬೇಕು..? ಸಿದ್ದರಾಮಯ್ಯರಾ ಅಥವಾ ಡಿಕೆಶಿನಾ ಅನ್ನೋ ಪಶ್ನೆ ಮೂಡಿದೆ. ಸಿಎಂ ಆಯ್ಕೆ ವಿಚಾರವಾಗಿ ಬೆಂಗಳೂರಿನಲ್ಲಿ ಕಾಂಗ್ರೆಸ್ ಸಮಿತಿ ಸಭೆ ನಡೆಸುತ್ತಿದೆ.  


COMMERCIAL BREAK
SCROLL TO CONTINUE READING

ಸಿಎಂ ಆಯ್ಕೆ ವಿಚಾರವಾಗಿ ಕಾಂಗ್ರೆಸ್ ಅಧಿನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಜೊತೆ ಸಭೆ ನಡೆಸಲು AICC ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ನಿರ್ಧರಿಸಿದ್ದಾರೆ. ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ನಡುವೆ ಪೈಪೋಟಿ ನಡೆಯುತ್ತಿದೆ.


ಇದನ್ನೂ ಓದಿ: Karnataka Election Result 2023: ಡಿಕೆಶಿ ಸಿಎಂ ಮಾಡಲು ಒಕ್ಕಲಿಗ ಮುಖಂಡರ ಸಭೆ..!


ಈ ಹಿನ್ನೆಲೆ ರಾಹುಲ್ ಗಾಂಧಿ ಹಾಗೂ ಸೋನಿಯಾ ಗಾಂಧಿಯವರ ನಿರ್ಧಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಕಾಯುತ್ತಿದ್ದಾರೆ. ಸದ್ಯ ಸಭೆಗೆ ಸೋನಿಯಾ ಹಾಗೂ ರಾಹುಲ್ ಬಳಿ ಖರ್ಗೆ ಸಮಯ ಕೇಳಿದ್ದಾರಂತೆ. ಸದ್ಯ ಸೋನಿಯಾ ಗಾಂಧಿ ಹಾಗೂ ಪ್ರಿಯಾಂಕ ಅವರು ಹಿಮಾಚಲ್ ಪ್ರದೇಶದ ಶಿಮ್ಲಾದಲ್ಲಿದ್ದಾರಂತೆ. ಒಂದು ವೇಳೆ ನೇರ ಸಭೆ ಸಾಧ್ಯವಾಗದ್ದಲ್ಲಿ ದೂರವಾಣಿ ಮೂಲಕ ಖರ್ಗೆ ವರಿಷ್ಟರ ನಿರ್ಧಾರ ಕೇಳಲಿದ್ದಾರೆಂದು ತಿಳಿದುಬಂದಿದೆ.


ಕೆಪಿಸಿಸಿ ಅಧ್ಯಕ್ಷರಾಗಿ ಉತ್ತಮ ಕೆಲಸ ಮಾಡಿರುವ ಡಿ.ಕೆ.ಶಿವಕುಮಾರ್ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲು ಸಾಕಷ್ಟು ಶ್ರಮಿಸಿದ್ದಾರೆ. ಹೀಗಾಗಿ ಮುಖ್ಯಮಂತ್ರಿ ಆಗಬೇಕೆಂಬ ಬಯಕೆಯನ್ನು ವ್ಯಕ್ತಪಡಿಸಿದ್ದಾರಂತೆ. ಅದೇ ರೀತಿ ಸಿದ್ದರಾಮಯ್ಯ ಸಹ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲು ಸಾಕಷ್ಟು ಶ್ರಮಿಸಿದ್ದು ಮತ್ತೊಮ್ಮೆ ಸಿಎಂ ಆಗುವ ಭಯಕೆ ವ್ಯಕ್ತಪಡಿಸಿದ್ದಾರೆ. ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ನಡುವೆ ಸಿಎಂ ಗಾದಿಗಾಗಿ ಭರ್ಜರಿ ಪೈಪೋಟಿ ನಡೆಯುತ್ತಿದೆ. ಹೀಗಾಗಿ ಮುಂದಿನ ಸಿಎಂ ಯಾರಾಗುತ್ತಾರೆ ಅನ್ನೋ ಪ್ರಶ್ನೆ ಮೂಡಿದೆ.


ಇದನ್ನೂ ಓದಿ: Karnataka Election 2023: ಸಿದ್ದರಾಮಯ್ಯ-ಡಿಕೆಶಿಗೆ ಆಲ್ ದಿ ಬೆಸ್ಟ್ ಎಂದ ಹಂಗಾಮಿ ಸಿಎಂ ಬೊಮ್ಮಾಯಿ


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.