ಧಾರವಾಡ: ಕಳೆದ 4 ವರ್ಷಗಳಲ್ಲಿ ತಮಗೆ ಆದ ಅನುಭವವನ್ನು ನೋಡಿ ತಾವು ಮತವನ್ನು ಚಲಾವಣೆಯನ್ನು ಮಾಡಿ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಶ್ರೀಮತಿ ಪ್ರಿಯಾಂಕಾ ಗಾಂಧಿ ಅವರು ಜನರಲ್ಲಿ ಮನವಿ ಮಾಡಿದ್ದಾರೆ.


COMMERCIAL BREAK
SCROLL TO CONTINUE READING

ಅವರು ಕುಂದಗೋಳ ವಿಧಾನಸಭಾ ಕ್ಷೇತ್ರದ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು.


ನನ್ನ ಪ್ರೀತಿಯ ಸಹೋದರರ ಮತ್ತು ಸಹೋದರಿಯರೇ, ಇಷ್ಟೊಂದು ಉರಿಬಿಸಿಲಿನಲ್ಲೂ ಬಹಳ ಉತ್ಸಾಹದಿಂದ, ಪ್ರೀತಿಯಿಂದ ನೀಡಿದ ನಿಮ್ಮ ಹೃದಯಪೂರ್ವಕ ಸ್ವಾಗತಕ್ಕೆ ನಾನು ಆಭಾರಿಯಾಗಿದ್ದೇನೆ ಎಂದು ಅವರು ಹೇಳಿದರು.


ನಾನು ನಿಮ್ಮಲ್ಲಿ ಕಳಕಳಿಯ ವಿನಂತಿ ಮಾಡುವುದೇನೆಂದರೆ, ಕಳೆದ 4 ವರ್ಷಗಳಲ್ಲಿ ತಮಗೆ ಆದ ಅನುಭವವನ್ನು ನೋಡಿ ತಾವು ಮತವನ್ನು ಚಲಾವಣೆಯನ್ನು ಮಾಡಿ. ಕಳೆದ ಮೂರು ವರ್ಷಗಳಿಂದ ರಾಜ್ಯದ ಭ್ರಷ್ಠ ಬಿಜೆಪಿ ಸರ್ಕಾರದ ದುರಾಡಳಿತ ಪರಿಣಾಮ ರಾಜ್ಯದ ಜನ ಬೇಸತ್ತಿದ್ದಾರೆ. ಜನರು ಸಂಕಷ್ಟದಲ್ಲಿದ್ದಾರೆ. ಯುವಕರು ಕೆಲಸವಿಲ್ಲದೇ ಇದ್ದಾರೆ. ಇದಕ್ಕೆಲ್ಲಾ ಕಾರಣ ರಾಜ್ಯದ ಬಿಜೆಪಿ ಸರ್ಕಾರ ಎಂದು ಅವರು ಕಿಡಿ ಕಾರಿದರು.


ಇದನ್ನೂ ಓದಿ-Sugar Patient ಗಳಿಗೆ ವರಕ್ಕೆ ಸಮಾನ ಈ ವಿಶಿಷ್ಠ ರೀತಿಯ ವೈಟ್ ರೈಸ್!


ಬೆಲೆ ಏರಿಕೆಯಿಂದ ತತ್ತರಿಸಿದ ನಮ್ಮ ಮಹಿಳೆಯರಿಗೆ,  ಕಾಂಗ್ರೆಸ್ ಪಕ್ಷವು ಪ್ರತಿ ತಿಂಗಳು ಮನೆ ನಡೆಸುವ ಪ್ರತಿಮನೆಯ ಯಾಜಮಾನಿಗೆ  ಗೃಹಲಕ್ಷ್ಮಿ ಯೋಜನೆ ಮೂಲಕ 2000 ರೂ. ಪ್ರತಿ ತಿಂಗಳು ಕೊಡಲು ಕಾಂಗ್ರೆಸ್ ಪಕ್ಷ ತೀರ್ಮಾನಿಸಿದೆ ಎನ್ನುವ ಭರವಸೆ ನೀಡಿದರು.


