ಬೆಂಗಳೂರು : ಕರ್ನಾಟಕದಲ್ಲಿ ಸರ್ಕಾರ ರಚನೆ ಕಸರತ್ತು ಮುಂದಿವರೆದಿದೆ. ಯಾರು ಮುಂದಿನ ಸಿಎಂ ಎನ್ನುವುದೇ ಸದ್ಯದ ಕುತೂಹಲ. ಇಂದು ಸಂಜೆ ಅಥವಾ ನಾಳೆ ಬೆಳಗ್ಗೆ ರಾಜ್ಯಪಾಲರ ಭೇಟಿ ಮಾಡಲಿರುವ ಕಾಂಗ್ರೆಸ್, ಸರ್ಕಾರ‌ ರಚನೆಗೆ ಹಕ್ಕು ಮಂಡಿಸಲಿದೆ. ಇದೀಗ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಆಯ್ಕೆ ಬಹತೇಕ ಖಚಿತ ಎಂದೇ ಹೇಳಲಾಗುತ್ತಿದೆ. ಶಾಸಕಾಂಗ ನಾಯಕನಾಗಿ ಡಿ.ಕೆ‌.ಶಿವಕುಮಾರ್ ಹೆಸರನ್ನು  ಎಐಸಿಸಿ ಅಧ್ಯಕ್ಷರು ಘೋಷಿಸಲಿದ್ದಾರೆ ಎನ್ನಲಾಗುತ್ತಿದೆ. 


COMMERCIAL BREAK
SCROLL TO CONTINUE READING

ಡಿಸಿಎಂ ಸ್ಥಾನ ಸೃಷ್ಠಿ ಸಾಧ್ಯತೆ? :
ಕರ್ನಾಟಕದಲ್ಲಿ ಮುಂದಿನ ಸಿಎಂ ಯಾರು ಎನ್ನುವ ಬಗ್ಗೆ ಕುತೂಹಲ ಹೆಚ್ಚಿದೆ. ಮುಖ್ಯಮಂತ್ರಿ ರೇಸ್ ನಲ್ಲಿರುವ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರನ್ನು ಕೇಂದ್ರ ನಾಯಕರು ದೆಹಲಿಗೆ ಕರೆಸಿಕೊಂಡಿದ್ದಾರೆ. ಇನ್ನು ಡಿಕೆ ಶಿವಕುಮಾರ್ ಗೆ ಸಿಎಂ ಸ್ಥಾನ ಸಿಕ್ಕಿದರೆ ಒಕ್ಕಲಿಗ ಸಮುದಾಯದ ನಾಯಕ ಮುಖ್ಯಮಂತ್ರಿಯಾಗುತ್ತಾರೆ. ಹಾಗಾಗಿ ಲಿಂಗಾಯತ ಮತ್ತು ದಲಿತರಿಗೆ ಡಿಸಿಎಂ ಸ್ಥಾನ ನೀಡುವ ಬಗ್ಗೆಯೂ ಚಿಂತನೆ ನಡೆಯುತ್ತಿದೆ ಎನ್ನಲಾಗಿದೆ.


ಇದನ್ನೂ ಓದಿ :  Puttur Assembly Constituency : ಬಿಜೆಪಿ ನಾಯಕರ ಫೋಟೋಗಳಿಗೆ ಭಾವಪೂರ್ಣ ಶ್ರದ್ಧಾಂಜಲಿ ಪೋಸ್ಟರ್‌ ವೈರಲ್‌ !


