ಬಿಜೆಪಿ ಹರಕೆಯ ಕುರಿ vs ವರುಣಾದ ಮನೆ ಮಗನ ನಡುವಿನ ಚುನಾವಣೆ: ಸಿದ್ದರಾಮಯ್ಯ
Karnataka Assembly Elections 2023: ವರುಣಾ ಕ್ಷೇತ್ರದಲ್ಲಿ 55 ಸಾವಿರ ಲಿಂಗಾಯಿತ ಮತದಾರರಿದ್ದಾರೆ. ಕುರುಬರು 35 ಸಾವಿರ, ಪರಿಶಿಷ್ಟ ಜಾತಿ 43 ಸಾವಿರ, ಪರಿಶಿಷ್ಟ ಪಂಗಡ 23 ಸಾವಿರ, ಒಕ್ಕಲಿಗರು 12 ಸಾವಿರ ಹಾಗೂ ಇತರ ಹಿಂದುಳಿದ ವರ್ಗಗಳ ಸಮುದಾಯದವರು 12 ಸಾವಿರ ಇದ್ದಾರೆ.
ಬೆಂಗಳೂರು: ಬಿಜೆಪಿಯ ಹರಕೆಯ ಕುರಿ ಮತ್ತು ವರುಣಾದ ಮನೆ ಮಗನ ನಡುವಿನ ಚುನಾವಣೆ ಇದು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಈ ಬಗ್ಗೆ ಮಂಗಳವಾರ ಟ್ವೀಟ್ ಮಾಡಿರುವ ಅವರು, ‘ರಾಮನಗರ ಮೂಲದ, ಬೆಂಗಳೂರು ನಗರದಲ್ಲಿ ರಾಜಕೀಯ ಮಾಡಿಕೊಂಡಿದ್ದ ಸೋಮಣ್ಣನವರನ್ನು ಬಿಜೆಪಿ ಒತ್ತಾಯಪೂರ್ವಕವಾಗಿ ವರುಣಾಕ್ಕೆ ಕರೆತಂದು ಕಣಕ್ಕಿಳಿಸಿದೆ. ಹಣಕ್ಕೆ ಮರುಳಾಗಿ ತಮ್ಮವರನ್ನು ಕೈಬಿಡುವವರಲ್ಲ ನನ್ನ ಜನ’ ಎಂದು ಕುಟುಕಿದ್ದಾರೆ.
‘ನಾನು ವರುಣಾ ಕ್ಷೇತ್ರದಲ್ಲಿ ಹುಟ್ಟಿ ಬೆಳೆದ, ಇಲ್ಲಿನ ಮಣ್ಣಿನ ಮಗ. ಇವ ನಮ್ಮವ ಎಂಬ ಭಾವನೆ ಇಲ್ಲಿನ ಜನರಲ್ಲಿದೆ. ಈ ಹಿಂದೆ ವರುಣಾವನ್ನು ಪ್ರತಿನಿಧಿಸಿದಾಗೆಲ್ಲ ಕ್ಷೇತ್ರದ ಅಭಿವೃದ್ಧಿಗೆ ಶಕ್ತಿಮೀರಿ ದುಡಿದಿದ್ದೇನೆ. ನನ್ನ ಸಾಧನೆಗಳು ಇಲ್ಲಿನ ಜನರ ಬದುಕಿನಲ್ಲಿದೆ. ನನ್ನ ಗೆಲುವಿಗೆ ಇದಕ್ಕಿಂತ ಹೆಚ್ಚೇನು ಬೇಕು?’ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
Karnataka Assembly Election: ಶಿವಮೊಗ್ಗ ನಗರ ಕ್ಷೇತ್ರದ ಬಿಜೆಪಿ ಟಿಕೆಟ್?
ವರುಣಾದಲ್ಲಿ ಜಾತಿ ಲೆಕ್ಕಾಚಾರ!
ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಲಿಂಗಾಯತ ಮತದಾರರು ಹೆಚ್ಚಿದ್ದಾರೆ. ನಂತರದ ಸ್ಥಾನದಲ್ಲಿ ಎಸ್ಸಿ, ಕುರುಬರು ಇದ್ದಾರೆ. ಇದೇ ಲೆಕ್ಕಾಚಾರದಲ್ಲಿ ಬಿಜೆಪಿ ಸಿದ್ದರಾಮಯ್ಯ ವಿರುದ್ಧ ವಿ.ಸೋಮಣ್ಣರನ್ನು ಕಣಕ್ಕಿಳಿಸಿದೆ ಎಂದು ಹೇಳಲಾಗಿದೆ.
ಬೊಮ್ಮಾಯಿ ಸಿಎಂ ಅಭ್ಯರ್ಥಿ ಎಂದು ಬಿಜೆಪಿ ಹೇಳುತ್ತಿಲ್ಲವೇಕೆ?: ಕಾಂಗ್ರೆಸ್
ವರುಣಾದಲ್ಲಿ ಲಿಂಗಾಯಿತ, ಪರಿಶಿಷ್ಟ ಜಾತಿ ಹಾಗೂ ಕುರುಬ ಸಮುದಾಯದ ಮತಗಳೇ ನಿರ್ಣಾಯಕ. ಲಿಂಗಾಯಿತರು ಸದಾ ಬಿಜೆಪಿಗೆ ಬೆಂಬಲ ನೀಡುತ್ತಾರೆಂದು ಹೇಳಲಾಗಿದೆ. ಇಲ್ಲಿ ಲಿಂಗಾಯಿತ ಮತದಾರರು ಹೆಚ್ಚಾಗಿರುವ ಕಾರಣ ಬಿಜೆಪಿ ಸೋಮಣ್ಣರಿಗೆ ಟಿಕೆಟ್ ನೀಡಿದೆ. ಸಿದ್ದರಾಮಯ್ಯ vs ಸೋಮಣ್ಣ ಯುದ್ಧದಲ್ಲಿ ಗೆಲುವು ಯಾರಿಗೆ ಸಿಗುತ್ತೆ ಅನ್ನೋದು ಮೇ 13ರ ಫಲಿತಾಂಶ ತಿಳಿಸಲಿದೆ.
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.