ಬೆಂಗಳೂರು: ಲಕ್ಷ್ಮಣ ಸವದಿ ಅವರು ಕಾಂಗ್ರೆಸ್ ಗೆ ಹೋಗ್ತಿರೋದು ದುಃಖ ತರಿಸಿದೆ. ಅವರಿಗೆ ಕಾಂಗ್ರೆಸ್ ನಲ್ಲಿ  ರಾಜಕೀಯ ಭವಿಷ್ಯ ಕಂಡಿದೆ. ಕಾಂಗ್ರೆಸ್ ಅಲ್ಲಿ 60 ಸೀಟಿಗೆ ನಿಲ್ಲುವ ಗತಿ ಇಲ್ಲ. ಅದಕ್ಕಾಗಿ ಕೆಲವರನ್ನು ಸೇರಿಸಿಕೊಂಡಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದರು.


COMMERCIAL BREAK
SCROLL TO CONTINUE READING

ಇಂದು ನಗರದಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ಸಹಜವಾಗಿ ಆಡಳಿತ ಪಕ್ಷದಲ್ಲಿ ಆಕಾಂಕ್ಷಿಗಳು ಜಾಸ್ತಿ ಇರುತ್ತಾರೆ. ಕಾರ್ಯಕರ್ತರು ನಮ್ಮ ಪರವಾಗಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಗೆಲ್ಲಲಿದೆ. ಕೆಲವರು ಶಾಸಕರಾಗಬೇಕು ಅಂತ ಪಕ್ಷ ಬಿಡುತ್ತಾರೆ. ನಮ್ಮ ಪಕ್ಷದ ಕಾರ್ಯಕರ್ತರು ನಮ್ಮ ಪಕ್ಷಕ್ಕೆ ಬದ್ಧರಾಗಿದ್ದಾರೆ ಎಂದರು.


ಇದನ್ನೂ ಓದಿ : Karnataka Assembly Election 2023: ಮೊದಲ ದಿನವೇ 221 ನಾಮಪತ್ರ ಸಲ್ಲಿಕೆ


ಈಗಾಗಲೇ ಪಕ್ಷದ ಅಭ್ಯರ್ಥಿಗಳ ಎರಡು ಪಟ್ಟಿ ಬಿಡುಗಡೆ ಮಾಡಲಾಗಿದ್ದು, ಮೂರನೇ ಪಟ್ಟಿ ಶೀಘ್ರದಲ್ಲೇ ಬಿಡುಗಡೆ ಮಾಡುತ್ತೇವೆ. ನಾಳೆ ಶಿಗ್ಗಾಂವಿಯಲ್ಲಿ ಚುನಾವಣಾ ನಾಮಪತ್ರ ಸಲ್ಲಿಕೆ ಮಾಡುತ್ತೇನೆ ಎಂದರು.


ಮಾಜಿ ಉಪಮುಖ್ಯಮಂತ್ರಿ, ಬೆಳಗಾವಿಯ ಪ್ರಭಾವಿ ನಾಯಕ ಲಕ್ಷ್ಮಣ ಸವದಿ ಇಂದು ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿದ್ದಾರೆ. ಅಥಣಿಯಿಂದ  ಬಿಜೆಪಿ ಟಿಕೆಟ್‌ ಸಿಗದ ಹಿನ್ನೆಲೆ ಸವದಿ ಕಾಂಗ್ರೆಸ್‌ ಸೇರಿದ್ದು, ಬಿಜೆಪಿ ನಾಯಕರು ಸವದಿ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ. 


ಇದನ್ನೂ ಓದಿ : ಒಂದು ಫೋನ್ ಕಾಲ್‌ಗೆ ಬಂಡಾಯ ಅಭ್ಯರ್ಥಿ ರುದ್ರೇಶ್ ಥಂಡಾ..! ಸೋಮಣ್ಣನ ಹಾದಿ ಸರಳ


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.