Karnataka New CM Siddaramaiah: ಸಿದ್ದರಾಮಯ್ಯ ಮುಂದಿನ ಮುಖ್ಯಮಂತ್ರಿ..!
Karnataka Live Updates: ಕರ್ನಾಟಕ ಚುನಾವಣೆ ಬಳಿಕ ಐತಿಹಾಸಿಕ 113 ಸೀಟುಗಳನ್ನು ಗೆದ್ದ ಕಾಂಗ್ರೆಸ್ ಇದೀಗ ಸಿಎಂ ಆಯ್ಕೆ ಪ್ರಕ್ರಿಯೆಯಲ್ಲಿ ಬ್ಯುಸಿಯಾಗಿದೆ. ಇಂದು ಸಿದ್ದರಾಮಯ್ಯ ದೆಹಲಿಗೆ ತೆರಳಲಿದ್ದು, ಸಿಎಂ ಆಯ್ಕೆ ಪ್ರಕ್ರಿಯೆ ಇಂದೇ ನಡೆಯಲಿದೆ ಎಂದು ಹೇಳಲಾಗುತ್ತಿದೆ.
Karnataka New CM Siddaramaiah: ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಯಾರು ಅನ್ನೋ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ. ಕರ್ನಾಟಕ ಮುಂದಿನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಹೈಕಮಾಂಡ್‍ನಿಂದ ಅಧಿಕೃತ ಘೋಷಣೆಯೊಂದೇ ಬಾಕಿ ಉಳಿದಿದೆ.
Latest Updates
ದೆಹಲಿಯಲ್ಲಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಿಂದ ಕರ್ನಾಟಕದ ಕಾಂಗ್ರೆಸ್ ಕೇಂದ್ರ ವೀಕ್ಷಕ ಸುಶೀಲ್ ಶಿಂಧೆ ಹೊರಬರುತ್ತಿರುವುದು.ಅವರು ಮುಖ್ಯಮಂತ್ರಿ ಅಭ್ಯರ್ಥಿಗೆ ಸಂಬಂಧಿಸಿದಂತೆ ಕರ್ನಾಟಕದ ಶಾಸಕರ ಅಭಿಪ್ರಾಯದ ವರದಿಯನ್ನು ಮಲ್ಲಿಕಾರ್ಜುನ ಖರ್ಗೆ ಅವರಿಗೆ ಸಲ್ಲಿಸಿದರು.
ದೆಹಲಿಯಲ್ಲಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸಕ್ಕೆ ಆಗಮಿಸಿದ ಡಿಕೆ ಶಿವಕುಮಾರ್ ಸಹೋದರ ಡಿಕೆ ಸುರೇಶ್
ಇಂದು ಸಂಜೆ ದೆಹಲಿಗೆ ಹೋಗಬೇಕು ಎಂದುಕೊಂಡಿದ್ದೆ.ಅನಾರೋಗ್ಯದ ಕಾರಣದಿಂದ ಹೋಗೋಕೆ ಆಗಿಲ್ಲ, ಜ್ವರ ಮತ್ತು ಬಿಪಿ ಸಮಸ್ಯೆಯಿಂದ ಬಳಲುತ್ತಿದ್ದೇನೆ ಹಾಗಾಗಿ ನಾಳೆ ಹೋಗುತ್ತೇನೆ.ನಾನು ಯಾವುದೇ ಗಾಸಿಪ್ ಬಗ್ಗೆ ತಲೆಕೆಡಿಸಿಕೊಳ್ಳಲ್ಲ.ಶಿಮ್ಲಾದಿಂದ ಸೋನಿಯಾ ಗಾಂಧಿ ನಾಳೆ ದೆಹಲಿಗೆ ವಾಪಸ್ಸಾಗಲಿದ್ದಾರೆ ಹಾಗಾಗಿ ನನಗೆ ಸೋನಿಯಾ ಗಾಂಧಿ ಅವರನ್ನು ಭೇಟಿಯಾಗುವುದು ನನ್ನ ಮೊದಲ ಆಧ್ಯತೆಯಾಗಿದೆ ಎಂದು ಡಿಕೆ.ಶಿವಕುಮಾರ್ ಹೇಳಿದ್ದಾರೆ.
ಹೈಕಮಾಂಡ್ ನ ಪ್ರತಿಯೊಬ್ಬರು ಕಾಲ್ ಮಾಡಿ ಆರೋಗ್ಯ ವಿಚಾರಿಸಿದ್ದಾರೆ ಸೋನಿಯಾಗಾಂಧಿ ಭೇಟಿ ಬಗ್ಗೆ ಎಲ್ಲರಿಗೂ ತಿಳಿಸಿಯೇ ಹೋಗ್ತೇನೆ ಎಂದು ಅವರು ಹೇಳಿದರು.
ನನ್ನನ್ನು ಬಿಟ್ಟುಬಿಡಿ,ಮಕ್ಕಳ ಜೊತೆ ಊಟಕ್ಕೆ ತೆರಳಬೇಕು ಎಂದುಕೊಂಡಿದ್ದೆ.ದೇವಸ್ಥಾನಕ್ಕೆ ತೆರಳಿದ್ರು ನನ್ನನ್ಮು ಬಿಡ್ತಿಲ್ಲ ಎಂದು ಹೇಳುವ ಮೂಲಕ ಮಾಧ್ಯಮಗಳಿಂದಆಗುತ್ತಿರುವ ಹಿಂಸೆ ಮತ್ತು ಕಿರುಕುಳವನ್ನು ಅವರು ತೋಡಿಕೊಂಡರು.
