ಮೂಡಿಗೆರೆ: ವಿವಿಧ ಕಾರಣಗಳಿಂದ ಸದಾ ಸುದ್ದಿಯಾಗುತ್ತಿದ್ದ ಎಂ.ಪಿ.ಕುಮಾರಸ್ವಾಮಿ ಇದೀಗ ಚುನಾವಣೆ ಸಂದರ್ಭದಲ್ಲಿ ತನ್ನ ಮೇಲೆ ಯಾವುದೇ ಮಾನಹಾನಿಕರ ಸುದ್ದಿ ಪ್ರಸಾರವಾಗದಂತೆ ಮಾಧ್ಯಮಗಳ ವಿರುದ್ಧ ನ್ಯಾಯಾಲಯದ ಮೊರೆ ಹೋಗಿದ್ದಾರೆ
ಮೂಡಿಗೆರೆ ಕ್ಷೇತ್ರದ ಮೂಡಿಗೆರೆ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಎಂ.ಪಿ.ಕುಮಾರಸ್ವಾಮಿ ಅವರು ತನ್ನ ವಿರುದ್ಧ ಮಾಧ್ಯಮಗಳಲ್ಲಿ ಮಾನಹಾನಿ ಹಾಗೂ ನಕಾರಾತ್ಮಕ ಸುದ್ದಿ ಪ್ರಕಟಿಸದಂತೆ 51 ಮಾಧ್ಯಮಗಳ ಮೇಲೆ ತಡೆಯಾಜ್ಞೆ ಕೋರಿದ್ದಾರೆ.
ಇದನ್ನೂ ಓದಿ: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ : ದಕ್ಷಿಣ ಕನ್ನಡ ಜಿಲ್ಲೆಗೆ ಮೊದಲ ಸ್ಥಾನ
ಜೆಡಿಎಸ್ ಅಭ್ಯರ್ಥಿ ಎಂ.ಪಿ.ಕುಮಾರಸ್ವಾಮಿ ಕನ್ನಡದ ಬಹು ಮಾಧ್ಯಮಗಳ ಜೊತೆ ಬೇರೆ ಭಾಷೆ ಮಾಧ್ಯಗಳ ಅವರು ತನ್ನ ವಿರುದ್ಧ ಮಾನಹಾನಿ ಸುದ್ದಿ ಬಿತ್ತರಿಸಬಾರದೆಂದು ದೃಶ್ಯ ಮಾಧ್ಯಮ ಹಾಗೂ ಮುದ್ರಣ ಮಾಧ್ಯಮ ಸೇರಿದಂತೆ ಒಟ್ಟು 51 ಮಾಧ್ಯಮಗಳ ಹೆಸರಿನ ಪಟ್ಟಿ ಇಟ್ಟಿದ್ದಾರೆ.
ಇದನ್ನೂ ಓದಿ: Karnataka Rains: ಇಂದು ಕೂಡ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆ!
ಬೆಂಗಳೂರು ನಗರ ಸಿಟಿ ಸಿವಿಲ್ ಮತ್ತು ಸೆಷನ್ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಲಾಗಿದೆ. ದೃಶ್ಯ ಮತ್ತು ಮುದ್ರಣ ಮಾಧ್ಯಮಗಳಲ್ಲದೇ, ಫೇಸ್ ಬುಕ್, ಟ್ವೀಟರ್, ವಾಟ್ಸಾಪ್, ಗೂಗಲ್, ಯೂಟೂಬ್ ಮುಂತಾದ ಸಾಮಾಜಿಕ ಮಾಧ್ಯಮಗಳ ಮೇಲೂ ತಮ್ಮ ವಿರುದ್ಧ ಮಾನಹಾನಿಕರ ಸುದ್ದಿ ಪ್ರಕಟಿಸದಂತೆ ಕುಮಾರಸ್ವಾಮಿ ತಡೆಯಾಜ್ಞೆಕೋರಿದ್ದಾರೆ.
ಎಂ.ಪಿ. ಕುಮಾರಸ್ವಾಮಿಯವರಿಗೆ ಮೂಡಿಗೆರೆ ಕ್ಷೇತ್ರದಲ್ಲಿ ಬಿ.ಜೆ.ಪಿ.ಯಿಂದ ಟಿಕೆಟ್ ಸಿಗದ ಕಾರಣ ಇತ್ತೀಚೆಗೆ ಜೆ.ಡಿ.ಎಸ್. ಪಕ್ಷವನ್ನು ಸೇರಿದ್ದರು. ಸದ್ಯ ಜೆ.ಡಿ.ಎಸ್. ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.