Karnataka Exit Poll 2023 : ಬಹುನಿರೀಕ್ಷಿತ 2023 ಕರ್ನಾಟಕ ವಿಧಾನಸಭಾ ಚುನಾವಣೆಯ ಮತದಾನ ಮುಕ್ತಾಯಗೊಂಡಿದೆ. ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಯಲ್ಲಿ ಭದ್ರವಾಗಿದ್ದು, ಮೇ 13 ರಂದು ಫಲಿತಾಂಶ ಹೊರಬಿಳಲಿದೆ. ಅದಕ್ಕೂ ಮುನ್ನ ಜೀ ಕನ್ನಡ ನ್ಯೂಸ್‌ ಮತ್ತು ಮ್ಯಾಟ್ರಿಜ್‌ ಸಂಸ್ಥೆ ನಡೆಸಿದ ಚುನಾವಣೋತ್ತರ ಸಮೀಕ್ಷೆಯ ಫಲಿತಾಂಶ  ಪ್ರಕಟವಾಗಿದ್ದು, ಕುತೂಹಲ ಮೂಡಿಸಿದೆ.


COMMERCIAL BREAK
SCROLL TO CONTINUE READING

ಹೌದು.. ಇಂದು ರಾಜ್ಯದಲ್ಲಿ ಶಾಂತಿಯುತವಾಗಿ ಮತದಾನ ಜರುಗಿತು. ಅಧಿಕೃತ ಫಲಿತಾಂಶಕ್ಕಾಗಿ ಮೇ 13ರ ವರೆಗೆ ಕಾಯಬೇಕಾಗುತ್ತದೆ. ಫಲಿತಾಂಶಕ್ಕೂ ಮುನ್ನ ಮಾಧ್ಯಮಗಳು ಮತ್ತು ಏಜೆನ್ಸಿಗಳು ಸಮೀಕ್ಷೆ ನಡೆಸಿ ಅಂದಾಜು ಲೆಕ್ಕಾಚಾರದಲ್ಲಿ ಯಾವ ಪಕ್ಷ ಅಧಿಕಾರಕ್ಕೆ ಬರಬಹುದು ಎನ್ನುವುದನ್ನು ತಿಳಿಸುತ್ತವೆ. ಈ ಪೈಕಿ ಜೀ ಕನ್ನಡ ನ್ಯೂಸ್ ಇದೀಗ ತನ್ನ ಚುನಾವಣೋತ್ತರ ಸಮೀಕ್ಷೆಯನ್ನು ಪ್ರಕಟಿಸಿದ್ದು, ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ.


ಇದನ್ನೂ ಓದಿ: Karnataka Election 2023: ಕಾಂಗ್ರೆಸ್ ಕಾರ್ಯಕರ್ತರ ಶ್ರಮಕ್ಕೆ ಶಹಬ್ಬಾಸ್ ಹೇಳಿದ ಸಿದ್ದರಾಮಯ್ಯ


ಜೀ ಕನ್ನಡ ನ್ಯೂಸ್ ಮತ್ತು ಮ್ಯಾಟ್ರಿಜ್ ಸಂಸ್ಥೆ ನಡೆಸಿದ ಚುನಾವಣೋತ್ತರ ಸಮೀಕ್ಷೆಯಲ್ಲಿ ಕಾಂಗ್ರೆಸ್ ಪಕ್ಷವು ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ ಎನ್ನುವುದನ್ನು ಸಮೀಕ್ಷೆ ಕಂಡುಕೊಂಡಿದೆ. ಕಾಂಗ್ರೆಸ್ ಪಕ್ಷ 103 ರಿಂದ 118 ಸ್ಥಾನಗಳಿಸಿ ಬಹುಮತ ಪಡೆದು ಸರ್ಕಾರ ರಚಿಸಿವು ಲಕ್ಷಣಗಳು ಗೋಚರವಾಗಿವೆ. ಬಿಜೆಪಿ 79 ರಿಂದ 94 ಸ್ಥಾನಗಳು ಮತ್ತು ಜೆಡಿಎಸ್ ಪಕ್ಷ 25 ರಿಂದ 33 ಸ್ಥಾನಗಳನ್ನು ಪಡೆದು ವಿಪಕ್ಷ ಸ್ಥಾನದಲ್ಲಿ ಕುಳಿತುಕೊಳ್ಳಲಿವೆ ಎಂದು ಸಮೀಕ್ಷೆ ಮೂಲಕ ತಿಳಿದು ಬಂದಿದೆ. ಅಲ್ಲದೆ, ಇತರರಿಗೆ 2 ರಿಂದ 5 ಸ್ಥಾನಗಳು ಸಿಗಲಿವೆ.


ಒಟ್ಟಾರೆಯಾಗಿ ಕಾಂಗ್ರೆಸ್ ಪಕ್ಷವು ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬರುವ ಸಾಧ್ಯತೆಗಳು ನಿಚ್ಚಳವಾಗಿವೆ ಎನ್ನುವುದನ್ನು ಸಮೀಕ್ಷೆ ಹೇಳಿದೆ. ಚುನಾವಣಾ ಪ್ರಚಾರದುದ್ದಕ್ಕೂ ಸ್ಥಳೀಯ ಸಮಸ್ಯೆಗಳ ಮೇಲೆ ಕೇಂದ್ರಿಕರಿಸಿದ್ದು ಕಾಂಗ್ರೆಸ್ ಪಕ್ಷಕ್ಕೆ ವರವಾಗಿ ಪರಿಣಮಿಸಿದೆ. ಇನ್ನೂ ಬಿಜೆಪಿ ಸಂಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬರುವ ನಂಬಿಕೆ ಹುಸಿಯಾಗಿದೆ.https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