Karnataka CM-LIVE UPDATE: ರಾಜ್ಯದ ನೂತನ ಮುಖ್ಯಮಂತ್ರಿ ನಿರ್ಧಾರ ನಾಳೆಗೆ ಮುಂದೂಡಿಕೆ ಸಾಧ್ಯತೆ

Tue, 16 May 2023-11:25 pm,

Karnataka CM-LIVE UPDATE: ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಬಹುಮತ ಪಡೆದು ಗೆಲುವು ಸಾಧಿಸಿದೆ, ಆದರೆ ಇದುವರೆಗೆ ಸಿಎಂ ಯಾರೆಂಬುದು ತಿಳಿದುಬಂದಿಲ್ಲ. ಕೆಲವು ಮಂದಿ ಸಿದ್ದರಾಮಯ್ಯ ಸಿಎಂ ಎಂದು ಹೇಳುತ್ತಿದ್ದರೆ, ಮತ್ತೂ ಕೆಲವರು ಕಾಂಗ್ರೆಸ್ ಕರ್ನಾಟಕ ಘಟಕದ ಅಧ್ಯಕ್ಷ ಡಿಕೆ ಶಿವಕುಮಾರ್ ಎಂದು ಹೇಳುತ್ತಿದ್ದಾರೆ. ಈ ಬೆನ್ನಲ್ಲೆ ಡಿಕೆಶಿಗೆ ಹೈಕಮಾಂಡ್ ಬುಲಾವ್ ನೀಡಿದ್ದು, ಇಂದು ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.

Karnataka CM-LIVE UPDATE: ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಬಹುಮತ ಪಡೆದು ಗೆಲುವು ಸಾಧಿಸಿದೆ, ಆದರೆ ಇದುವರೆಗೆ ಸಿಎಂ ಯಾರೆಂಬುದು ತಿಳಿದುಬಂದಿಲ್ಲ. ಕೆಲವು ಮಂದಿ ಸಿದ್ದರಾಮಯ್ಯ ಸಿಎಂ ಎಂದು ಹೇಳುತ್ತಿದ್ದರೆ, ಮತ್ತೂ ಕೆಲವರು ಕಾಂಗ್ರೆಸ್ ಕರ್ನಾಟಕ ಘಟಕದ ಅಧ್ಯಕ್ಷ ಡಿಕೆ ಶಿವಕುಮಾರ್ ಎಂದು ಹೇಳುತ್ತಿದ್ದಾರೆ. ಈ ಬೆನ್ನಲ್ಲೆ ಡಿಕೆಶಿಗೆ ಹೈಕಮಾಂಡ್ ಬುಲಾವ್ ನೀಡಿದ್ದು, ಇಂದು ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.

Latest Updates

  • ಸಿದ್ದರಾಮಯ್ಯ & ಕೆಸಿ ವೇಣುಗೋಪಾಲ್ ಭೇಟಿ: ಮಾಜಿ ಸಿಎಂ ಸಿದ್ದರಾಮಯ್ಯನವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆಯವರನ್ನು ಭೇಟಿಯಾದ ಬಳಿಕ ದೆಹಲಿಯಲ್ಲಿ ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಅವರ ನಿವಾಸಕ್ಕೆ ಭೇಟಿ ನೀಡಿದ್ದಾರೆ.

  • ನಾಳೆ ಮತ್ತೊಂದು ಸುತ್ತಿನ ಸಭೆ: ಕರ್ನಾಟಕ ಸಿಎಂ ಆಯ್ಕೆ ವಿಚಾರವಾಗಿ ನಾಳೆ ಮತ್ತೊಂದು ಸುತ್ತಿನ ಸಭೆ ನಡೆಯಲಿದೆ. ಈಗಾಗಲೇ ಮಲ್ಲಿಕಾರ್ಜುನ್ ಖರ್ಗೆಯವರು ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅಭಿಪ್ರಾಯ ಆಲಿಸಿದ್ದಾರೆ. ಇವರಿಬ್ಬರ ಅಭಿಪ್ರಾಯಗಳನ್ನು ರಾಹುಲ್ ಗಾಂಧಿ ಟೀಂ ಜೊತೆ ಖರ್ಗೆ ಹಂಚಿಕೊಳ್ಳಲಿದ್ದಾರೆ. ನಾಳೆ ಮಧ್ಯಾಹ್ನ ಅಥವಾ ಸಂಜೆ ಮತ್ತೊಂದು ಮೀಟಿಂಗ್ ನಡೆಯುವ ಸಾಧ್ಯತೆ ಇದೆ. ಇದಾದ ಬಳಿಕ ಸಿಎಂ ಹೆಸರು ಘೋಷಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

