ಕೈತಪ್ಪಿದ ಬಿಜೆಪಿ ಟಿಕೆಟ್: ಮಾಲೂರು ವಿಧಾನಸಭಾ ಕ್ಷೇತ್ರದಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಹೂಡಿ ವಿಜಯ್ ಕುಮಾರ್
Karnataka Assembly Election: ತಮಗೆ ಟಿಕೆಟ್ ಕೈತಪ್ಪುತ್ತಿದ್ದಂತೆ ನಿನ್ನೆ ಬೆಂಬಲಿಗರ ಸಭೆ ನಡೆಸಿದ ಹೂಡಿ ವಿಜಯ್ ಕುಮಾರ್ ಅವರು ಸಭೆಯಲ್ಲಿ ಕಣ್ಣೀರು ಹಾಕುವ ಮೂಲಕ, ತಮ್ಮ ಸದಸ್ಯತ್ವ ಸ್ಥಾನಕ್ಕೆ ರಾಜಿನಾಮೆ ನೀಡಿದ್ದರು.
Karnataka Assembly Elections 2023: ಮಾಲೂರು ವಿಧಾನ ಸಭಾ ಕ್ಷೇತ್ರದ ಬಿಜೆಪಿಯಲ್ಲಿ ಬಂಡಾಯದ ಬಿಸಿ ತಾಕಿದ್ದು, ಪ್ರಬಲ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಹೂಡಿ ವಿಜಯ್ ಕುಮಾರ್ ಅವರಿಗೆ ಟಿಕೆಟ್ ಕೈ ತಪ್ಪಿದ ಹಿನ್ನಲೆ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದಾರೆ. ಅಲ್ಲದೆ ಸ್ವಾಭಿಮಾನಿ ಅಭ್ಯರ್ಥಿ ಎಂದು ಕಣಕ್ಕೆ ಇಳಿದಿರುವ ಹೂಡಿ ವಿಜಯ್ ಕುಮಾರ್ ಅವರು ಇಂದು ತಮ್ಮ ಬೆಂಬಲಿಗರೊಂದಿಗೆ ನಾಮಪತ್ರವನ್ನೂ ಸಲ್ಲಿಸಿದರು.
ನಾಮಪತ್ರ ಸಲ್ಲಿಕೆಗೂ ಮೊದಲು ಹೂಡಿ ವಿಜಯ್ ಕುಮಾರ್ ಅವರು ಮಾಲೂರು ಪಟ್ಟಣದ ಮಾರಿಕಾಂಬ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಬೆಂಬಲಿಗರೊಂದಿಗೆ ಚುನಾವಣಾಧಿಕಾರಿ ಕುಮಾರಸ್ವಾಮಿ ಅವರಿಗೆ ನಾಮಪತ್ರ ಸಲ್ಲಿಕೆ ಮಾಡಿದರು.
ಇದನ್ನೂ ಓದಿ- ಬಿಜೆಪಿ ಅಧಿಕಾರಕ್ಕೆ ಬಂದರೆ ಮುಖ್ಯಮಂತ್ರಿ ಪಟ್ಟ ಯಾರಿಗೆ..? : ಬಿವೈವಿ ಹೇಳಿದ್ದಿಷ್ಟು
ಹೂಡಿ ವಿಜಯ್ ಕುಮಾರ್ ಅವರು ಕಳೆದ ನಾಲ್ಕೈದು ವರ್ಷಗಳಿಂದ ಕ್ಷೇತ್ರದಲ್ಲಿ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿ ಸೇವೆ ಸಲ್ಲಿಸುತ್ತಾ ಬಂದಿದ್ದರು. ಕಳೆದ ಬಾರಿ ನಡೆದ ಎಂ.ಎಲ್.ಸಿ ಚುನಾವಣೆಯಲ್ಲಿ ಜೆಡಿಎಸ್ ಮಾಜಿ ಶಾಸಕ ಮಂಜುನಾಥ್ ಗೌಡ ಅವರು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದು, ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ ಕೋಲಾರ ಜಿಲ್ಲಾ ಉಸ್ತುವಾರಿಗಳಾಗಿದ್ದ ಮುನಿರತ್ನ ಹಾಗೂ ಸಂಸದ ಎಸ್.ಮುನಿಸ್ವಾಮಿ ಅವರೊಂದಿಗೆ ಮಾತುಕತೆಯಾಗಿತ್ತು. ಅದರಂತೆ ಜೆಡಿಎಸ್ ನಿಂದ ಬಿಜೆಪಿ ಪಕ್ಷಕ್ಕೆ ಬಂದಿದ್ದ ಮಂಜುನಾಥ್ ಗೌಡ ಅವರಿಗೆ ಟಿಕೆಟ್ ಕೊಡಿಸುವಲ್ಲಿ ಯಶಸ್ವಿಯಾಗಿದ್ದರು.
ಇತ್ತ ತಮಗೆ ಟಿಕೆಟ್ ಕೈತಪ್ಪುತ್ತಿದ್ದಂತೆ ನಿನ್ನೆ ಬೆಂಬಲಿಗರ ಸಭೆ ನಡೆಸಿದ ಹೂಡಿ ವಿಜಯ್ ಕುಮಾರ್ ಅವರು ಸಭೆಯಲ್ಲಿ ಕಣ್ಣೀರು ಹಾಕುವ ಮೂಲಕ, ತಮ್ಮ ಸದಸ್ಯತ್ವ ಸ್ಥಾನಕ್ಕೆ ರಾಜಿನಾಮೆ ನೀಡಿದ್ದರು. ಅಲ್ಲದೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ದಿಸುವುದಾಗಿ ನಿರ್ಧಿರಿಸಿದ್ದು ಅದರಂತೆ ಇಂದು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.
ಇದನ್ನೂ ಓದಿ- Karnataka Assembly Election: ಶೀಘ್ರವೇ ಭಿನ್ನಮತ ಶಮನ ಆಗಲಿದೆ- ಸಿಎಂ ಬಸವರಾಜ ಬೊಮ್ಮಾಯಿ
ನಾಮಪತ್ರ ಸಲ್ಲಿಕೆ ಬಳಿಕ ಮಾತನಾಡಿದ ಹೂಡಿ ವಿಜಯ್ ಕುಮಾರ್, ಈ ಚುನಾವಣೆ ಮಾಲೂರು ತಾಲೂಕಿನ ಸ್ವಾಭಿಮಾನದ ಚುನಾವಣೆಯಾಗಿದ್ದು, ಹೆಚ್ಚಿನ ಕಾರ್ಯಕರ್ತರೊಂದಿಗೆ 15 ನೇ ತಾರೀಖು ಮತ್ತೊಮ್ಮೆ ನಾಮಪತ್ರ ಸಲ್ಲಿಸುವುದಾಗಿ ತಿಳಿಸಿದ್ದಾರೆ.
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.