ಸಿಎಂ ಆಯ್ಕೆ ಪಕ್ಷದ ವರಿಷ್ಠರ ತೀರ್ಮಾನ: ಯಾರಿಗೆ ಶಾಸಕರ ಬೆಂಬಲ ಇದೆಯೆಂಬುದು ಮುಖ್ಯವಲ್ಲ. ಸಿಎಂ ಆಯ್ಕೆಯನ್ನು ಪಕ್ಷದ ವರಿಷ್ಠರ ತೀರ್ಮಾನಕ್ಕೆ ಬಿಟ್ಟಿದ್ದೇವೆಂದು ಸದಾಶಿವನಗರದ ತಮ್ಮ ನಿವಾಸದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ನನ್ನ ಅಧ್ಯಕ್ಷತೆಯಲ್ಲಿ 135 ಶಾಸಕರು ಆಯ್ಕೆಯಾಗಿದ್ದಾರೆ. ನನಗೆ ಕೊಂಚ ಆರೋಗ್ಯ ಸಮಸ್ಯೆಯಾಗಿದೆ. ಹೀಗಾಗಿ ವೈದ್ಯರು ವಿಶ್ರಾಂತಿಗೆ ಸೂಚಿಸಿದ್ದಾರೆ. ನಾನು ವಿಶ್ರಾಂತಿ ತೆಗೆದುಕೊಳ್ಳುತ್ತೇನೆ ಅಂತಾ ಹೇಳಿದ್ದಾರೆ.
ಮೇ 17 ಅಥವಾ 18ರಂದು ನೂತನ ಸಿಎಂ ಪ್ರಮಾಣವಚನ?: ಮೇ 17 ಅಥವಾ 18ರಂದು ನೂತನ ಸಿಎಂ ಜೊತೆ ಕೆಲ ಸಚಿವರು ಸಹ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ. ಮೊದಲಿಗೆ ಕೆಲ ಹಿರಿಯರನ್ನು ಒಳಗೊಂಡ ಸಂಪುಟ ಅಸ್ತಿತ್ವಕ್ಕೆ ಬರಲಿದೆ ಎಂದು ಹೇಳಲಾಗುತ್ತಿದೆ. ಈಗಾಗಲೇ ಸಿದ್ದರಾಮಯ್ಯರನ್ನು ಮುಂದಿನ ಸಿಎಂ ಎಂದು ಕಾಂಗ್ರೆಸ್ ವರಿಷ್ಠರು ಘೋಷಿಸಿದ್ದು, ಇನ್ನಷ್ಟೇ ಅಧಿಕೃತವಾಗಬೇಕಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‍ಗೆ ಉಪಮುಖ್ಯಮಂತ್ರಿ ಪಟ್ಟ ನೀಡಲು ನಿರ್ಧರಿಸಲಾಗಿದೆ. ಮೂಲಗಳ ಪ್ರಕಾರ ನೂತನ ಕಾಂಗ್ರೆಸ್ ಸರ್ಕಾರದಲ್ಲಿ ನಾಲ್ವರು ಡಿಸಿಎಂ ಆಗಲಿದ್ದಾರೆಂದು ಹೇಳಲಾಗುತ್ತಿದೆ.
ಡಿಕೆಶಿ ಅನಾರೋಗ್ಯ ಹಿನ್ನೆಲೆ ತಪಾಸಣೆ: ಕೆಪಿಸಿಸಿ ಡಿ.ಕೆ.ಶಿವಕುಮಾರ್ ಅನಾರೋಗ್ಯ ಹಿನ್ನೆಲೆ ವೈದ್ಯರಾದ ಭಗವಾನ್ ಎಂಬುವರು ತಪಾಸಣೆ ಮಾಡಲಾಗಿದೆ. ಬಿಪಿ ಚೆಕ್ ಮಾಡಿರುವ ವೈದ್ಯರು 140 ಬಿಪಿ ಇದ್ದು, ರೆಸ್ಟ್ ಮಾಡಿ ಎಂದು ಸಲಹೆ ನೀಡಿದ್ದಾರೆ.
ಸಿದ್ದರಾಮಯ್ಯ ಮುಂದಿನ ಮುಖ್ಯಮಂತ್ರಿ: ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಯಾರು ಅನ್ನೋ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ. ಕರ್ನಾಟಕ ಮುಂದಿನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಹೈಕಮಾಂಡ್‍ನಿಂದ ಅಧಿಕೃತ ಘೋಷಣೆಯೊಂದೇ ಬಾಕಿ ಉಳಿದಿದೆ.
ನಾನು ಪೂಜೆ-ಪುನಸ್ಕಾರ ಮಾಡಬೇಕಿದೆ: ಸಿಎಂ ಆಯ್ಕೆ ವಿಚಾರ ಕಗ್ಗಂಟಾಗಿರುವ ಹಿನ್ನೆಲೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬೇಸರದಲ್ಲಿದ್ದಾರೆ. ನನಗೆ ಯಾರ ಬೆಂಬಲವೂ ಬೇಡ, ನನ್ನ ಕರ್ತವ್ಯವನ್ನು ನಾನು ಮಾಡಿದ್ದೇನೆ ಎಂದು ಹೇಳಿದ್ದಾರೆ. ನನ್ನತ್ರ ನಂಬರ್ ಇಲ್ಲ. ನಾನು ಪಕ್ಷ ಪೂಜೆ ಮಾಡ್ತೀನಿ ಹೊರತು ವ್ಯಕ್ತಿ ಪೂಜೆಯಲ್ಲ. ಸದ್ಯ ನನಗೆ ರೆಸ್ಟ್ ಬೇಕಿದೆ, ಆರೋಗ್ಯದಲ್ಲಿ ಏರುಪೇರಾಗಿದೆ. ಹೊಟ್ಟೆಯಲ್ಲಿ ಇಂಪೆಕ್ಷನ್ ಆಗಿದೆ. ದಯವಿಟ್ಟು ನನ್ನನ್ನು ಬಿಟ್ಟುಬಿಡಿ. ನಾನು ಪೂಜೆ-ಪುನಸ್ಕಾರ ಮಾಡಬೇಕು ಎಂದು ಡಿಕೆಶಿ ಹೇಳಿದ್ದಾರೆ.
