Karnataka Assembly Election 2023: 2023ರ ರಾಜ್ಯ ವಿಧಾನಸಭಾ ಚುನಾವಣೆ ಮೇ 10 ರಂದು ನಡೆಯಲಿದ್ದು, ಕಳೆದ ವಾರಾಂತ್ಯದಲ್ಲಿ ಹಳೆ ಮೈಸೂರು ಭಾಗದಲ್ಲಿ ಚುನಾವಣಾ ಕಹಳೆ ಮೊಳಗಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಹನ್ನೊಂದು ಗಂಟೆಗೆ ಕೋಟೆ ನಾಡು ಚಿತ್ರದುರ್ಗಕ್ಕೆ ಲಗ್ಗೆ ಇಡಲಿದ್ದಾರೆ. ನಗರದ ಜಯದೇವ ಕ್ರೀಡಾಂಗಣದಲ್ಲಿ ನಡೆಯಲಿರುವ ಸಾರ್ವಜನಿಕ ಬೃಹತ್ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಚಿತ್ರದುರ್ಗ ಮತ್ತು ದಾವಣಗೆರೆ ಜಿಲ್ಲೆಯ 10 ವಿಧಾನಸಭಾ ಕ್ಷೇತ್ರಗಳ ಬಿಜೆಪಿ ಅಭ್ಯರ್ಥಿಗಳು ಸಮಾವೇಶದಲ್ಲಿ ಭಾಗವಹಿಸಲಿದ್ದು ಎರಡು ಲಕ್ಷ ಕಾರ್ಯಕರ್ತರು ಸೇರುವ ನಿರೀಕ್ಷೆ ಇದೆ ಎಂದು ಹೇಳಲಾಗುತ್ತಿದೆ
ಕೋಟೆ ನಾಡು ಚಿತ್ರದುರ್ಗ ನಗರದಲ್ಲಿ ಬಿಜೆಪಿ ಪಕ್ಷದ ವತಿಯಿಂದ ಬೃಹತ್ ಬಹಿರಂಗ ಸಮಾವೇಶ:-
ಮೋದಿ ಮೋದಿ ಮೋದಿ ಮತ್ತದೆ ಧ್ವನಿ. ಇಂದಿನಿಂದ ಎರಡು ದಿನಗಳ ಕಾಲ ಪ್ರಧಾನಮಂತ್ರಿ ನರೇಂದ್ರ ಮೋದಿ ರಾಜ್ಯ ಪ್ರವಾಸ ಕೈಗೊಳ್ಳಲಿದ್ದು, ಇಂದು ಕೋಟೆನಾಡು ಚಿತ್ರದುರ್ಗ.. ವಿಜಯನಗರದಲ್ಲಿ ನಮೋ ಸುನಾಮಿ ಸದ್ದು ಮಾಡಲಿದೆ. ಬಳಿಕ, ಹೊಸಪೇಟೆಯ ಪುನೀತ್ ಜಿಲ್ಲಾ ಕ್ರೀಡಾಂಗಣದಲ್ಲಿ ಬೃಹತ್ ಸಮಾವೇಶ ಜರುಗಲಿದ್ದು ಈ ಸಮಾವೇಶದಲ್ಲಿ ಸುಮಾರು ಎರಡು ಲಕ್ಷಕ್ಕೂ ಹೆಚ್ಚು ಜನ ಸೇರುವ ನಿರೀಕ್ಷೆ ಇದೆ ಎಂದು ಹೇಳಲಾಗುತ್ತಿದೆ.
ಇದನ್ನೂ ಓದಿ- ಹೊಸ ಕಟ್ಟಡ ಕಾಮಗಾರಿ ಕೆಲಸಗಳಿಗೂ ತಟ್ಟಿದ ಎಲೆಕ್ಷನ್ ಬಿಸಿ
ಕರ್ನಾಟಕದ ಚುನಾವಣೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹವಾ ಶುರುವಾಗಿದೆ. ಚಿತ್ರದುರ್ಗ ನಗರದ ಮುರುಘಾರಾಜೇಂದ್ರ ಕ್ರೀಡಾಂಗಣದಲ್ಲಿ ಸಮಾವೇಶ ಆಯೋಜಿಸಲಾಗಿದ್ದು, ಈಗಾಗಲೇ ಬೃಹತ್ ಪೆಂಡಾಲ್ ಹಾಕಲಾಗಿದೆ. ಕೇಸರಿ ಬಾವುಟಗಳ ಅಲಂಕಾರ, ಮೋದಿ ಫೋಟೋಗಳು ಎಲ್ಲೆಲ್ಲೂ ರಾರಾಜಿಸುತ್ತಿವೆ. ಅಭಿವೃದ್ಧಿಯ ಮಂತ್ರ, ಗೆಲುವಿನ ಜಪ ಸಾಗಿದೆ.
