"ಆಶೀರ್ವಾದ ನೀಡಲು ನರೇಂದ್ರ ಮೋದಿ‌ ಅವರು ದೇವರಲ್ಲ"- ನಡ್ದಾ ಹೇಳಿಕೆಗೆ ಸಿದ್ದುಕಿಡಿ 

ಪ್ರಜಾಪ್ರಭುತ್ವದಲ್ಲಿ‌ ಜನರೇ ಜನಾರ್ಧನರು, ಆಶೀರ್ವಾದ ನೀಡಲು ನರೇಂದ್ರ ಮೋದಿ‌ ಅವರು ದೇವರಲ್ಲ ಎಂದು ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ದಾ ಹೇಳಿಕೆಗೆ ಕಿಡಿ ಕಾರಿದ್ದಾರೆ.

Written by - Zee Kannada News Desk | Last Updated : Apr 20, 2023, 12:08 AM IST
  • ಜನರ ಸೇವೆ ಮಾಡಲು ಜನರಿಂದ ಆಯ್ಕೆಯಾಗಿರುವ ಪ್ರತಿನಿಧಿ ಎನ್ನುವುದು ನೆನಪಿರಲಿ ಜೆಪಿ ನಡ್ದಾ ಅವರೇ.
  • ಕರ್ನಾಟಕದ ಜನತೆ ನರೇಂದ್ರ ಮೋದಿಯವರ ಆಶೀರ್ವಾದದಿಂದ ವಂಚಿತರಾಗಬಾರದು ಎನ್ನುವ ನಿಮ್ಮ ಹೇಳಿಕೆ ಬೆದರಿಕೆ ಎಂದಾದರೆ ಅದಕ್ಕೆ ನನ್ನ ಧಿಕ್ಕಾರ ಇದೆ.
  • ಇದು‌ ನಿಮ್ಮ ಅಜ್ಞಾನ ಎಂದಾದರೆ ನಿಮಗೆ ದೇವರು ಸದ್ಬುದ್ದಿಯ ಆಶೀರ್ವಾದವನ್ನು ಮಾಡಲಿ ಎಂದು ಹಾರೈಸುತ್ತೇನೆ
"ಆಶೀರ್ವಾದ ನೀಡಲು ನರೇಂದ್ರ ಮೋದಿ‌ ಅವರು ದೇವರಲ್ಲ"- ನಡ್ದಾ ಹೇಳಿಕೆಗೆ ಸಿದ್ದುಕಿಡಿ  title=
file photo

ಬೆಂಗಳೂರು: ಪ್ರಜಾಪ್ರಭುತ್ವದಲ್ಲಿ‌ ಜನರೇ ಜನಾರ್ಧನರು, ಆಶೀರ್ವಾದ ನೀಡಲು ನರೇಂದ್ರ ಮೋದಿ‌ ಅವರು ದೇವರಲ್ಲ ಎಂದು ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ದಾ ಹೇಳಿಕೆಗೆ ಕಿಡಿ ಕಾರಿದ್ದಾರೆ.

ಜನರ ಸೇವೆ ಮಾಡಲು ಜನರಿಂದ ಆಯ್ಕೆಯಾಗಿರುವ ಪ್ರತಿನಿಧಿ ಎನ್ನುವುದು ನೆನಪಿರಲಿ ಜೆಪಿ ನಡ್ದಾ ಅವರೇ.ಕರ್ನಾಟಕದ ಜನತೆ ನರೇಂದ್ರ ಮೋದಿಯವರ ಆಶೀರ್ವಾದದಿಂದ ವಂಚಿತರಾಗಬಾರದು ಎನ್ನುವ ನಿಮ್ಮ ಹೇಳಿಕೆ ಬೆದರಿಕೆ ಎಂದಾದರೆ ಅದಕ್ಕೆ ನನ್ನ ಧಿಕ್ಕಾರ ಇದೆ. ಇದು‌ ನಿಮ್ಮ ಅಜ್ಞಾನ ಎಂದಾದರೆ ನಿಮಗೆ ದೇವರು ಸದ್ಬುದ್ದಿಯ ಆಶೀರ್ವಾದವನ್ನು ಮಾಡಲಿ ಎಂದು ಹಾರೈಸುತ್ತೇನೆ" ಎಂದು ಅವರು ಹೇಳಿದ್ದಾರೆ.

ಒಕ್ಕೂಟ ವ್ಯವಸ್ಥೆಯಲ್ಲಿ ರಾಜ್ಯಗಳು ಸಂವಿಧಾನದತ್ತವಾದ ಸಮಾನ ಸ್ಥಾನಮಾನ, ಗೌರವ ಮತ್ತು ಹಕ್ಕುಗಳನ್ನು ಹೊಂದಿರುತ್ತವೆ ಎಂಬುದು ನೆನಪಿರಲಿ.ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ‌ ನಿಮ್ಮ‌ ಸರ್ವಾಧಿಕಾರಿ ಧೋರಣೆಗೆ ಅವಕಾಶ ಇಲ್ಲ ಎಂದು ಸಿದ್ದರಾಮಯ್ಯ ಹೇಳಿದರು.

ಸಿದ್ಧರಾಮಯ್ಯನವರ ಹೇಳಿಕೆ ಶಿಗ್ಗಾವಿಯಲ್ಲಿ ಜೆಪಿ ನಡ್ದಾ ರಾಜ್ಯವು ಮೋದಿಯವರ ಆಶಿರ್ವಾದಿಂದ ವಂಚಿತರಾಗಬಾರದು ಎಂದು ಹೇಳಿದ ಬೆನ್ನಲ್ಲೇ ಬಂದಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News