Karnataka Assembly Election 2023 Result: ಕರ್ನಾಟಕದ 224 ವಿಧಾನಸಭಾ ಸ್ಥಾನಗಳಿಗೆ ಮತ ಎಣಿಕೆ ಕಾರ್ಯ ಮುಂದುವರೆದಿಗೆ, ಆರಂಭಿಕ ಟ್ರೆಂಡ್‌ನಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ. ಕಾಂಗ್ರೆಸ್ ಪಕ್ಷದ ಉದಯದ ನಡುವೆಯೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆ (ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆ) ಕುರಿತು ಇದೀಗ ಭಾರಿ ಚರ್ಚೆಯಾಗುತ್ತಿದೆ. ರಾಹುಲ್ ಗಾಂಧಿ ತಮ್ಮ ಯಾತ್ರೆಯವೇಳೆ ಭೇಟಿ ನೀಡಿದ ಎಲ್ಲ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಉತ್ತಮ ಪ್ರದರ್ಶನ ತೋರುತ್ತಿದೆ.


COMMERCIAL BREAK
SCROLL TO CONTINUE READING

ರಾಹುಲ್ ಗಾಂಧಿ ಅವರು 51 ವಿಧಾನಸಭಾ ಕ್ಷೇತ್ರಗಳಲ್ಲಿ ಯಾತ್ರೆ ನಡೆಸಿದ್ದಾರೆ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಭಾರತ್ ಜೋಡೋ ಯಾತ್ರೆಯ ವೇಳೆ ಕರ್ನಾಟಕದ 224 ವಿಧಾನಸಭಾ ಸ್ಥಾನಗಳ ಪೈಕಿ 51 ಸ್ಥಾನಗಳನ್ನು ಕವರ್ ಮಾಡಿದ್ದರು, ಈ 51 ಸ್ಥಾನಗಳ ಪೈಕಿ 32 ಸ್ಥಾನಗಳಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ. ಅರ್ಥಾತ್ ಶೇ.63 ಸ್ಥಾನಗಳಲ್ಲಿ ರಾಹುಲ್ ಗಾಂಧಿ ಭೇಟಿಯ ಲಾಭ ಕಾಂಗ್ರೆಸ್ ಗೆ ಸಿಕ್ಕಿದೆ ಎಂದೇ ವಿಶ್ಲೇಶಿಸಲಾಗುತ್ತಿದೆ. ಇದೇ ವೇಳೆ, ಆರಂಭಿಕ ಟ್ರೆಂಡ್‌ಗಳಲ್ಲಿ, ರಾಹುಲ್ ಭೇಟಿ ನೀಡಿದ 19 ಸ್ಥಾನಗಳಲ್ಲಿ ಕಾಂಗ್ರೆಸ್ ಪಕ್ಷವು ಹಿನ್ನಡೆ ಅನುಭವಿಸುತ್ತಿದೆ.


ಇದನ್ನೂ ಓದಿ-Tumkur Assembly Election Result 2023: ತುಮಕೂರು ನಗರದಲ್ಲಿ 11ನೇ ಸುತ್ತಿನ ಮತಎಣಿಕೆ ಮುಕ್ತಾಯ: 701 ಮತಗಳಿಂದ ಕಾಂಗ್ರೆಸ್ ಮುನ್ನಡೆ


ಒಟ್ಟು 21 ದಿನಗಳ ಕಾಲ ಕರ್ನಾಟಕ ಪ್ರವಾಸ ಕೈಗೊಂಡಿದ್ದ ರಾಹುಲ್ ಗಾಂಧಿ 
ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆಯನ್ನು ಕನ್ಯಾಕುಮಾರಿಯಿಂದ ಆರಂಭಿಸಿ 3 ತಿಂಗಳಲ್ಲಿ ಸುಮಾರು 4000 ಕಿ.ಮೀ ಕ್ರಮಿಸಿ ಕಾಶ್ಮೀರ ತಲುಪಿದ್ದಾರೆ.  ಈ ಪೈಕಿ ರಾಹುಲ್ ಗಾಂಧಿ ಅವರು 21 ದಿನಗಳನ್ನು ಕರ್ನಾಟಕದಲ್ಲಿ ಕಳೆದಿದ್ದಾರೆ ಮತ್ತು ಏಪ್ರಿಲ್ 30 ರಿಂದ ಅಕ್ಟೋಬರ್ 19 ರವರೆಗೆ ಕರ್ನಾಟಕದಲ್ಲಿ ಪ್ರಯಾಣ ನಡೆಸಿದ್ದಾರೆ. ಈ ಸಮಯದಲ್ಲಿ, ಅವರು ಪ್ರತಿದಿನ ಸುಮಾರು 25 ಕಿಲೋಮೀಟರ್ ಪ್ರಯಾಣಿಸಿ ಮತ್ತು ಒಟ್ಟು 511 ಕಿಲೋಮೀಟರ್ಗಳನ್ನು ಕ್ರಮಿಸಿದ್ದರು.


ಇದನ್ನೂ ಓದಿ-Chikkamagalore Vidhan Sabha Chunav: ಕಾಫಿನಾಡು ಚಿಕ್ಕಮಗಳೂರಿನಲ್ಲಿ ಕೈ ಕಲಿಗಳದ್ದೇ ಮೇಲು ಗೈ!


ಕರ್ನಾಟಕದಲ್ಲಿ ಕಾಂಗ್ರೆಸ್ ಗೆ 121 ಸ್ಥಾನಗಳಲ್ಲಿ ಮುನ್ನಡೆ 
ಕರ್ನಾಟಕ ವಿಧಾನಸಭಾ ಚುನಾವಣೆ 2023 ರ ಮತ ಎಣಿಕೆಯಲ್ಲಿ ಕಾಂಗ್ರೆಸ್ ಬಹುಮತದ ಗಡಿ ದಾಟಿದೆ ಮತ್ತು ಬೆಳಗ್ಗೆ 12 ಗಂಟೆಯ ಸುಮಾರಿಗೆ ಪಕ್ಷವು 121 ಸ್ಥಾನಗಳಲ್ಲಿ ಮುನ್ನಡೆ ಸಾಧಿಸುವಲ್ಲಿ ಯಶಸ್ವಿಯಾಗಿದೆ. ಇದೇ ವೇಳೆ ಆಡಳಿತಾರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸಾಕಷ್ಟು ನಷ್ಟ ಅನುಭವಿಸಿದೆ ಮತ್ತು ಪಕ್ಷವು 72 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಇನ್ನೊಂದೆಡೆ ಜೆಡಿಎಸ್ 25 ಸ್ಥಾನಗಳಲ್ಲಿ ಆರಂಭಿಕ ಮುನ್ನಡೆ ಸಾಧಿಸಿದೆ. ಮೇ 10 ರಂದು ಕರ್ನಾಟಕದಲ್ಲಿ 224 ಸ್ಥಾನಗಳಿಗೆ ಮತದಾನ ಪ್ರಕ್ತಿಯೇ ನಡೆದಿತ್ತು ಎಂಬುದು ಇಲ್ಲಿ ಉಲ್ಲೇಖನೀಯ.


ಇದನ್ನೂ ನೋಡಿ-


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