ಸದಾಶಿವನಗರ ನಿವಾಸದಲ್ಲಿ ಸೋಮವಾರ ಸಂಜೆ ಡಿ.ಕೆ. ಶಿವಕುಮಾರ್ ಅವರ ಮಾಧ್ಯಮ ಪ್ರತಿಕ್ರಿಯೆ
ಇಂದು ನನ್ನ ಜನ್ಮದಿನವಾಗಿದ್ದು, ನನ್ನ ಖಾಸಗಿ ಕಾರ್ಯಕ್ರಮದಲ್ಲಿ ನನ್ನ ಗುರುಗಳನ್ನು ಭೇಟಿ ಮಾಡಲಿದ್ದೇನೆ.ನಂತರ ನಾನು ದೆಹಲಿಗೆ ಪ್ರಯಾಣ ಬೆಳೆಸಬೇಕಿದೆ.
ನಿನ್ನೆ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಪಕ್ಷದ 135 ಶಾಸಕರೂ ತಮ್ಮ ಅಭಿಪ್ರಾಯವನ್ನು ತಿಳಿಸಿದ್ದು, ಸಿಎಂ ಆಯ್ಕೆ ತೀರ್ಮಾನವನ್ನು ಕಾಂಗ್ರೆಸ್ ಪಕ್ಷದ ಅಧ್ಯಕ್ಷರ ತೀರ್ಮಾನಕ್ಕೆ ಬಿಡಲು ಎಲ್ಲಾ ಶಾಸಕರು ಸರ್ವಾನುಮತದ ಒಪ್ಪಿಗೆ ನೀಡಿದ್ದಾರೆ. ನನಗೆ ಯಾರ ನಂಬರ್ ಬಗ್ಗೆ ಮಾತನಾಡುವ ಶಕ್ತಿ ಇಲ್ಲ. ಡಬಲ್ ಇಂಜಿನ್ ಸರ್ಕಾರ ಹಾಗೂ ಭ್ರಷ್ಟಾಚಾರ ವಿರುದ್ಧ ನನ್ನ ಅಧ್ಯಕ್ಷತೆಯಲ್ಲಿ ಪಕ್ಷದ 135 ಅಭ್ಯರ್ಥಿಗಳು ಗೆಲವು ಸಾಧಿಸಿದ್ದಾರೆ. ಈ ಸಂದರ್ಭದಲ್ಲಿ ನಮ್ಮ ಚುನಾವಣೆ ನಡೆಸಿದ ರೀತಿ, ಒಗ್ಗಟ್ಟಿನ ಪ್ರದರ್ಶನ ಎಲ್ಲವೂ ದೇಶಕ್ಕೆ ಮಾದರಿಯಾಗಿದ್ದು, ಅನೇಕ ನಾಯಕರುಗಳು ಪ್ರಶಂಸೆ ವ್ಯಕ್ತಪಡಿಸಿದ್ದಾರೆ..
ಕೆಲವು ಕಡೆಗಳಲ್ಲಿ ಸ್ಥಳೀಯವಾಗಿ ಉತ್ತಮವಾಗಿ ಸಂಘಟನೆ ಮಾಡಿದ್ದರೆ ನಮ್ಮ ಸಂಖ್ಯೆ ಇನ್ನು ಸ್ವಲ್ಪ ಹೆಚ್ಚಾಗುತ್ತಿತ್ತು. ಆದರೂ ನಮ್ಮ ಫಲಿತಾಂಶ ತೃಪ್ತಿ ತಂದಿದೆ. ಇಂದು ನಮ್ಮ ವರಿಷ್ಠರು ನನ್ನನ್ನು ಹಾಗೂ ಸಿದ್ದರಾಮಯ್ಯ ಅವರನ್ನು ದೆಹಲಿಗೆ ಕರೆದಿದ್ದಾರೆ. ನಾನು ಹೋಗುತ್ತಿದ್ದೇನೆ. ನಾನು ಹೋಗುವುದು ಸ್ವಲ್ಪ ತಡವಾಗಲಿದೆ.
ನನ್ನ ವೈಯಕ್ತಿಕ ಬೆಂಬಲಕ್ಕೆ ಹೆಚ್ಚಿನ ಶಾಸಕರ ಸಂಖ್ಯಾಬಲವಿಲ್ಲದಿರಬಹುದು, ಆದರೆ ಪಕ್ಷದ 135 ಶಾಸಕರ ಸಂಖ್ಯೆ ನನ್ನ ಸಂಖ್ಯೆ. ನನ್ನನ್ನು ಪಕ್ಷದ ಅಧ್ಯಕ್ಷನಾಗಿ ಆಯ್ಕೆ ಮಾಡಿದಾಗ ನಾನು ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಅವರಿಗೆ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ತರುವ ಭರವಸೆ ನೀಡಿದ್ದೆ. ನಾನು ಕೊಟ್ಟ ಮಾತನ್ನು ಈಡೇರಿಸಿದ್ದೇನೆ.