2,50,000 ಲಕ್ಷ ಸರ್ಕಾರಿ ನೌಕರಿ ಖಾಲಿ ಇದೆ. ಸರ್ಕಾರ ಭರ್ತಿ ಮಾಡಿಲ್ಲ. ಜನರಿಗೆ   ಉದ್ಯೋಗಳನ್ನು ಯಾಕೆ ತುಂಬಲ್ಲ. ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಲ್ಲಿ ಎರಡುವರೇ ಲಕ್ಷ ಖಾಲಿ ಹುದ್ದೆಯನ್ನು ಭರ್ತಿ ಮಾಡುತ್ತೇವೆ ಎಂಬ ಭರವಸೆ ನಾವು ನಿಮಗೆ ನೀಡುತ್ತೇವೆ. ಯುವಶಕ್ತಿಯು ದೇಶದ ಭವಿಷ್ಯವಾಗಿದ್ದು ವಿದ್ಯಾವಂತ ನಿರುದ್ಯೋಗಿಗಳ ಶ್ರೇಯೋಭಿವೃದ್ಧಿಗಾಗಿ ಕಾಂಗ್ರೆಸ್ ಘೋಷಿಸಿರುವ ಯುವನಿಧಿ ಗ್ಯಾರಂಟಿಯೂ ನಿರುದ್ಯೋಗಿ ಯುವಕ, ಯುವತಿಯರಿಗೆ ಮಾಸಿಕ ನಿರುದ್ಯೋಗ ಭತ್ಯೆ ನೀಡಲಾಗುವುದು. ಡಿಪ್ಲೋಮಾ ಆದವರಿಗೆ 1500 ರೂ., ಪದವೀಧರರಿಗೆ 3000 ರೂ. ನಿರುದ್ಯೋಗ ಭತ್ಯೆ ಕಾರ್ಯಕ್ರಮ ರಾಜ್ಯದ ಕಾಂಗ್ರೆಸ್ ಪಕ್ಷ ಹಮ್ಮಿಕೊಂಡಿದೆ ಎಂದು ಹೇಳಿದರು.


ಇದನ್ನೂ ಓದಿ-ಮಧುಮೇಹಿಗಳಿಗೂ ಪಾರ್ಶ್ವವಾಯುವಾಗಬಹುದು ! ಈ ಲಕ್ಷಣಗಳಿದ್ದರೆ ಎಚ್ಚರವಿರಲಿ


ಈ ಚುನಾವಣೆ ನಿಮ್ಮ ಭವಿಷ್ಯವನ್ನು ನಿರ್ಧಾರವನ್ನು ಮಾಡುವ ಚುನಾವಣೆ. ಈ ಚುನಾವಣೆ ನಿಮ್ಮ ಮಕ್ಕಳ ಭವಿಷ್ಯವನ್ನು ರೂಪಿಸುವ ಚುನಾವಣೆ. ಈ ಚುನಾವಣೆ ನೀವೆಲ್ಲ ಸೇರಿ ಸಾಕರ ಪಡಿಸಬೇಕಾಗುತ್ತದೆ. ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ತಕ್ಷಣವೇ ಅನ್ನಭಾಗ್ಯ, ಕ್ಷೀರಭಾಗ್ಯ ಯೋಜನೆಯ ಕಾರ್ಯಕ್ರಮವನ್ನು  ನಾವು  ಮತ್ತೊಮ್ಮೆ ಈ ರಾಜ್ಯದಲ್ಲಿ ಅನುಷ್ಠಾನವನ್ನು ಮಾಡಲಿದ್ದೇವೆ. ಪಕ್ಷ ಅಧಿಕಾರಕ್ಕೆ ಬಂದರೆ ಕರ್ನಾಟಕ ರಾಜ್ಯದ ಸರ್ಕಾರಿ ಬಸ್ಸುಗಳಲ್ಲಿ ರಾಜ್ಯದ ಪ್ರತಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದು ಅವರು ಭರವಸೆ ನೀಡಿದರು.https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.