ತುಮಕೂರು: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಹೀನಾಯ ಸೋಲಿಗೆ ನಳೀನ್ ಕುಮಾರ್ ಕಟೀಲ್ ಮತ್ತು ಬಿ.ಎಲ್.ಸಂತೋಷ್ ಹೊಣೆಗಾರರಲ್ಲವೆಂದು ಶಿಕಾರಿಪುರ ಶಾಸಕ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.


COMMERCIAL BREAK
SCROLL TO CONTINUE READING

ತುಮಕೂರಿನ ಸಿದ್ಧಗಂಗಾ ಮಠಕ್ಕೆ ಸೋಮವಾರ ಭೇಟಿ ನೀಡಿದ್ದ ಅವರು, ‘ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪನವರು ಇನ್ನೂ ಗಟ್ಟಿಯಿದ್ದಾರೆ. ರಾಜ್ಯದಲ್ಲಿ ಬಿಜೆಪಿಯನ್ನು ಮತ್ತೆ ಸಂಘಟನೆ ಮಾಡಲಿದ್ದಾರೆ. ಬಿಜೆಪಿ ನಾಯಕರು ಸೋಲಿನ ಬಗ್ಗೆ ಅವಲೋಕನ ಮಾಡಲಿದ್ದಾರೆ. ಪಕ್ಷದ ಹಿನ್ನಡೆಗೆ ಸಾಕಷ್ಟು ಕಾರಣಗಳಿವೆ, ಇದರ ಬಗ್ಗೆ ಚರ್ಚಿಸುತ್ತೇವೆ’ ಎಂದು ಹೇಳಿದರು.


ಇದನ್ನೂ ಓದಿ: Karnataka Assembly election: ಹಸ್ತದ ಗುರುತು ಹೇರ್ ಕಟಿಂಗ್ ಮಾಡಿಸಿಕೊಂಡ ಕೈ ಅಭಿಮಾನಿ


ಸಿದ್ಧಗಂಗಾ ಮಠಕ್ಕೆ ಕುಟುಂಬ ಸಮೇತ ವಿಜಯೇಂದ್ರ ಭೇಟಿ


ತುಮಕೂರಿನ ಸಿದ್ಧಗಂಗಾ ಮಠಕ್ಕೆ ಬಿ.ವೈ.ವಿಜಯೇಂದ್ರ ತಮ್ಮ ಕುಟುಂಬ ಸಮೇತ ಸೋಮವಾರ ಭೇಟಿಯಾಗಿದ್ದಾರೆ. ಶಾಸಕರಾಗಿ ಗೆದ್ದ ಬಳಿಕ ಮೊದಲ ಸಲ ಶ್ರೀಮಠಕ್ಕೆ ಭೇಟಿ ನೀಡಿ ದರ್ಶನ ಪಡೆದುಕೊಂಡಿದ್ದಾರೆ.


ಪತ್ನಿ, ಪುತ್ರಿಯ ಜೊತೆಗೆ ಶ್ರೀಮಠಕ್ಕೆ ಆಗಮಿಸಿದ ವಿಜಯೇಂದ್ರಗೆ ನಗರ ಶಾಸಕ ಜ್ಯೋತಿ ಗಣೇಶ್ ಸಾಥ್ ನೀಡಿದ್ದಾರೆ. ತುಮಕೂರಿನ ಕ್ಯಾತ್ಸಂದ್ರದಲ್ಲಿರುವ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿದ ವಿಜಯೇಂದ್ರ ಕುಟುಂಬಸ್ಥರು ಲಿಂಗೈಕ್ಯ ಶಿವಕುಮಾರ ಶ್ರೀಗಳ ಗದ್ದುಗೆ ದರ್ಶನ ಪಡೆದುಕೊಂಡರು.


ಇದನ್ನೂ ಓದಿ: Karnataka Elections 2023: ಸಿಎಂ ಪಟ್ಟಕ್ಕಾಗಿ ಸಿದ್ದರಾಮಯ್ಯ ಮತ್ತು ಡಿಕೆಶಿ ಬೆಂಬಲಿಗರ ಪಟ್ಟು..!


‘ನನ್ನ ಮೊದಲ ಚುನಾವಣೆಯಲ್ಲಿಯೇ ಶಿಕಾರಿಪುರ ಜನರು ಆರ್ಶೀವದಿಸಿದ್ದಾರೆ. ನಮ್ಮ ಕಾರ್ಯಕ್ರತರು ಹಗಲು-ರಾತ್ರಿ ಶ್ರಮ ಪಟ್ಟು ವಿಧಾನಸಭೆಗೆ ಕಳುಹಿಸಿದ್ದಾರೆ. ಯಾವುದೇ ಶುಭ ಕಾರ್ಯಕ್ಕೂ ಮುನ್ನ ಸಿದ್ಧಗಂಗಾ ಮಠಕ್ಕೆ ಭೇಟಿ ಕೊಡುತ್ತೇನೆ. ಪೂಜ್ಯರ ಆಶಿರ್ವಾದ ಪಡೆಯೋದು ನಮ್ಮ ಧರ್ಮ, ಬಂದು ಆಶಿರ್ವಾದ ಪಡೆದಿದ್ದೇನೆ. ಯಡಿಯೂರು ದೇವಸ್ಥಾನಕ್ಕೆ ಹೋಗಿ ಪೂಜೆ ಸಲ್ಲಿಸುತ್ತೇನೆ’ ಎಂದು ಇದೇ ವೇಳೆ ವಿಜಯೇಂದ್ರ ಹೇಳಿದರು.


ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಆಧ್ಯಾತ್ಮ, ಜೀವನಶೈಲಿ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.