ಬೇರೆಯವರ ಹೇಳಿಕೆ ಬಗ್ಗೆ ಕೇಳಿದ ಪ್ರಶ್ನೆಗೆ, ‘ನಾನು ಬೇರೆಯವರ ಹೇಳಿಕೆಗಳ ಬಗ್ಗೆ ಪ್ರತಿಕ್ರಿಯೆ ನೀಡುವುದಿಲ್ಲ. ನಾನು ಓರ್ವ ವ್ಯಕ್ತಿ. ನಾನು ಧೈರ್ಯವಾಗಿ ಪಕ್ಷವನ್ನು ಮುನ್ನಡೆಸಿದ್ದು, ನನ್ನ ಸಾಮರ್ಥ್ಯವನ್ನು ಸಾಬೀತುಪಡಿಸಿದ್ದೇನೆ. ಕಳೆದ ಐದು ವರ್ಷಗಳಲ್ಲಿ ಏನೆಲ್ಲಾ ಆಗಿದೆ ಎಂದು ನಾನು ಬಹಿರಂಗಪಡಿಸುವುದಿಲ್ಲ. ಭವಿಷ್ಯದಲ್ಲಿ ಇದರ ಬಗ್ಗೆ ಮಾತನಾಡುತ್ತೇನೆ. ನಾವು ಮೈತ್ರಿ ಸರ್ಕಾರ ಕಳೆದುಕೊಂಡಾಗ ಶಾಸಕರು ಪಕ್ಷ ಬಿಟ್ಟು ಹೋದಾಗ ನಾವು ಧೃತಿಗೆಡಲಿಲ್ಲ. ಧೈರ್ಯವಾಗಿ ಜವಾಬ್ದಾರಿ ಹೊತ್ತು, ಕೆಲಸ ಮಾಡಿದ್ದೇನೆ. ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅವರು ನನಗೆ ಧೈರ್ಯ ತುಂಬಿದ್ದು, ಈ ವಿಚಾರವನ್ನು ಅವರಿಗೆ ಬಿಡುತ್ತೇನೆ’ ಎಂದು ತಿಳಿಸಿದರು.
ನೊಣವಿನಕೆರೆ ಅಜ್ಜನ ಪೀಠಕ್ಕೆ ಡಿಕೆಶಿ: ತುಮಕೂರು ಜಿಲ್ಲೆಯ ನೊಣವಿನಕೆರೆ ಅಜ್ಜನ ಪೀಠಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಭೇಟಿ ನೀಡಿದ್ದಾರೆ. ಸಿಎಂ ಆಯ್ಕೆ ವಿಚಾರವಾಗಿ ದೆಹಲಿಗೆ ತೆರಳುವ ಮುನ್ನ ಡಿಕೆಶಿ ಅಜ್ಜಯ್ಯನ ಮೊರೆಬಂದಿದ್ದಾರೆ. ಅಜ್ಜಯ್ಯನ ಮುಂದೆ ಡಿಕೆಶಿ ಕುಟುಂಬ ಪ್ರಶ್ನೆಗೆ ಮುಂದಾಗಿದೆ. ಬಸವೇಶ್ವರನಗರದಲ್ಲಿರುವ ನೊಣವಿನಕೆರೆ ಅಜ್ಜಯ್ಯನ ಪೀಠಕ್ಕೆ ಡಿಕೆಶಿ ಕುಟುಂಬ ಸಮೇತ ಭೇಟಿ ನೀಡಿ ಆಶೀರ್ವಾದ ಪಡೆದುಕೊಂಡಿದ್ದಾರೆ.
ನಾನು ಧೈರ್ಯದಲ್ಲಿ, ವಿಶ್ವಾಸದಲ್ಲಿ ನಂಬಿಕೆಯಿಟ್ಟಿದ್ದೇನೆ: ಸಿಎಂ ಆಯ್ಕೆ ಕಗ್ಗಂಟು ವಿಚಾರವಾಗಿ ಸೋಮವಾರ ಸುದ್ದಿಗೋಷ್ಠಿ ನಡೆಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ‘ನಾನು ಎಐಸಿಸಿ ಅಧ‍್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರಿಗೆ ಮಾತು ಕೊಟ್ಟಿದ್ದೆ. ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುತ್ತೇನೆ ಎಂದು ಮಾತುಕೊಟ್ಟಿದ್ದೆ, ಅದರಂತೆ ಪಕ್ಷವನ್ನು ಬಹುಮತದಿಂದ ಗೆಲ್ಲಿಸಿದ್ದೇನೆ’ ಎಂದು ಹೇಳಿದ್ದಾರೆ.
‘ನಾನು ಯಾರ ಕ್ಲೇಮ್ ಬಗ್ಗೆಯೂ ಮಾತಾಡಲ್ಲ, ನಾನು ಸಿಂಗಲ್ ಮ್ಯಾನ್, ನಾನು ಧೈರ್ಯದಲ್ಲಿ ಮತ್ತು ವಿಶ್ವಾಸದಲ್ಲಿ ನಂಬಿಕೆಯಿಟ್ಟವನು. ಹಿಂದಿನ 5 ವರ್ಷಗಳಲ್ಲಿ ಏನಾಗಿದೆ ಎಂದು ಬಾಯಿ ಬಿಡಲ್ಲ. ಮುಂದಿನ ದಿನಗಳಲ್ಲಿ ಇದರ ಬಗ್ಗೆ ಹೇಳುತ್ತೇನೆ, ನಾನು ಸಿಂಗಲ್ ಮ್ಯಾನ್ ಎಂದು ಡಿಕೆಶಿ ಹೇಳಿದ್ದಾರೆ.