ಇಂದು ಕಲ್ಲಿನ ಕೋಟೆ ಚಿತ್ರದುರ್ಗದಲ್ಲಿ ಮೋದಿ ಆಗಮಿಸುತ್ತಿದ್ದು ಸಂಚಲನ ಸೃಷ್ಟಿಸಲಿದ್ದಾರೆ. ಚಿತ್ರದುರ್ಗ, ಹೊಸದುರ್ಗ, ಮೊಳಕಾಲ್ಮೂರು, ಚಳ್ಳಕೆರೆ ಹೊಳಲ್ಕೆರೆ, ಹಿರಿಯೂರು, ಮತ್ತು ದಾವಣಗೆರೆ, ಚನ್ನಗಿರಿ, ಮಾಯಕೊಂಡ, ಜಗಳೂರು ವಿಧಾನಸಭಾ ಕ್ಷೇತ್ರಗಳಿಂದ ಸುಮಾರು ಎರಡೂವರೆ ಲಕ್ಷಕ್ಕೂ ಹೆಚ್ಚು ಜನರು ಈ ಸಮಾವೇಶದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ.
ಇದನ್ನೂ ಓದಿ- ಮೋದಿ ರೋಡ್ ಶೋ ವೇಳೆ ನೀತಿ ಸಂಹಿತೆ ಉಲ್ಲಂಘನೆ ಆರೋಪ..!
ಇನ್ನು ಈ ಸಮಾವೇಶದಲ್ಲಿ ಕಾರ್ಯಕ್ರಮ ಉದ್ಘಾಟಿಸಿ ಸಾರ್ವಜನಿಕರನ್ನು ಉದ್ದೇಶಿಸಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಭಾಷಣ ಮಾಡಲಿದ್ದಾರೆ. ವಿಮಾನದ ಮೂಲಕ ಚಳ್ಳಕೆರೆ ತಾಲ್ಲೂಕು ಕುದಾಪುರದ ಬಳಿ ಇರುವ ಡಿಆರ್‌ಡಿಓಗೆ ಆಗಮಿಸುವ ಪ್ರಧಾನಿ ಮೋದಿಯವರು, ನಂತರ ಹೆಲಿಕಾಪ್ಟರ್ ಮೂಲಕ ಚಿತ್ರದುರ್ಗ ನಗರದ ಓನಕೆ ಓಬವ್ವ ಕ್ರೀಡಾಂಗಣಕ್ಕೆ ಆಗಮಿಸಿ, ಮುರುಘಾರಾಜೇಂದ್ರ ಕ್ರೀಡಾಂಗಣದಲ್ಲಿ ನಡೆಯಲಿರುವ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಈ ಹಿನ್ನಲೆಯಲ್ಲಿ ನಗರಕ್ಕೆ ಆಗಮಿಸುವ ಹಾಗೂ ಹೊರ ಹೋಗುವ ವಾಹನಗಳ ರಸ್ತೆ ಮಾರ್ಗಗಳನ್ನು ಬದಲಾಣೆ ಮಾಡಲಾಗಿದೆ. ಸಮಾರಂಭಕ್ಕೆ ಬರುವ ವಾಹನಗಳನ್ನು ಹೊರತುಪಡಿಸಿ, ಚಿತ್ರದುರ್ಗಕ್ಕೆ ಬೆಂಗಳೂರು ಕಡೆಯಿಂದ ಬರುವ ವಾಹನಗಳು ಕ್ಯಾದಿಗೆರೆಯಿಂದ ಹೊಸ ಬೈಪಾಸ್ ಮೂಲಕ ಸಂಚರಿಸಿ, ಎನ್.ಹೆಚ್.50 ಪಿಳ್ಳೆ ಕೇರನಹಳ್ಳಿ ಮೂಲಕ ಚಿತ್ರದುರ್ಗ ನಗರ ಪ್ರವೇಶಿಸಲು ವ್ಯವಸ್ಥೆ ಕೈಗೊಳ್ಳಲಾಗಿದೆ. ಇನ್ನು ಪ್ರಧಾನಿ ನರೇಂದ್ರ ಮೋದಿ ಭೇಟಿ ವೇಳೆ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಸೂಕ್ತ ಬಂದೋಬಸ್ತ್ ಏರ್ಪಡಿಸಲಾಗಿದೆ.
ಇದನ್ನೂ ಓದಿ - Zee Kannada News Opinion Poll Live: ಕೈ, ಕಮಲ, ದಳದ ಪೈಕಿ ಮೇಲುಗೈ ಸಾಧಿಸುವವರು ಯಾರು..? ಇಲ್ಲಿದೆ ಪ್ರಾಂತ್ಯವಾರು ಮಾಹಿತಿ
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.