ಕಾಂಗ್ರೆಸ್‌ ಶಾಸಕಿ ನಯನಾ ಮೋಟಮ್ಮ ʼಖಾಸಗಿ ಫೋಟೋಸ್‌ʼ ವೈರಲ್‌..! ʼಅವಿವೇಕಿಗಳಿಗೆ ಇದು ತಿಳಿದಿರಲಿʼ

ನಯನಾ ಮೋಟಮ್ಮ ಅವರ ಖಾಸಗಿ ಫೋಟೋಸ್‌ಗಳನ್ನು ಒಳಗೊಂಡ ವಿಡಿಯೋ ಒಂದು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. ನಯನ ಅವರು ಮಾಜಿ ಸಚಿವೆ ಮೋಟಮ್ಮ ಅವರ ಪುತ್ರಿಯಾಗಿದ್ದು, ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ಮೀಸಲು ವಿಧಾನಸಭಾ ಕ್ಷೇತ್ರದ ಶಾಸಕಿಯೂ ಸಹ ಹೌದು.

Written by - Krishna N K | Last Updated : May 20, 2023, 03:12 PM IST
  • ನಯನಾ ಮೋಟಮ್ಮ ಅವರ ವಿಡಿಯೋ ಒಂದು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ.
  • ಸ್ವತಃ ಈ ವಿಡಿಯೋವನ್ನು ನಯನಾ ಮೋಟಮ್ಮ ಅವರು ಹಂಚಿಕೊಂಡಿದ್ದಾರೆ.
ಕಾಂಗ್ರೆಸ್‌ ಶಾಸಕಿ ನಯನಾ ಮೋಟಮ್ಮ ʼಖಾಸಗಿ ಫೋಟೋಸ್‌ʼ ವೈರಲ್‌..! ʼಅವಿವೇಕಿಗಳಿಗೆ ಇದು ತಿಳಿದಿರಲಿʼ title=

ಬೆಂಗಳೂರು : ಬಹುಮತದೊಂದಿಗೆ ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ರಚನೆಗೆ ಕಾಲಿಟ್ಟಿದೆ. ಇಂದು ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್‌ ಅವರು ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. ಹಲವು ಸಚಿವರು ಸಹ ಪದಗ್ರಹಣ ಮಾಡಿದ್ದಾರೆ. ಇದೆ ವೇಳೆ ಕಾಫಿ ನಾಡು ಚಿಕ್ಕಮಗಳೂರಿನ ಮೂಡಿಗೆರೆ ಮೀಸಲು ಕ್ಷೇತ್ರದಲ್ಲಿ ಗೆಲುವು ಸಾಧಿಸಿ ಶಾಸಕಿಯಾಗಿರುವ ನಯನಾ ಮೋಟಮ್ಮ ಅವರ ವಿಡಿಯೋ ಒಂದು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ.

ಹೌದು... ಸ್ವತಃ ಈ ವಿಡಿಯೋವನ್ನು ನಯನಾ ಮೋಟಮ್ಮ ಅವರು ಹಂಚಿಕೊಂಡಿದ್ದಾರೆ. ಅಲ್ಲದೆ, ಈ ವಿಡಿಯೋಗೆ ʼಸೋಲಿನ ಹತಾಶೆ ನಿಮ್ಮನ್ನ ಇನ್ನಷ್ಟು ಕಾಡದಿರಲಿ. ಹೌದು... ರಾಜಕೀಯ, ನಾನು, ನನ್ನತನ, ನನ್ನ ವೈಯುಕ್ತಿಕ ಜೀವನ ಇವೆಲ್ಲದರ ವ್ಯತ್ಯಾಸ ತಿಳಿಯದ ಅವಿವೇಕಿಗಳಿಗೆ ಉತ್ತರವಿದು.ʼ ಎಂದು ಶೀರ್ಷಿಕೆ ಬರೆದುಕೊಂಡಿದ್ದಾರೆ. ನಯನಾ ಅವರ ಈ ನೇರ ನಡೆ ಮತ್ತು ಧೈರ್ಯ ಅವರ ಅಭಿಮಾನಿಗಳಿಗೆ ಇಷ್ಟವಾಗಿದೆ.

ಇದನ್ನೂ ಓದಿ: ಕಂಗ್ರಾಜುಲೇಷನ್ಸ್ ಸಿದ್ದರಾಮಯ್ಯ - ಡಿಕೆಶಿ..! ʼ5 ಗ್ಯಾರಂಟಿಗಳನ್ನುʼ ಮಾತ್ರ ಮರೆಯಬೇಡಿ

ಸ್ವತಃ  ತಾವೇ ತಮ್ಮ ಖಾಸಗಿ ಫೋಟೋಸ್‌ ಮತ್ತು ವಿಡಿಯೋಗಳನ್ನು ಹಂಚಿಕೊಳ್ಳುವ ಮೂಲಕ ತಮ್ಮ ವೈಯಕ್ತಿಯ ಜೀವನ ಮತ್ತು ರಾಜಕೀಯ ಜೀವನ ವಿಭಿನ್ನವಾಗಿರುತ್ತವೆ. ಈ ವಿಚಾರ ಅವಿವೇಕಿಗಳಿಗೆ ತಿಳಿದಿರಲಿ ಎಂದು ವಿರೋಧಿಗಳಿಗೆ ನೇರವಾಗಿ  ಹೇಳಿದ್ದಾರೆ. ಸದ್ಯ ನಯನಾ ಅವರ ಧೈರ್ಯಕ್ಕೆ ಅವರ ಅಭಿಮಾನಿಗಳು ಸೇರಿದಂತೆ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ನಯನ ಮೋಟಮ್ಮ ಯಾರು ಅಂತ ನೋಡುವುದಾದರೆ ಇವರು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕಿ, ದಲಿತವಾದಿ ಹಾಗೂ ಮಾಜಿ ಸಚಿವೆ ಮೋಟಮ್ಮ ಅವರ ಪುತ್ರಿ.

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಆಪ್ತ ಬಣದಲ್ಲಿ ಗುರುತಿಸಿಕೊಂಡಿದ್ದ ನಯನಾ ಅವರು ಕಾಫಿ ನಾಡು ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ಮೀಸಲು ವಿಧಾನಸಭಾ ಕ್ಷೇತ್ರದಲ್ಲಿ ಭಾರಿ ವಿರೋಧದ ನಡುವೆಯೂ ಕಾಂಗ್ರೆಸ್‌ನಿಂದ ಟಿಕೆಟ್ ಪಡೆದು ಗೆದ್ದು ಬಂದಿದ್ದಾರೆ. ಬಿಜೆಪಿಯ ಶಾಸಕರಾಗಿದ್ದ ಎಂಪಿ ಕುಮಾರಸ್ವಾಮಿಗೆ ಟಿಕೆಟ್ ಸಿಗದ ಹಿನ್ನೆಲೆ ಅವರು ಜೆಡಿಎಸ್‌ನಿಂದ ಸ್ಪರ್ಧಿಸಿದ್ದರು. ಬಿಜೆಪಿ ದೀಪಕ್ ದೊಡ್ಡಯ್ಯ ಅವರಿಗೆ ಮಣೆ ಹಾಕಿತ್ತು. ಆದ್ರೆ ನಯನಾ ಮೊಟಮ್ಮ ಗೆಲುವು ಸಾಧಿಸಿ ಶಾಸಕಿಯಾಗಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News