ಮಹಾತ್ಮಾ ಗಾಂಧೀಜಿ ಒಂದು ಮಾತು ಹೇಳಿದ್ದರು. ಸೋತಾಗ ಧೈರ್ಯದಿಂದ ಇರಬೇಕು, ಗೆದ್ದಾಗ ಉದಾರ ಮನಸ್ಸಿನಿಂದ ಇರಬೇಕು. 15 ಜನ ಶಾಸಕರು ಪಕ್ಷ ಬಿಟ್ಟು ಹೋದಾದ ಬೇಸರ ಆಗಿಲ್ಲ. ಧೈರ್ಯದಿಂದ ಆ ಸಂದರ್ಭವನ್ನು ಎದುರಿಸಿದ್ದೆ. ಮಲ್ಲಿಕಾರ್ಜುನ್ ಖರ್ಗೆ ಅವರಿಗೆ ರಾಜ್ಯ ರಾಜಕಾರಣದ ಬಗ್ಗೆ ಅಧಿಕಾರ ಇದೆ. ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಯವರಿಗೆ ವಿಶ್ವಾಸವಿದೆ. ಈ ವಿಚಾರವನ್ನು ಅವರಿಗೆ ಬಿಡುತ್ತೇನೆ’ ಎಂದು ಡಿಕೆಶಿ ಹೇಳಿದ್ದಾರೆ.
ಸಿದ್ಧಗಂಗಾ ಮಠಕ್ಕೆ ಕುಟುಂಬ ಸಮೇತ ವಿಜಯೇಂದ್ರ ಭೇಟಿ: ತುಮಕೂರಿನ ಸಿದ್ಧಗಂಗಾ ಮಠಕ್ಕೆ ಬಿ.ವೈ.ವಿಜಯೇಂದ್ರ ತಮ್ಮ ಕುಟುಂಬ ಸಮೇತ ಸೋಮವಾರ ಭೇಟಿಯಾಗಿದ್ದಾರೆ. ಶಾಸಕರಾಗಿ ಗೆದ್ದ ಬಳಿಕ ಮೊದಲ ಸಲ ಶ್ರೀಮಠಕ್ಕೆ ಭೇಟಿ ನೀಡಿ ದರ್ಶನ ಪಡೆದುಕೊಂಡಿದ್ದಾರೆ.
ಸಿದ್ದರಾಮಯ್ಯರನ್ನೇ ಸಿಎಂ ಮಾಡುವಂತೆ ಒತ್ತಾಯ: ಸಿದ್ದರಾಮಯ್ಯನವರನ್ನೇ ಮುಖ್ಯಮಂತ್ರಿ ಮಾಡುವಂತೆ ಶೋಷಿತ ಸಮುದಾಯಗಳ ಒಕ್ಕೂಟ ಆಗ್ರಹಿಸಿದೆ. ಮುಖ್ಯಮಂತ್ರಿ ಅಭ್ಯರ್ಥಿ ಘೋಷಣೆ ವಿಳಂಬ ಹಿನ್ನೆಲೆ ತುರ್ತು ಸುದ್ದಿಗೋಷ್ಠಿ ನಡಸಿರುವ ಶೋಷಿತ ಸಮುದಾಯಗಳು ಮಾಜಿ ಸಿಎಂ ಸಿದ್ದರಾಮಯ್ಯರ ಬೆನ್ನಿಗೆ ನಿಂತಿವೆ. ಕಾಂಗ್ರೆಸ್‍ನಲ್ಲಿ ಸಿಎಂ ಸ್ಥಾನಕ್ಕಾಗಿ ಪ್ರಬಲ ಪೈಪೋಟಿ ನಡೆಯತ್ತಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‍ಗೆ ಒಕ್ಕಲಿಗರ ಸಮುದಾಯ ಬೆಂಬಲ ವ್ಯಕ್ತಪಡಿಸಿದೆ.
ಸಿದ್ದರಾಮಯ್ಯ & ಡಿಕೆಶಿ ನನ್ನ ಎರಡು ಕಣ್ಣುಗಳಿದ್ದಂತೆ!: ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನನ್ನ ಎರಡು ಕಣ್ಣುಗಳಿದ್ದಂತೆ ಎಂದು ಚಿಕ್ಕಬಳ್ಳಾಪುರದಿಂದ ಆಯ್ಕೆಯಾಗಿರುವ ಪ್ರದೀಪ್ ಈಶ್ವರ್ ಹೇಳಿದ್ದಾರೆ. ಸಿಎಂ ಆಯ್ಕೆ ವಿಚಾರ ಹೈಕಮಾಂಡ್ ನಿರ್ಧಾರಕ್ಕೆ ಬಿಟ್ಟಿದ್ದು ಎಂದು ಅವರು ಹೇಳಿದ್ದಾರೆ.
ಡಿಕೆಶಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದ ಬೊಮ್ಮಾಯಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‍ಗೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಹುಟ್ಟು ಹಬ್ಬದ ಶುಭಾಶಯ ಕೋರಿದ್ದಾರೆ. ದೂರವಾಣಿ ಕರೆ ಮಾಡಿದ ಬೊಮ್ಮಾಯಿ ಡಿಕೆಶಿಗೆ ಶುಭ ಕೋರಿದ್ದಾರೆ.
ಶಾಸಕರ ಅಭಿಪ್ರಾಯ ಹಾಗೂ ಹೈಕಮಾಂಡ್ ತೀರ್ಮಾನವೇ ಅಂತಿಮ. ಸಿಎಂ ಆಯ್ಕೆ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಗೊಂದಲ ಇಲ್ಲ ಎಂದು ವಿಪಕ್ಷ ನಾಯಕ ಬಿಕೆ ಹರಿಪ್ರಸಾದ್ ಹೇಳಿದ್ದಾರೆ. ದೇಶಕ್ಕೆ ಮಾದರಿ ಆಡಳಿತ ನೀಡುವ ವ್ಯಕ್ತಿ ಹಾಗೂ ಪಕ್ಷವನ್ನ ಉಳಿಸುವವರು ಮುಖ್ಯಮಂತ್ರಿ ಆಗಬೇಕೆಂಬುದು ನನ್ನ ಅಭಿಪ್ರಾಯ. ಹೈಕಮಾಂಡ್ ನನ್ನ ಅಭಿಪ್ರಾಯ ಕೇಳಿದರೆ ಹೇಳುತ್ತೇನೆ. ಸಿಎಲ್ ಪಿ ಸಭೆಯಲ್ಲಿ ಒಂದು ಸಾಲಿನ ನಿರ್ಣಯ ತೆಗೆದುಕೊಂಡಿದ್ದೇವೆ. ಬಿಜೆಪಿಯವರಂತೆ ತಿಂಗಳ ಕಾಲ ಸಿಎಂ ಆಯ್ಕೆ ಮಾಡದೆ ಇರುವ ಸಂಪ್ರದಾಯ ನಮ್ಮಲ್ಲಿ ಇಲ್ಲ. ಶಾಸಕರ ಅಭಿಪ್ರಾಯ ತೆಗೆದುಕೊಂಡು ಮುಖ್ಯಮಂತ್ರಿ ಮಾಡುವುದು ನಮ್ಮ ಸಂಪ್ರದಾಯ. ನಾಗಪುರದಿಂದ ಬಂದವರು ಸಿಎಂ ಆಯ್ಕೆ ಮಾಡುವ ಸಂಸ್ಕೃತಿ ನಮ್ಮಲ್ಲಿಲ್ಲ ಎಂದು ಬೆಂಗಳೂರಿನಲ್ಲಿ ಬಿಕೆ ಹರಿಪ್ರಸಾದ್ ಬಿಜೆಪಿಗೆ ತಿರುಗೇಟು ನೀಡಿದ್ದಾರೆ.
Karnataka New CM- Live Updates: ಕರ್ನಾಟಕ ಚುನಾವಣೆಯಲ್ಲಿ ಬಹುಮತ ಪಡೆದುಕೊಂಡಿ ಕಾಂಗ್ರೆಸ್ ಗೆದ್ದಿದೆ. ಇದೀಗ ಸಿಎಂ ಯಾರಾಗ್ತಾರೆ ಎಂಬ ಪ್ರಶ್ನೆ ಎಲ್ಲೆಡೆ ಮನೆಮಾಡಿದೆ. ಇಂದು ದೆಹಲಿಯಲ್ಲಿ ಸಿಎಂ ಆಯ್ಕೆ ಪ್ರಕ್ರಿಯೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ದೆಹಲಿ ಪ್ರವಾಸ ಮಾಡಿದ್ದಾರೆ. ಸಂಜೆ ವೇಳೆ ಡಿಕೆ ಶಿವಕುಮಾರ್ ಸಹ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ ಎಂದು ಮೂಲಗಳು ಹೇಳುತ್ತಿವೆ. ಇವೆಲ್ಲದರ ಜೊತೆಗೆ ಸುಶೀಲ್ ಕುಮಾರ್ ಶಿಂಧೆ, ದೀಪಕ್ ಬವ್ಡಿಯಾ ಮತ್ತು ಭನ್ವರ್ ಜಿತೇಂದ್ರ ಸಿಂಗ್ ದೆಹಲಿಗೆ ಆಗಮಿಸಿದ್ದಾರೆ.
Karnataka New CM- Live Updates: ಕಾಂಗ್ರೆಸ್ ಹೈಕಮಾಂಡ್ ಬುಲಾವ್ ನೀಡಿರುವ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ಇನ್ನು ಸಂಜೆ ವೇಳೆಗೆ ಡಿಕೆ ಶಿವಕುಮಾರ್ ಸಹ ದೆಹಲಿ ಕಡೆ ಮುಖ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ.
