ಸಿದ್ದರಾಮಯ್ಯರೇ 5 ವರ್ಷ ಪೂರ್ಣಾವಧಿ ಸಿಎಂ, ಅಧಿಕಾರ ಹಂಚಿಕೆ ಇಲ್ಲ..!
ಲೋಕಸಭೆ ನಂತರವೂ ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ. ಸಿದ್ದರಾಮಯ್ಯನವರು 5 ವರ್ಷ ಪೂರ್ಣಾವಧಿ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಸಚಿವ ಎಂ.ಬಿ. ಪಾಟೀಲ್ ಶಾಕಿಂಗ್ ಹೇಳಿಕೆ ನೀಡಿದ್ದಾರೆ. ಇದರಿಂದ ಡಿ.ಕೆ. ಶಿವಕುಮಾರ್ ಅವರು ಡಿಸಿಎಂ ಸ್ಥಾನದಲ್ಲೇ 5 ವರ್ಷ ಇರಲಿದ್ದಾರಾ ಎಂಬ ಅನುಮಾನ ಮೂಡುತ್ತಿದೆ.
ಮೈಸೂರು : ರಾಜ್ಯದಲ್ಲಿ ಸಿದ್ದರಾಮಯ್ಯನವರೇ 5 ವರ್ಷ ಪೂರ್ಣಾವಧಿ ಮುಖ್ಯಮಂತ್ರಿಯಾಗಲಿದ್ದಾರೆ, ಅಧಿಕಾರ ಹಂಚಿಕೆಯ ಬಗ್ಗೆ ಯಾವುದೇ ಮಾತುಕತೆ ನಡೆದಿಲ್ಲ ಎಂದು ಸಚಿವ ಎಂ.ಬಿ. ಪಾಟೀಲ್ ಅಚ್ಚರಿಯ ಹೇಳಿಕೆ ನೀಡಿದ್ದಾರೆ.
ನಗರದಲ್ಲಿ ಮಾತನಾಡಿದ ಸಚಿವರು, ಅಧಿಕಾರ ಹಂಚಿಕೆ ಬಗ್ಗೆ ಯಾವುದೇ ಮಾತುಕತೆ ನಡೆದಿಲ್ಲ. ಸಿದ್ದರಾಮಯ್ಯನವರು ಪೂರ್ವಾವಧಿ ಮುಖ್ಯಮಂತ್ರಿಯಾಗಲಿದ್ದಾರೆ. ಲೋಕಸಭೆ ಚುನಾವಣೆ ಬಳಿಕ ಯಾವುದೇ ಬದಲಾವಣೆ ಇಲ್ಲ. ಸಿಎಂ ಬದಲಾವಣೆ ಬಗ್ಗೆ AICC ಮಟ್ಟದಲ್ಲಿ ಯಾವುದೇ ಚರ್ಚೆ ನಡೆದಿಲ್ಲ. ಸಿದ್ದರಾಮಯ್ಯ ಮುಂದಿನ ಐದು ವರ್ಷವೂ ಸಿಎಂ ಆಗಲಿದ್ದಾರೆ ಎಂದು AICC ಕಾರ್ಯದರ್ಶಿ ವೇಣುಗೋಪಾಲ್ ಸ್ಪಷ್ಟಪಡಿಸಿದ್ದಾರೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: OMG: ಅಧಿವೇಶನಕ್ಕೂ ಮೊದಲು ಗೋಮೂತ್ರ ಸಿಂಪಡಿಸಿ ವಿಧಾನಸೌಧ ಶುದ್ಧೀಕರಿಸಿದ ಕಾಂಗ್ರೆಸ್ ಕಾರ್ಯಕರ್ತರು!
ಬಿಜೆಪಿ ಅಧಿಕಾರವದಿಯಲ್ಲಿ ನಡೆದ ಎಲ್ಲಾ ಹಗರಣಗಳ ಬಗ್ಗೆ ತನಿಖೆ ನಡೆಸುತ್ತೇವೆ. ಪಿಎಸ್‌ಐ, ಹಗರಣ, ಆರೋಗ್ಯ ಇಲಾಖೆ, ನೀರಾವರಿ ಇಲಾಖೆ ಹಾಗೂ ಇತರೆ ಇಲಾಖೆ ಬಗ್ಗೆ ತನಿಖೆ ನಡೆಸುತ್ತೇವೆ. ಎಲ್ಲಾ ಹಗರಣಗಳನ್ನ ಲಾಜಿಕ್ ಎಂಡ್‌ಗೆ ತೆಗೆದುಕೊಂಡು ಹೋಗುತ್ತೇವೆ. ತಪ್ಪಿಸ್ತರಿಗೆ ಶಿಕ್ಷೆ ಕೊಡಿಸುತ್ತೇವೆ, ನೊಂದ ವಿದ್ಯಾರ್ಥಿಗಳಿಗೆ ನ್ಯಾಯ ಕೊಡಿಸುತ್ತೇವೆ ಎಂದು ಸಚಿವರು ತಿಳಿಸಿದರು.
ಅಲ್ಲದೆ, ಗ್ಯಾರೆಂಟಿ ಕಾರ್ಡ್ ವಿಚಾರವಾಗಿ ಪ್ರತಿಕ್ರಿಯೆ ನೀಡಿ, ಮೊದಲ ಕ್ಯಾಬಿನೆಟ್ ಮೀಟಿಂಗ್ ನಲ್ಲಿ ಚರ್ಚೆ ಆಗಿದೆ, ತಾತ್ವಿಕ ಒಪ್ಪಿಗೆ ನೀಡಲಾಗಿದೆ. ಈ ವಿಚಾರದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು 5 ಗ್ಯಾರಂಟಿಗಳನ್ನು ಯೋಜನೆಗೆ ತರುವ ಕುರಿತು ಮೈಸೂರಿನ ಸುತ್ತೂರಿನಲ್ಲಿ ಸಚಿವ ಎಂ ಬಿ ಪಾಟೀಲ್ ಸ್ಪಷ್ಟ ಪಡಿಸಿದರು. https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