ಲಕ್ಷ್ಮಣ ಸವದಿ ಜೊತೆ ಅನೇಕರು ಕಾಂಗ್ರೆಸ್ ಸೇರಲಿದ್ದಾರೆ: ಡಿ.ಕೆ.ಶಿವಕುಮಾರ್
Karnataka Assembly Election 2023: ಲಕ್ಷ್ಮಣ ಸವದಿ ಇಂದು ಸಂಜೆ 4 ಗಂಟೆಗೆ ವಿಧಾನ ಪರಿಷತ್ ಸಭಾಪತಿಗಳನ್ನು ಭೇಟಿ ಮಾಡಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಲಿದ್ದು, 4.30ಕ್ಕೆ ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ ಎಂದು ಡಿಕೆಶಿ ತಿಳಿಸಿದರು.
ಬೆಂಗಳೂರು: ಮಾಜಿ ಉಪಮುಖ್ಯಮಂತ್ರಿ, ಬೆಳಗಾವಿಯ ಪ್ರಭಾವಿ ನಾಯಕ ಲಕ್ಷ್ಮಣ ಸವದಿ ಟಿಕೆಟ್ ಸಿಗದ ಹಿನ್ನೆಲೆ ಬಿಜೆಪಿಗೆ ಗುಡ್ ಬೈ ಹೇಳಿದ್ದಾರೆ. ಇಂದು ಅವರು ಕಾಂಗ್ರೆಸ್ ಪಕ್ಷ ಸೇರುತ್ತಿದ್ದು, ಇನ್ನು ಅನೇಕ ನಾಯಕರು ಕಾಂಗ್ರೆಸ್ ಪಕ್ಷಕ್ಕೆ ಬರಲಿದ್ದಾರೆಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಸಿದ್ದರಾಮಯ್ಯರ ನಿವಾಸದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲರ ಜೊತೆಗೆ ಲಕ್ಷ್ಮಣ ಸವದಿ ಶುಕ್ರವಾರ ಸಮಾಲೋಚನೆ ನಡೆಸಿದ್ದಾರೆ. ಈ ವಿಚಾರವಾಗಿ ಮಾಧ್ಯಮಗಳ ಜೊತೆ ಮಾತನಾಡಿದ ಡಿಕೆಶಿ, ಲಕ್ಷಣ ಸವದಿ ಕಾಂಗ್ರೆಸ್ ಸೇರುವ ಬಗ್ಗೆ ಮಾಹಿತಿ ನೀಡಿದರು.
ಇದನ್ನೂ ಓದಿ: ಒಂದು ಫೋನ್ ಕಾಲ್‌ಗೆ ಬಂಡಾಯ ಅಭ್ಯರ್ಥಿ ರುದ್ರೇಶ್ ಥಂಡಾ..! ಸೋಮಣ್ಣನ ಹಾದಿ ಸರಳ
‘ಲಕ್ಷ್ಮಣ್ ಸವದಿ ಹಿರಿಯ ನಾಯಕರು. ಅವರು ಯಾವುದೇ ಷರತ್ತು ಇಲ್ಲದೇ ಪಕ್ಷಕ್ಕೆ ಸೇರುತ್ತಿದ್ದು, ನಮ್ಮ ಕುಟುಂಬದ ಸದಸ್ಯರಾಗುತ್ತಿದ್ದಾರೆ. ಅವರು ಪಕ್ಷದ ನಾಯಕತ್ವ, ಸಿದ್ಧಾಂತ ಒಪ್ಪಿ ಪಕ್ಷ ಸೇರುತ್ತಿದ್ದು, ಅವರಿಗೆ ಶಕ್ತಿ ತುಂಬುವುದು ನಮ್ಮ ಜವಾಬ್ದಾರಿ. ಇಂದು ಪಕ್ಷದ ನಾಯಕರೆಲ್ಲರೂ ಲಕ್ಷ್ಮಣ ಸವದಿ ಅವರ ಜೊತೆ ಚರ್ಚೆ ಮಾಡಿದ್ದೇವೆ. ಅವರಿಗೆ ಪಕ್ಷದ ಎಲ್ಲಾ ನಾಯಕರು ತುಂಬು ಹೃದಯದ ಸ್ವಾಗತ ಕೋರಿದ್ದಾರೆ’ ಅಂತಾ ತಿಳಿಸಿದರು.
ಲಕ್ಷ್ಮಣ ಸವದಿ ಅವರ ಜೊತೆಗೆ ಇನ್ನೂ ಅನೇಕ ಬಿಜೆಪಿ ನಾಯಕರು ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ. ಎಲ್ಲರನ್ನೂ ನಾವು ಒಮ್ಮತದಿಂದ ಪಕ್ಷಕ್ಕೆ ಸ್ವಾಗತಿಸುತ್ತೇವೆ. ಸವದಿ ಅವರು ಇಂದು ಸಂಜೆ 4 ಗಂಟೆಗೆ ವಿಧಾನ ಪರಿಷತ್ ಸಭಾಪತಿಗಳನ್ನು ಭೇಟಿ ಮಾಡಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಲಿದ್ದು, 4.30ಕ್ಕೆ ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ’ ಎಂದು ಡಿಕೆಶಿ ತಿಳಿಸಿದರು.
ಇದನ್ನೂ ಓದಿ: ನನಗೆ ಇನ್ನೂ ವಯಸ್ಸಾಗಿಲ್ಲ, ನಾನು ಚುನಾವಣೆಗೆ ಬೇರೆ ಪಕ್ಷದಿಂದಲೇ ಸ್ಪರ್ಧೆ ಮಾಡುತ್ತೇನೆ- ಎಂ.ಪಿ. ಕುಮಾರಸ್ವಾಮಿ
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.