ಚುನಾವಣೆಯ ಫಲಿತಾಂಶದ ಬಳಿಕ ಹಂಗಾಮಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಆರ್ ಎಸ್ ಎಸ್ ನಾಯಕರೊಂದಿಗೆ ಪಕ್ಷ ಸಂಘಟನೆ ಬಗ್ಗೆ ಚರ್ಚೆ ನಡೆಸಿದರು. ಇಂದು ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಕೇಶವ ಕೃಪಕ್ಕೆ ಭೇಟಿ ನಂತರ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ಇಂದು ಆರ್ ಎಸ್ ಎಸ್ ಮುಖಂಡರೊಂದಿಗೆ ಚುನಾವಣೆ ಫಲಿತಾಂಶದ ಬಗ್ಗೆ ಚರ್ಚೆ ಮಾಡಿದ್ದೇವೆ. ಮುಂಬರುವಂತಹ ದಿನಗಳಲ್ಲಿ ಪಕ್ಷವನ್ನು ಮುಂದೆ ಹೇಗೆ ಸಂಘಟಿಸಬೇಕು ಎಂಬುದರ ಬಗ್ಗೆ ಚರ್ಚೆ ಆಗಿದೆ. ರಾಜ್ಯಾಧಕ್ಷರು, ವರಿಷ್ಠರ ಜೊತೆಗೆ ಹಲವಾರು ಬಾರಿ ಚರ್ಚಿಸಿ ಭಾರತೀಯ ಜನತಾ ಪಕ್ಷವನ್ನು ಹೇಗೆ ಸಂಘಟನೆ ಮಾಡಬೇಕು ಎನ್ನುವ ತೀರ್ಮಾನ ಮಾಡುತ್ತೇವೆ ಎಂದರು.
Karnataka New CM- Live Updates: ಡಿಕೆ ಶಿವಕುಮಾರ್ ಸಿಎಂ ಆಗಲಿ ಎಂದು ಅವರ ಅಭಿಮಾನಿಗಳು ನೆಲಮಂಗಲದ ವಾದಕುಂಟೆ ಗ್ರಾಮದ ಶ್ರೀರಾಮ ಮಂದಿರದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಡಿಕೆಶಿಗೆ ಜೈಕಾರ ಹಾಕುತ್ತಾ 1001 ತೆಂಗಿನಕಾಯಿ ಒಡೆದಿದ್ದಾರೆ. ಇದೇ ಸಂದರ್ಭದಲ್ಲಿ ಮುಂದಿನ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಎಂದು ಘೋಷಣೆ ಕೂಡ ಕೂಗಿದ್ದಾರೆ. ಈ ಬಳಿಕ ಪಟಾಕಿ ಸಿಡಿಸಿ ಸಿಹಿ ಹಂಚಲಾಗಿದೆ.
"ಒಂದು ಸಾಲಿನ ನಿರ್ಣಯವನ್ನು ಅಂಗೀಕರಿಸಿದ್ದೇವೆ. ಅದನ್ನು ಪಕ್ಷದ ಹೈಕಮಾಂಡ್’ಗೆ ಬಿಡುತ್ತೇವೆ. ನಾನು ದೆಹಲಿಗೆ ಹೋಗಲು ನಿರ್ಧರಿಸಿಲ್ಲ, ನಾನು ಏನು ಮಾಡಬೇಕೋ ಅದನ್ನು ಮಾಡಿದ್ದೇನೆ" ಎಂದು ಕರ್ನಾಟಕ ಸಿಎಂ ನಿರ್ಧಾರದ ಕುರಿತು ಕೆಪಿಸಿಸಿ ಮುಖ್ಯಸ್ಥ ಡಿಕೆ ಶಿವಕುಮಾರ್ ಹೇಳಿಕೆ ನೀಡಿದ್ದಾರೆ.
ಮೇ 18ಕ್ಕೆ ನೂತನ ಮುಖ್ಯಮಂತ್ರಿ ಪ್ರಮಾಣ ವಚನ ಕಾರ್ಯಕ್ರಮ ನಿಗದಿ
ಇಂದು ಸಂಜೆ ಶಾಸಕಾಂಗ ನಾಯಕರ ಹೆಸರು ಘೋಷಣೆ
ಇಂದು ಸಂಜೆ ಅಥವಾ ನಾಳೆ ಬೆಳಗ್ಗೆ ರಾಜ್ಯಪಾಲರ ಭೇಟಿ ಮಾಡಿ ಸರ್ಕಾರ ರಚನೆ ಹಕ್ಕು ಮಂಡಿಸಲಿರುವ ಕಾಂಗ್ರೆಸ್
ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಆಯ್ಕೆ ಬಹತೇಕ ಖಚಿತ
ಶಾಸಕಾಂಗ ನಾಯಕನಾಗಿ ಡಿ.ಕೆ.ಶಿವಕುಮಾರ್ ಹೆಸರು ಘೋಷಿಸಲಿರುವ ಎಐಸಿಸಿ ಅಧ್ಯಕ್ಷರು
ಡಿಸಿಎಂ ಸ್ಥಾನ ಸೃಷ್ಠಿ ಸಾಧ್ಯತೆ...??
