ಬಿಜೆಪಿಯ 40 ಜನ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ; ಸುದೀಪ್ ಹೆಸರು ಮಿಸ್ಸಿಂಗ್!
Karnataka Assembly Election 2023: ನಟ ಕಿಚ್ಚ ಸುದೀಪ್ ಅವರು ರಾಜ್ಯಾದ್ಯಂತ ಬಿಜೆಪಿ ಪರ ಪ್ರಚಾರ ನಡೆಸಲಿದ್ದಾರೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ. ಹೀಗಾಗಿ ಸುದೀಪ್ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ.
ನವದೆಹಲಿ: ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆ ಬಿಜೆಪಿ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆಯಾಗಿದೆ. ಒಟ್ಟು 40 ಜನ ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಬುಧವಾರ ಬಿಡುಗಡೆ ಮಾಡಲಾಗಿದೆ.
ಪಟ್ಟಿಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಜೆ.ಪಿ.ನಡ್ಡಾ, ರಾಜನಾಥ್ ಸಿಂಗ್, ಅಮಿತ್ ಶಾ, ನಿತಿನ್ ಗಡ್ಕರಿ, ನಿರ್ಮಲಾ ಸೀತಾರಾಮನ್, ಸ್ಮೃತಿ ಇರಾನಿ, ಧರ್ಮೇಂದ್ರ ಪ್ರಧಾನ್, ಮನ್‌ಸುಖ್ ಮಾಂಡವೀಯ, ಯೋಗಿ ಆದಿತ್ಯನಾಥ್ ಸೇರಿದಂತೆ ಕೇಂದ್ರದ ಹಲವು ನಾಯಕ ಹೆಸರಿದೆ. ರಾಜ್ಯದಿಂದ ಬಿ.ಎಸ್.ಯಡಿಯೂರಪ್ಪ, ನಳೀನ್ ಕುಮಾರ್ ಕಟೀಲ್, ಬಸವರಾಜ್ ಬೊಮ್ಮಾಯಿ, ಪ್ರಹ್ಲಾದ್ ಜೋಶಿ ಸೇರಿದಂತೆ ಕೆಲ ಹಾಲಿ ಸಚಿವರು ಹೆಸರಿದೆ.
ಇದನ್ನೂ ಓದಿ: ನಾಮಪತ್ರ ಸಲ್ಲಿಕೆಗೆ ಮಕ್ಕಳ ಬಳಕೆ, ಕ್ಷೇತ್ರದಲ್ಲಿ ನೀತಿ ಸಂಹಿತೆ ಉಲ್ಲಂಘನೆಯಾದ್ರೂ ಚುನಾವಣಾಧಿಕಾರಿ ಸೈಲೆಂಟ್
ಇದರ ಜೊತೆಗೆ ನಟರಾದ ಜಗೇಶ್, ಶೃತಿ, ತಾರಾ ಅನುರಾಧ ಪಟ್ಟಿಯಲ್ಲಿ ಸೇರಿದ್ದಾರೆ. ಆದರೆ ಸ್ಟಾರ್ ಕ್ಯಾಂಪೇನರ್ ಅಂತಾ ಕರೆತಂದ ಕಿಚ್ಚ ಸುದೀಪ್ ಅವರ ಹೆಸರು ಪಟ್ಟಿಯಲ್ಲಿ ಇಲ್ಲ. ಬಿಜೆಪಿ ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಬಿಡುಗಡೆ ಮಾಡಿದ್ದಾರೆ.
ಸಿಎಂ ಬೊಮ್ಮಾಯಿ ಪರ ಸುದೀಪ್ ಪ್ರಚಾರ
ಶಿಗ್ಗಾಂವಿ ಕ್ಷೇತ್ರದಿಂದ ಸಿಎಂ ಬಸವರಾಜ್ ಬೊಮ್ಮಾಯಿ ಬುಧವಾರ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ರೋಡ್ ಶೋ ಮೂಲಕ ಆಗಮಿಸಿದ ಸಿಎಂ ಬೊಮ್ಮಾಯಿಯವರು ತಹಶೀಲ್ದಾರ್ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದ್ದಾರೆ. ನಟ ಕಿಚ್ಚ ಸುದೀಪ್ ಈ ವೇಳೆ ಸಿಎಂ ಬೊಮ್ಮಾಯಿ ಪರ ಪ್ರಚಾರ ನಡೆಸಿದರು. ಸುದೀಪ್ ಆಗಮನದ ಹಿನ್ನೆಲೆ ಸಹಸ್ರಾರು ಜನರು ಶಿಗ್ಗಾಂವಿಯ ಕಿತ್ತೂರು ಚನ್ನಮ್ಮ ಸರ್ಕಲ್‍ನಲ್ಲಿ ನೆರೆದಿದ್ದರು.
ಇದನ್ನೂ ಓದಿ: ಯಡಿಯೂರಪ್ಪನವರ ರಾಜಕೀಯ ಭವ್ಯ ಭವಿಷ್ಯಕ್ಕೆ ಮುನ್ನುಡಿ ಬರೆದಿತ್ತು ಸಿಕೆಆರ್ 454..!
ನಟ ಕಿಚ್ಚ ಸುದೀಪ್ ಅವರು ರಾಜ್ಯಾದ್ಯಂತ ಬಿಜೆಪಿ ಪರ ಪ್ರಚಾರ ನಡೆಸಲಿದ್ದಾರೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ. ಹೀಗಾಗಿ ಸುದೀಪ್ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ. ಸುದೀಪ್ ಬಿಜೆಪಿ ಜೊತೆಗೆ ಕೈಜೋಡಿಸಿರುವುದು ನಮಗೆ ಆನೆಬಲ ಬಂದಂತಾಗಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.