  • ನಾಳೆ ಮುಖ್ಯಮಂತ್ರಿ ಘೋಷಣೆ: ಎಐಸಿಸಿ ಅಧ‍್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ನಾಳೆ ಬೆಂಗಳೂರಿನಲ್ಲಿ ಕರ್ನಾಟಕದ ಮುಖ್ಯಮಂತ್ರಿ ಯಾರಾಗ್ತಾರೆ ಅನ್ನೋದನ್ನು ಘೋಷಿಸಲಿದ್ದಾರೆಂದು ಬಲ್ಲಮೂಲಗಳು ತಿಳಿಸಿವೆ.

  • ಸೋನಿಯಾಗಾಂಧಿ ಜೊತೆ ಚೆರ್ಚಿಸಿ ಅಂತಿಮ ತೀರ್ಮಾನ: ಮಲ್ಲಿಕಾರ್ಜುನ್ ಖರ್ಗೆ ಹಾಗೂ ಸಿದ್ದರಾಮಯ್ಯ ಭೇಟಿ ಮುಕ್ತಾಯವಾಗಿದೆ. ಸುಮಾರು ಒಂದೂವರೆ ಗಂಟೆಗಳ‌ ಕಾಲ‌ ಸಿದ್ದರಾಮಯ್ಯನವರು ಚೆರ್ಚೆ ನಡೆಸಿದ್ದಾರೆ. ಸೋನಿಯಾಗಾಂಧಿ ಜೊತೆ ಚೆರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳುವ ಸಾಧ್ಯತೆಯಿದೆ.

  • ಸಿಎಂ ಹುದ್ದೆಯನ್ನು ತಲಾ ಎರಡೂವರೆ ವರ್ಷ ಹಂಚಿಕೆ ಮಾಡುವ ತೀರ್ಮಾನ ಕೈಗೊಂಡರೇ ಮೊದಲಿಗೆ ತಮಗೆ ಸಿಎಂ ಹುದ್ದೆ ನೀಡಬೇಕು ಎಂದು ಸಿದ್ದರಾಮಯ್ಯ ಖರ್ಗೆ ಎದುರು ಬೇಡಿಕೆ ಇಟ್ಟಿದ್ದಾರೆ.

    COMMERCIAL BREAK
    SCROLL TO CONTINUE READING

    ಇದು ಕೊನೆಯ ಚುನಾವಣೆ ಎಂದು ಜನರಿಗೆ ಹೇಳಿದ್ದೇನೆ, ಹೀಗಾಗಿ ಎರಡೂವರೆ ವರ್ಷ ಸಿಎಂ ಆಗಿಬಿಡುತ್ತೇನೆ, ನಾವು ಕೊಟ್ಟಿರುವ ಭರವಸೆ ಈಡೇರಿಸಲು ಎರಡೂವರೆ ವರ್ಷ ಸಿಎಂ ಹುದ್ದೆ ಕೊಡಿ, ಕಾಂಗ್ರೆಸ್ ಪಕ್ಷದ ಬಹುಸಂಖ್ಯಾತ ಶಾಸಕರು ತಾನೇ ಸಿಎಂ ಆಗಬೇಕೆಂದು ಬಯಸಿದ್ದಾರೆ. ಹೀಗಾಗಿ ಶಾಸಕರ ಅಭಿಪ್ರಾಯಕ್ಕೆ ಮನ್ನಣೆ ‌ನೀಡಬೇಕು‌ ಎಂದು ಸಿದ್ದರಾಮಯ್ಯ ಖರ್ಗೆ ಅವರಿಗೆ ತಿಳಿಸಿದ್ದಾರೆ.