ಲಿಂಗಾಯತ ಮತ್ತು ದಲಿತರಿಗೆ ಡಿಸಿಎಂ ಸ್ಥಾನ ನೀಡುವ ಬಗ್ಗೆಯೂ ಚಿಂತನೆ
ಸಿದ್ದರಾಮಯ್ಯ ಬಣಕ್ಕೆ ಡಿಸಿಎಂ ಪಟ್ಟ ಸಾಧ್ಯತೆ
Karnataka New CM- Live Updates: ಮುಂದಿನ ಸಿಎಂ ಆಯ್ಕೆಗೆ ಕಾಂಗ್ರೆಸ್‌ನಲ್ಲಿ ಕಸರತ್ತು ಮುಂದುವರೆದಿದೆ. ಇತ್ತ ಸಿದ್ದರಾಮಯ್ಯ ತವರಿನಲ್ಲಿ ಮುಂದಿನ ಮುಖ್ಯಮಂತ್ರಿ ಎಂದು ಫ್ಲೆಕ್ಸ್ ಗಳನ್ನು ಹಾಕಲಾಗಿದೆ. ಮೈಸೂರು ತಾಲೂಕಿನ ಕೀರಾಳು ಗ್ರಾಮದಲ್ಲಿ “ಸಿದ್ದರಾಮಯ್ಯ ಸಿಎಂ” ಎಂಬ ಫ್ಲೆಕ್ಸ್ ಗಳು ರಾರಾಜಿಸುತ್ತಿವೆ. 2ನೇ ಬಾರಿಗೆ ರಾಜ್ಯದ ಮುಖ್ಯಮಂತ್ರಿ ಆಗಿ ಪ್ರಮಾಣ ಸ್ವೀಕರಿಸುತ್ತಿರುವ ಸಿದ್ದರಾಮಯ್ಯ ಅವರಿಗೆ ಅಭಿನಂದನೆಗಳು ಎಂದು ಫ್ಲೆಕ್ಸ್ ನಲ್ಲಿ ಬರೆಯಲಾಗಿದೆ. ಮೈಸೂರಿನ ಸಿದ್ದರಾಮಯ್ಯ ಟಿ ಕೆ ಬಡಾವಾಣೆ ನಿವಾಸದ ಮುಂದೆಯೂ ಫ್ಲೆಕ್ಸ್ ಹಾಕಲಾಗಿದೆ.
Karnataka New CM- Live Updates: ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಿದೆ. ಈಡಿಗ ಸಮಾಜಕ್ಕೆ ಏಳು ಟಿಕೆಟ್ ನೀಡಿದ್ದು, ನಾಲ್ಕು ಜನ ಗೆದ್ದಿದ್ದಾರೆ. ಹೀಗಾಗಿ ಈಡಿಗ ಸಮುದಾಯಕ್ಕೆ ಬೆಂಬಲ ಕೊಡಬೇಕು. ಸಚಿವ ಸಂಪುಟದಲ್ಲಿ ಗೆದ್ದವರನ್ನ ಸೇರಿಸಬೇಕು ಎಂದು ಆರ್ಯ ಈಡಿಗ ಮಂಡಳಿ ಪೀಠಧ್ಯಾಕ್ಷ ಪ್ರಣವಾನಂದ ಸ್ವಾಮೀಜಿ ಹೇಳಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಿದೆ. ಸಿದ್ದರಾಮಯ್ಯ ಅವರ ಪಾತ್ರವೂ ಇದೆ. ಸಿಎಂ ಯಾರು ಆಗಬೇಕು ಅಂತ ನಾನು ಹೇಳೋದಿಲ್ಲ. ಡಿಕೆ ಹಾಗೂ ಸಿದ್ದರಾಮಯ್ಯ ಇಬ್ಬರೂ ನಮ್ಮವರೇ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ತರುವುದರಲ್ಲಿ ದೊಡ್ಡ ಪಾತ್ರ ಇದೆ. ಬಿ.ಕೆ ಹರಿಪ್ರಸಾದ್ ಕೂಡ ಹಿರಿಯರು ಇದ್ದಾರೆ. ಅವರನ್ನೂ ಪರಿಗಣಿಸಬೇಕು ಎಂದು ಹೇಳಿದ್ದಾರೆ.
Karnataka New CM- Live Updates: ಕಾಂಗ್ರೆಸ್ ಹೈಕಮಾಂಡ್ ಬುಲಾವ್ ನೀಡಿರುವ ಹಿನ್ನೆಲೆಯಲ್ಲಿ ಮಧ್ಯಾಹ್ನ 12 ಗಂಟೆ ಸುಮಾರಿಗೆ ಸಿದ್ದರಾಮಯ್ಯ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ಈಗಾಗಲೇ ಸಿದ್ದರಾಮಯ್ಯ ನಿವಾಸದ ಮುಂದೆ ಅಭಿಮಾನಿಗಳು ಜಮಾಯಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸಿದ್ದು ನಿವಾಸದತ್ತ ಪೊಲೀಸ್ ಭದ್ರತೆ ಮಾಡಲಾಗಿದೆ.
Karnataka New CM- Live Updates: ಕಾಂಗ್ರೆಸ್ ಸಿಎಂ ರೇಸ್ ಜಟಾಪಟಿ ಹಿನ್ನಲೆ ಸಿದ್ದರಾಮಯ್ಯ ನಿವಾಸದತ್ತ ಸಿದ್ದು ಅಭಿಮಾನಿಗಳು ಆಗಮಿಸುತ್ತಿದ್ದಾರೆ. ಹಾಸನದ ಅರಸೀಕೆರೆಯಿಂದ ಬಂದಿರುವ ಕೆಲ ಅಭಿಮಾನಿಗಳು ಸಿದ್ದರಾಮಯ್ಯನವರು ಸಿಎಂ ಆಗಬೇಕು ಅಂತಾ ಆಶಯ ವ್ಯಕ್ತಪಡಿಸುತ್ತಿದ್ದಾರೆ. ಆದರೆ ನಿನ್ನೆ ತಡ ರಾತ್ರಿಯವರೆಗೆ ಸಭೆ ಇದ್ದ ಹಿನ್ನಲೆಯಲ್ಲಿ ಇನ್ನೂ ಸಹ ಸಿದ್ದರಾಮಯ್ಯ ನಿದ್ದೆಗೆ ಜಾರಿದ್ದಾರೆ ಎನ್ನಲಾಗುತ್ತಿದೆ.