ಮಂಗಳೂರು(ದಕ್ಷಿಣ ಕನ್ನಡ): ಮಂಗಳೂರಿನಲ್ಲಿ ಕಾಂಗ್ರೆಸ್‌ ಯುವ ಮುಖಂಡ ಮಿಥುನ್‌ ರೈ ಕಾರಿನ ಮೇಲೆ ದಾಳಿ ನಡೆಸಿರುವ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿರುವ ಘಟನೆ ನಡೆದಿದೆ.


COMMERCIAL BREAK
SCROLL TO CONTINUE READING

ಬುಧವಾರ ಮತದಾನ ಅಂತ್ಯವಾದ ಬಳಿಕ ಮೂಡುಶೆಡ್ಡೆಯಲ್ಲಿ ಚುನಾವಣೋತ್ತರ ಘರ್ಷಣೆ ನಡೆದಿದೆ. ಮೂಡುಬಿದಿರೆಯ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಕಾರಿನಲ್ಲಿ ಹೋಗುವಾಗ ಬಿಜೆಪಿ ಕಾರ್ಯಕರ್ತರು ಜೋರಾಗಿ ಘೋಷಣೆ ಕೂಗಿದ್ದಾರೆ. ಈ ವೇಳೆ ಮಿಥುನ್ ರೈ ಜೊತೆಗಿದ್ದ ಕಾಂಗ್ರೆಸ್ ಕಾರ್ಯಕರ್ತರೂ ಘೋಷಣೆ ಕೂಗಿದ್ದಾರೆ. ಈ ವೇಳೆ ಪರಸ್ಪರ ಮಾತಿನ ಚಕಮಕಿ ನಡೆದು ಕೈ-ಕೈ ಮಿಲಾಯಿಸುವ ಹಂತಕ್ಕೆ ಹೋಗಿದೆ.


ಇದನ್ನೂ ಓದಿ: Karnataka Exit Poll Result: ಕರ್ನಾಟಕದಲ್ಲಿ ಯಾರ ಸರ್ಕಾರ ರಚನೆ? ಎಕ್ಸಿಟ್ ಪೋಲ್ ಭವಿಷ್ಯ..!


ಇದೇ ಸಂದರ್ಭದಲ್ಲಿ ಕಿಡಿಗೇಡಿಗಳು ಮಿಥುನ್ ರೈ ಕಾರಿನ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಪರಿಣಾಮ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಎರಡೂ ಪಕ್ಷದ ಕಾರ್ಯಕರ್ತರು ಜಮಾಯಿಸಿದ್ದರಿಂದ ಸ್ಥಳದಲ್ಲಿ ಗಲಾಟೆ ನಡೆದಿದೆ.  


ಕೆಎಸ್‌ಆರ್‌ಪಿ ಮತ್ತು ಸಿಆರ್‌ಪಿಎಫ್‌ ತುಕಡಿ ಸ್ಥಳಕ್ಕೆ ಧಾವಿಸಿದ್ದು ಪರಿಸ್ಥಿತಿ ನಿಯಂತ್ರಣಕ್ಕೆ ತಂದಿದ್ದಾರೆ. ಸ್ಥಳೀಯ ಪೊಲೀಸರು ಸಹ ಸ್ಥಳಕ್ಕೆ ದೌಡಾಯಿಸಿದ್ದಾರೆ. ಸ್ಥಳದಲ್ಲಿ ಪೊಲೀಸರನ್ನುನಿಯೋಜಿಸಿ ಪರಿಸ್ಥಿತಿಯನ್ನು ಹತೋಟಿಗೆ ತರಲಾಗಿದೆ ಎಂದು ವರದಿಯಾಗಿದೆ.


ಇದನ್ನೂ ಓದಿ: ರೆಸಾರ್ಟ್‌ ರಾಜಕೀಯ ಇಲ್ಲ, ಸಂಪೂರ್ಣ ಬಹುಮತ ಪಡೆಯುತ್ತೇವೆ : ಸಿಎಂ ಬೊಮ್ಮಾಯಿ


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.