    ಅಹಿಂದ ಸಮುದಾಯವು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿದ್ದರಿಂದಾಗಿ ಕಾಂಗ್ರೆಸ್ ಗೆ 136 ಕ್ಷೇತ್ರದ ಗೆಲುವು ಸಿಕ್ಕಿದೆ, ಮತ್ತು ತಮ್ಮ ಮುಖ ನೋಡಿ ಅಹಿಂದ ಸಮುದಾಯ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡಿದೆ ಎಂದು ಅವರು ಹೇಳಿದ್ದಾರೆ.

    ಕರ್ನಾಟಕದ ಸಿಎಂ ಹುದ್ದೆ ಬಗ್ಗೆ ಇಬ್ಬರು ಪ್ರಬಲ ದಾವೆದಾರರ ವಾದವನ್ನು ಖರ್ಗೆ ಆಲಿಸಿದ್ದಾರೆ. ಆದ್ರೆ ಯಾರಿಗೆ ಸಿಎಂ ಹುದ್ದೆಯನ್ನು ನೀಡಬೇಕೆಂದು ಇನ್ನೂ ಯಾವುದೇ ಅಂತಿಮ ನಿರ್ಧಾರ ಕೈಗೊಂಡಿಲ್ಲ, ಈ ವಿಚಾರವಾಗಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ನಾಳೆ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ.ಹೀಗಾಗಿ ಕಾಂಗ್ರೆಸ್ ಹೈಕಮ್ಯಾಂಡ್ ನಾಳೆ  ಬೆಂಗಳೂರಿನಲ್ಲಿ ಹೊಸ ಸಿಎಂ ಹೆಸರು ಘೋಷಣೆ ಸಾಧ್ಯತೆ ಇದೆ ಎನ್ನಲಾಗಿದೆ.

  • ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ದೆಹಲಿಯ ನಿವಾಸದಲ್ಲಿ ಭೇಟಿ ಮಾಡಿದರು.

  • ಸಿಎಂ ಹುದ್ದೆ ನೀಡಬೇಕೆಂಬ ಬೇಡಿಕೆಯಿಂದ ಹಿಂದೆ ಸರಿಯಲ್ಲ ತಮಗೆ ಸಿಎಂ ಹುದ್ದೆ ನೀಡಬೇಕು ಎಂದು ಖರ್ಗೆ ಎದುರು ಡಿಕೆಶಿ ಬಿಗಿಪಟ್ಟು ಹಿಡಿದಿದ್ದಾರೆ.

    COMMERCIAL BREAK
    SCROLL TO CONTINUE READING

    ಸಿದ್ದರಾಮಯ್ಯ ಈ ಹಿಂದೆಯೇ ಸಿಎಂ ಆಗಿದ್ದರು.‌‌ಈಗ ಮತ್ತೆ ಸಿಎಂ ಹುದ್ದೆ ಅವರಿಗೆ ನೀಡಿಕೆ ಸರಿಯಲ್ಲ.ಈಗ ತಮಗೆ ಸಿಎಂ ಹುದ್ದೆ ನೀಡಬೇಕು ಸೋನಿಯಾ ಗಾಂಧಿ ಗೆ ಕೊಟ್ಟ ಭರವಸೆಯಂತೆ ಪಕ್ಷ ಅಧಿಕಾರಕ್ಕೆ ತಂದಿದ್ದೇನೆ ಎಂದು ಖರ್ಗೆ ಮುಂದೆ ಡಿಕೆಶಿ ಹೇಳಿದ್ದಾರೆ.

    ಇದಕ್ಕೆ ಪ್ರತಿಕ್ರಿಯಿಸಿರುವ ಮಲ್ಲಿಕಾರ್ಜುನ್ ಖರ್ಗೆ ಸೋನಿಯಾ ಗಾಂಧಿ ಜೊತೆ ಮಾತನಾಡುವ ಭರವಸೆ ನೀಡಿದ್ದಾರೆ

     

     

  • ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಇಬ್ಬರೂ ನಾಯಕರು ಪ್ರಮುಖರು ಮತ್ತು ಅವರಲ್ಲಿ ಯಾರನ್ನೂ ಬಿಡಲು ಸಾಧ್ಯವಿಲ್ಲ.ಅವರಿಗೆ ಯಾವ ರೀತಿಯ ವ್ಯವಸ್ಥೆ ಮಾಡಬೇಕೆಂದು ಎಐಸಿಸಿ ನಿರ್ಧರಿಸುತ್ತದೆ ಎಂದು ಕಾಂಗ್ರೆಸ್ ಮುಖಂಡ ಕೆ.ಎಚ್.ಮುನಿಯಪ್ಪ ಕರ್ನಾಟಕದ ನೂತನ ಸಿಎಂ ಕುರಿತು ಹೇಳಿದ್ದಾರೆ.

