ʼಮೋದಿ ವಿಷ ಸರ್ಪʼ ಅಂತ ನಾನು ಹೇಳಿಲ್ಲ : ಖರ್ಗೆ ಯುಟರ್ನ್
ಪ್ರಧಾನಿ ನರೇಂದ್ರ ಮೋದಿ ವಿಷ ಸರ್ಪ ಅಂತ ನಾನು ಹೇಳಿಲ್ಲ. ಬಿಜೆಪಿ ಪಾರ್ಟಿ ಹಾವು ಇದ್ದಂಗೆ, ಸ್ವಲ್ಪ ನೆಕ್ಕಿ ನೋಡ್ತೆವಿ ಅಂದ್ರೆ ಅಲ್ಟಿಮೇಟ್ಲಿ ಡೆತ್ ಅಂತ ಹೇಳಿದ್ದೇನೆ. ನಾನು ಮೋದಿಯವರ ಬಗ್ಗೆ ಏನೂ ಹೇಳಿಲ್ಲ. ವೈಯಕ್ತಿಕವಾಗಿ ನಾವು ಯಾರ ಬಗ್ಗೆಯೂ ಹೇಳೋದಿಲ್ಲ ಎಂದು ತಮ್ಮ ಹೇಳಿಕೆ ಕುರಿತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸ್ಪಷ್ಟತೆ ನೀಡಿದ್ದಾರೆ.
ಗದಗ : ಮೋದಿ ವಿಷದ ಹಾವು ಇದ್ದಂತೆ ಎಂಬ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ವಿಚಾರ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸುತ್ತಿದೆ. ಇದೀಗ ತಮ್ಮ ಹೇಳಿಕೆ ಕುರಿತು ಉಲ್ಟಾ ಹೊಡೆದಿರುವ ಖರ್ಗೆ, ಮೋದಿ ವಿಷದ ಹಾವು ಅಂತ ನಾನು ಹೇಳಿಲ್ಲ ಎಂದಿದ್ದಾರೆ.
ಜಿಲ್ಲೆಯ ಗಜೇಂದ್ರಗಡ ತಾಲೂಕಿನ ನರೇಗಲ್ ಪಟ್ಟಣದ ಬಹಿರಂಗ ಸಭೆಯಲ್ಲಿ ಮಾತನಾಡಿದ ಅವರು, ಮೋದಿ ವಿಷದ ಹಾವು ಎಂದು ನಾನು ಹೇಳಿಲ್ಲ. ಬಿಜೆಪಿ ಪಾರ್ಟಿ ಹಾವು ಇದ್ದಂಗೆ ಅಂತ ಹೇಳಿದ್ದೇನೆ, ಸ್ವಲ್ಪ ನೆಕ್ಕಿ ನೋಡ್ತೆವಿ ಅಂದ್ರೆ ಅಲ್ಟಿಮೇಟ್ಲಿ ಡೆತ್ ಅಂತ ಹೇಳಿದ್ದೆ. ನಾನು ಮೋದಿಯವರ ಬಗ್ಗೆ ಹೇಳಿಲ್ಲ. ವೈಯಕ್ತಿಕವಾಗಿ ನಾವು ಯಾರ ಬಗ್ಗೆಯೂ ಹೇಳೋದಿಲ್ಲ ಎಂದು ತಮ್ಮ ಹೇಳಿಕೆ ಕುರಿತು ಸ್ಪಷ್ಟ ಪಡಿಸಿದ್ದಾರೆ.
ಇದನ್ನೂ ಓದಿ: ರಾಜ್ಯದಲ್ಲಿ ಚುನಾವಣಾ ನಡೆಸುತ್ತಿರುವುದು ಚುನಾವಣಾ ಆಯೋಗವೋ? ಭಾರತೀಯ ಜನತಾ ಪಕ್ಷವೋ?"
ಅಲ್ಲದೆ, ವೈಯಕ್ತಿಕವಾಗಿ ಯಾರ ಬಗ್ಗೆಯೂ ನನಗೆ ಅಸೂಯೆ ಇಲ್ಲ. ಬಿಜೆಪಿ ಐಡಿಯಾಲಾಜಿ ಒಂದು ವಿಷದಂತಿದೆ. ಆ ಐಡಿಯಾಲಾಜಿ ನೀವು ಸಪೋರ್ಟ್ ಮಾಡಿದ್ರೆ, ನೀವು ನೆಕ್ಕಿ ನೋಡ್ತೆವಿ ಅಂದ್ರೆ ಸಾವು ಖಚಿತ ಎಂದು ಎಐಸಿಸಿ ಅಧ್ಯಕ್ಷ ಹೇಳಿದರು. ರೋಣ ಪಟ್ಟಣದ ಕಾಂಗ್ರೆಸ್ ಅಭ್ಯರ್ಥಿ ಜಿ.ಎಸ್ ಪಾಟೀಲ ಕುರಿತು ಖರ್ಗೆ ಪ್ರಚಾರ ಮಾಡುತ್ತಿದ್ದಾರೆ.
ಇನ್ನು ಪ್ರಧಾನಿ ಮೋದಿ ಅವರನ್ನು ವಿಷ ಸರ್ಪಕ್ಕೆ ಹೋಲಿಕೆ ಮಾಡಿರುವ ಖರ್ಗೆ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದೆ. ಈಗಾಗಲೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮೋದಿ ಹೆಸರಿನ ವಿಚಾರವಾಗಿ ಸಂಸದ ಸ್ಥಾನವನ್ನು ಕಳೆದುಕೊಂಡಿದ್ದಾರೆ. ಇಂತಹ ಸಂದರ್ಭದಲ್ಲಿ ಖರ್ಗೆ ಹೇಳಿಕೆ ಯಾವ ರೀತಿ ತಿರುವು ಪಡೆದುಕೊಳ್ಳುತ್ತದೆ ಅಂತ ಕಾಯ್ದು ನೋಡಬೇಕಿದೆ. https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.