  • ದೆಹಲಿಯ ಖಾಸಗಿ ಹೊಟೇಲ್‌ನಿಂದ ಹೊರಟ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ.ಈಗ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಇಂದು ಮುಖ್ಯಮಂತ್ರಿ ಆಯ್ಕೆ ವಿಚಾರವಾಗಿ ಅಂತಿಮ ನಿರ್ಧಾರವನ್ನು ತೆಗೆದುಕೊಳ್ಳುತ್ತಾರೆ ಎನ್ನುವ ಭರವಸೆಯನ್ನು ಹೊಂದಿದ್ದಾರೆ.

    COMMERCIAL BREAK
    SCROLL TO CONTINUE READING

     

  • ಡಿಕೆ ಶಿವಕುಮಾರ್ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ದೆಹಲಿಯ ನಿವಾಸಕ್ಕೆ ಆಗಮಿಸಿದರು.

  • ನಾನೂ ಕೂಡ ಸಿಎಂ ಆಕಾಂಕ್ಷಿ: ಕಾಂಗ್ರೆಸ್ ಪಕ್ಷಕ್ಕೆ ಬಹುಮತ ಸಿಕ್ಕರೂ ಸಿಎಂ ಆಯ್ಕೆ ಕಗ್ಗಂಟು ಬಗೆಹರಿದಿಲ್ಲ. ನಾ ಕೊಡೆ ನೀ ಬಿಡೆ ಎನ್ನುಂತಾಗಿದೆ. ಡಿ.ಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯ ನಡುವೆ ಈ ವಿಚಾರದಲ್ಲಿ ಕೋಲ್ಡ್ ವಾರ್ ನಡೆಯುತ್ತಿದೆ. ಈ ಮಧ್ಯೆ ಡಾ.ಜಿ.ಪರಮೇಶ್ವರ್ ಕೂಡ ಪರೋಕ್ಷವಾಗಿ ನಾನು ಸಿಎಂ ಆಕಾಂಕ್ಷಿ ಅಂತಾ ಹೇಳುವ ಮೂಲಕ ಹೊಸ ಬಾಂಬ್ ಸಿಡಿಸಿದ್ದಾರೆ.

  • "ಯಾವುದಾದರೂ ಚಾನೆಲ್ ನಾನು ಹುದ್ದೆಗೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ವರದಿ ಮಾಡುತ್ತಿದ್ದರೆ ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುತ್ತೇನೆ...ಕೆಲವರು ರಾಜೀನಾಮೆ ನೀಡುತ್ತೇನೆ ಎಂದು ವರದಿ ಮಾಡುತ್ತಿದ್ದಾರೆ...ನನ್ನ ತಾಯಿ ನನ್ನ ಪಕ್ಷ, ನಾನು ಈ ಪಕ್ಷವನ್ನು ಕಟ್ಟಿದ್ದೇನೆ.ನನ್ನ ಹೈಕಮಾಂಡ್, ನನ್ನ 135 ಶಾಸಕರು, ನನ್ನ ಪಕ್ಷವಿದೆ" ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.

  • ಡಿಕೆಶಿ ಜೊತೆಗೂ ಮಾತುಕತೆ: ಮಾಜಿ ಸಿಎಂ ಸಿದ್ದರಾಮಯ್ಯರಿಗೆ ಕರೆ ಮಾಡಿರುವ ಕಾಂಗ್ರೆಸ್ ಹೈಕಾಂಡ್ ಸಿಎಂ ಆಯ್ಕೆ ಕುರಿತು ಚರ್ಚೆ ನಡೆಸಲಿದೆ. ಇದಾದ ಬಳಿಕ ಕೆಪಿಸಿಸಿ ಅಧ‍್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಕರೆದು ಮಾತುಕತೆ ನಡೆಸಲಿದೆ ಎಂದು ತಿಳಿದುಬಂದಿದೆ.

  • ಸಿದ್ದರಾಮಯ್ಯಗೆ ಎಐಸಿಸಿ ಕಚೇರಿಯಿಂದ ಬುಲಾವ್: ಮುಖ್ಯಮಂತ್ರಿ ಆಯ್ಕೆಗೆ ಇನ್ನಿಲ್ಲದ ಸರ್ಕಸ್ ಮಾಡುತ್ತಿರುವ ಕಾಂಗ್ರೆಸ್ ಹೈಕಮಾಂಡ್ ಮಾಜಿ ಸಿಎಂ ಸಿದ್ದರಾಮಯ್ಯಗೆ ಕರೆ ಮಾಡಿದೆ. ಸಂಜೆ 6 ಗಂಟೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ನಿವಾಸಕ್ಕೆ ಬರುವಂತೆ ಸೂಚನೆ ನೀಡಲಾಗಿದೆ ಎಂದು ತಿಳಿದುಬಂದಿದೆ.

  • ಉಚಿತ ಭಾಗ್ಯಗಳಿಗೆ ಷರತ್ತು ವಿಧಿಸುವುದು ಸರಿಯಲ್ಲ: ರಾಜ್ಯದ ಜನರಿಗೆ ನೀಡಿರುವ​ ಗ್ಯಾರಂಟಿಗಳಿಗೆ ಈಗ ಕಾಂಗ್ರೆಸ್ ಷರತ್ತು ವಿಧಿಸುವುದು ಸರಿಯಲ್ಲವೆಂದು ಮಾಜಿ ಸಚಿವ ಡಾ.ಅಶ್ವತ್ಥ್ ನಾರಾಯಣ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯದ ಎಲ್ಲಾ ಜನರಿಗೂ ಗ್ಯಾರಂಟಿಗಳನ್ನು ನೀಡುತ್ತೇವೆ ಎಂದು ಕಾಂಗ್ರೆಸ್ ನಾಯಕರು ಹೇಳಿದ್ದರು. ಇದೀಗ ಕೊಟ್ಟ ಭರವಸೆಗಳಿಗೆ ಷರತ್ತು ಅನ್ವಯ ಅಂತಾ ಹೇಳುತ್ತಿದ್ದಾರೆ. ಜನರಿಗೆ ನೀಡಿದ ಭರವಸೆಗಳನ್ನು ಕಾಂಗ್ರೆಸ್ ಈಡೇರಿಸಲೇಬೇಕು ಎಂದು ಅವರು ಆಗ್ರಹಿಸಿದ್ದಾರೆ.

    COMMERCIAL BREAK
    SCROLL TO CONTINUE READING

     

  • ಕರ್ನಾಟಕ ಕಾಂಗ್ರೆಸ್ ಮುಖ್ಯಸ್ಥ ಡಿಕೆ ಶಿವಕುಮಾರ್ ಬೆಂಗಳೂರಿನಿಂದ ದೆಹಲಿಗೆ ಆಗಮಿಸಿದ್ದಾರೆ. ಕರ್ನಾಟಕದ ಮುಂದಿನ ಮುಖ್ಯಮಂತ್ರಿ ನಿರ್ಧಾರದ ಮಾತುಕತೆಯ ಜೊತೆಗೆ ಪಕ್ಷದ ಹೈಕಮಾಂಡ್ ಅನ್ನು ಸಹ ಭೇಟಿಯಾಗಲಿದ್ದಾರೆ.

  • ಇತ್ತೀಚೆಗೆಯಷ್ಟೇ ಕರ್ನಾಟಕ ಚುನಾವಣೆ ನಡೆದಿದ್ದು, ಬಂಟ್ವಾಳ ಕ್ಷೇತ್ರದಿಂದ ಸ್ಪರ್ಧಿಸಿ ಸೋಲು ಕಂಡಿದ್ದ ಕಾಂಗ್ರೆಸ್ ಹಿರಿಯ ಮುಖಂಡ ರಮಾನಾಥ್ ರೈ ಇಂದು ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ಕಾಂಗ್ರೆಸ್ ಗೆ ಕರ್ನಾಟಕದಲ್ಲಿ ಸ್ಪಷ್ಟ ಬಹುಮತ ಬಂದಿದೆ. ಆದರೆ ತನ್ನ ಕ್ಷೇತ್ರದಲ್ಲಿ ರಮನಾಥ ರೈ ಸೋಲು ಕಂಡಿದ್ದಾರೆ.

  • Karnataka CM-LIVE UPDATE: ಇತ್ತೀಚೆಗೆಯಷ್ಟೇ ಕರ್ನಾಟಕ ಚುನಾವಣೆ ನಡೆದಿದ್ದು, ಬಂಟ್ವಾಳ ಕ್ಷೇತ್ರದಿಂದ ಸ್ಪರ್ಧಿಸಿ ಸೋಲು ಕಂಡಿದ್ದ ಕಾಂಗ್ರೆಸ್ ಹಿರಿಯ ಮುಖಂಡ ರಮಾನಾಥ್ ರೈ ಇಂದು ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ.

  • ಕರ್ನಾಟಕದಿಂದ ಕನಿಷ್ಠ 20 ಲೋಕಸಭಾ ಸ್ಥಾನಗಳನ್ನು ಗೆಲ್ಲುವ ಗುರಿಯನ್ನು ಕಾಂಗ್ರೆಸ್ ಹೊಂದಿದೆ. ನಮ್ಮ ಪಕ್ಷವನ್ನು ಒಗ್ಗಟ್ಟಾಗಿ ಇಡುತ್ತೇನೆ ಎಂದು ಮುಂಬರುವ ಲೋಕಸಭೆ ಚುನಾವಣೆ ಬಗ್ಗೆ ಡಿಕೆ ಶಿವಕುಮಾರ್ ಹೇಳಿಕೆ ನೀಡಿದ್ದಾರೆ.

  • Karnataka CM-LIVE UPDATE: ಕರ್ನಾಟಕದ ಮುಂದಿನ ಸಿಎಂ ಆಯ್ಕೆಗಾಗಿ ಪಕ್ಷದಲ್ಲಿ ನಡೆಯುತ್ತಿರುವ ಮಾತುಕತೆ ನಡುವೆಯೇ ಹೊಸದಾಗಿ ಆಯ್ಕೆಯಾದ ಕರ್ನಾಟಕ ಕಾಂಗ್ರೆಸ್ ಶಾಸಕರು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸಕ್ಕೆ ಆಗಮಿಸಿದರು.

  • ಕಾಂಗ್ರೆಸ್ ನಲ್ಲಿ ಸಿಎಂ ಆಯ್ಕೆ ಪ್ರಕ್ರಿಯೆ ಜೋರಾಗಿ ನಡೆಯುತ್ತಿದೆ. ಮತ್ತೊಂದೆಡೆ ಬಿಜೆಪಿ ರಾಜ್ಯದಲ್ಲಿ ಈ ಮಟ್ಟಿಗೆ ಸೋಲು ಕಾಣಲು ಏನು ಕಾರಣ ಎಂದು ಪರಾಮರ್ಶೆ ಮಾಡಿಕೊಂಡಿದೆ. ಈ ಬಗ್ಗೆ ಮಾತನಾಡಿದ ಹಂಗಾಮಿ ಸಿಎಂ ಬಸವರಾಜ ಬೊಮ್ಮಾಯಿ‌, “ಇಂದು ಸುಧಾಕರ್ ಅವರನ್ನು ಭೇಟಿ ಮಾಡಿದ್ದೀನಿ. ನಮ್ಮ ಜೊತೆ ಕೆಲಸ ಮಾಡಿದವರು ಅಲ್ಪ ಪ್ರಮಾಣದಲ್ಲಿ ಸೋತಿದ್ದಾರೆ. ಧೈರ್ಯ ತುಂಬುವ ಕೆಲಸ ಮಾಡುತ್ತಿದ್ದೇನೆ. ಸೋಲಿನ ಕಾರಣದ ಬಗ್ಗೆ ಚರ್ಚೆ ಮಾಡಿದ್ದೇವೆ. ಸೋಮಣ್ಣ ಅವರನ್ನೂ ಭೇಟಿ ಮಾಡುತ್ತೇನೆ” ಎಂದರು. ಕಾಂಗ್ರೆಸ್‌ ನಲ್ಲಿ ಸಿಎಂ ಸ್ಥಾನಕ್ಕೆ ಹಗ್ಗಜಗ್ಗಾಟ ನಡೆಯುತ್ತಿರುವ ಬಗ್ಗೆ ಮಾತನಾಡಿ, “ಅದು ಅವರ ಪಕ್ಷದ ವಿಚಾರ. ಸಿಎಂ ಯಾರು ಆಗುತ್ತಾರೆ ಎನ್ನುವುದನ್ನು ಕಾದುನೋಡೊಣ” ಎಂದರು.

  • ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಮತ್ತು ಸೋನಿಯಾ ಗಾಂಧಿ ಅವರು ಕರ್ನಾಟಕ ಸಿಎಂ ಯಾರಾಗಬೇಕೆಂದು ನಿರ್ಧಾರ ಮಾಡುತ್ತಾರೆ. ಇಂದು ಡಿಕೆ ಶಿವಕುಮಾರ್ ದೆಹಲಿಗೆ ಆಗಮಿಸುತ್ತಿದ್ದಾರೆ. ತದನಂತರ ಎಐಸಿಸಿ ಅಧ್ಯಕ್ಷರು ಮತ್ತು ಇತರ ನಾಯಕರು ಒಟ್ಟಿಗೆ ಕುಳಿತು ಸಮಸ್ಯೆಗಳ ಬಗ್ಗೆ ಚರ್ಚಿಸಲಿದ್ದಾರೆ ಎಂದು ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಹೋದರ ಡಿ.ಕೆ ಸುರೇಶ್ ಹೇಳಿದ್ದಾರೆ.

  • Karnataka CM-LIVE UPDATE: ಕಾಂಗ್ರೆಸ್ ಸರ್ಕಾರ ರಚನೆಗೂ ಮುನ್ನವೇ ಸಚಿವ ಸ್ಥಾನಕ್ಕಾಗಿ ಬೇಡಿಕೆ ಹೆಚ್ಚಾಗಿದೆ. ಸಚಿವ ಸ್ಥಾನ ನೀಡುವಂತೆ ಬಂಗಾರಪೇಟೆ ಶಾಸಕ ಎಸ್.ಎನ್.ನಾರಾಯಣಸ್ವಾಮಿ ಮನವಿ ಮಾಡಿದ್ದಾರೆ. ಎಸ್.ಸಿ ಬಲಗೈ ಸಮುದಾಯಕ್ಕೆ ಸೇರಿದ ಶಾಸಕ ಇವರಾಗಿದ್ದು, ಸತತವಾಗಿ‌ ಮೂರು ಬಾರಿ ಶಾಸಕಾರಾಗಿ ಆಯ್ಕೆಯಾಗಿದ್ದಾರೆ. ಇನ್ನೊಂದು ವಿಚಾರವಾಗಿ ಜಿಲ್ಲೆಯ ನಾಲ್ಕು ಕಾಂಗ್ರೆಸ್ ಶಾಸಕರ ಪೈಕಿ ಹಿರಿಯರು ಅನ್ನೋ ಕಾರಣಕ್ಕಾಗಿ ಸಚಿವ ಸ್ಥಾನದ ಬೇಡಿಕೆ ಇಡಲಾಗಿದೆ.

  • ರಾಜ್ಯದಲ್ಲಿ ಹೆಚ್ಚು ಲಿಂಗಾಯತ ಅಭ್ಯರ್ಥಿಗಳು ಚುನಾಯಿತರಾಗಿದ್ದು, ಕ್ಷೇತ್ರದಿಂದ ಹೊರಗಿದ್ದರು ಕೂಡಾ ಧಾರವಾಡ ಗ್ರಾಮಾಂತರ ವಿಧಾನಸಭಾದಿಂದ ಆಯ್ಕೆಯಾದ ವಿನಯ ಕುಲಕರ್ಣಿ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಕರ್ನಾಟಕ ರಾಜ್ಯ ಪ್ರದೇಶ‌‌‌ ಕಾಂಗ್ರೆಸ್ ಸಮಿತಿ ವಕ್ತಾರ ಗಂಗಾಧರ ದೊಡ್ಡವಾಡ ಒತ್ತಾಯಿಸಿದ್ದಾರೆ.

ZEENEWS TRENDING STORIES

By continuing to use the site, you agree to the use of cookies. You can find out more by Tapping this link