ಸಿದ್ದರಾಮಯ್ಯ ಬಣಕ್ಕೆ ಡಿಸಿಎಂ ಪಟ್ಟ : 
ಈಗಾಗಲೇ ಸಿದ್ದರಾಮಯ್ಯ ಅವರಿಗೆ ದೆಹಲಿಗೆ ಬುಲಾವ್ ನೀಡಿರುವ ಕಾಂಗ್ರೆಸ್ ಅವರನ್ನು ಸಮಾಧಾನಪಡಿಸುವ ಪ್ರಯತ್ನಕ್ಕೆ ಮುಂದಾಗಿದೆ. ಈ ಬಾರಿ ಡಿ.ಕೆ.ಶಿವಕುಮಾರ್ ಗೆ ಈಗ ಅವಕಾಶ ಕೊಡಿ ಎಂದು ಸಿದ್ದರಾಮಯ್ಯ ಅವರ ಮನವೊಲಿಸುವ ಸಾಧ್ಯತೆ ಇದೆ. ನಿನ್ನೆ ನಡೆಸಿದ ಮತದಾನ ಮತ್ತು ಅಭಿಪ್ರಾಯ ಸಂಗ್ರಹದಲ್ಲೂ ಡಿ.ಕೆ.ಶಿವ ಕುಮಾರ್ ಪರ ಹೆಚ್ಚಿನ ಶಾಸಕರ ಒಲವು ತೋರಿದ್ದರು ಎನ್ನಲಾಗಿದೆ. ಹಾಗಾಗಿ ಈ ಬಾರಿ ಡಿಕೆ ಶಿವಕುಮಾರ್ ಸಿಎಂ ಸ್ಥಾನವನ್ನು ಅಲಂಕರಿಸುವುದು ಬಹುತೇಕ ಖಚಿತ ಎನ್ನಲಾಗಿದೆ.  


ಡಿಕೆ ಶಿವಕುಮಾರ್ ಪರ ಹೆಚ್ಚಿನ ಒಲವು :


ರಾಜ್ಯ ಉಸ್ತುವಾರಿ ರಣದೀಪ್‌ಸಿಂಗ್ ಸುರ್ಜೇವಾಲಾ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ,ಸೋನಿಯಾ ಗಾಂಧಿ, ರಾಹುಲ್‌ಗಾಂಧಿ ಸಹ ಡಿ.ಕೆ.ಶಿವಕುಮಾರ್ ‌ಬೆಂಬಲಕ್ಕೆ ನಿಂತಿದ್ದಾರೆ ಎಂದು ಮೂಲಗಳು ಹೇಳುತ್ತಿವೆ. ಆದರೆ ಕೆ.ಸಿ ವೇಣುಗೋಪಾಲ್ ಮಾತ್ರ ಸಿದ್ದರಾಮಯ್ಯ ಪರ ಬ್ಯಾಟ್ ಬೀಸಿದ್ದಾರೆ ಎಂದು ಹೇಳಲಾಗುತ್ತಿದೆ. 


ಇದನ್ನೂ ಓದಿ :  Karnataka Elections 2023: ಸಿದ್ದರಾಮಯ್ಯ vs ಡಿಕೆ ಶಿವಕುಮಾರ್, ಯಾರಿಗೆ ಸಿಎಂ ಪಟ್ಟ?


ಡಿಕೆಶಿ ಅಭಿಮಾನಿಗಳ ಪೂಜೆ ಪ್ರಾರ್ಥನೆ :


ಮತ್ತೊಂದೆಡೆ, ಡಿಕೆ ಶಿವಕುಮಾರ್ ಸಿಎಂ ಆಗಲಿ ಎಂದು ಹಾಇಸು ಅಭಿಮಾನಿಗಳಿಂದ ಪೂಜೆ ಪುನಸ್ಕಾರಗಳು ಕೂಡಾ ನಡೆಯುತ್ತಿವೆ. ದೇವಾಲಯಗಳಿಗೆ ತೆರಳಿರುವ ಡಿಕೆಶಿ ಅಭಿಮಾನಿಗಳು ವಿಶೇಷ ಪೂಜೆ ಸಲ್ಲಿಸುತ್ತಿದ್ದಾರೆ. ನೆಲಮಂಗಲದ ವಾದಕುಂಟೆ ಗ್ರಾಮದಲ ಶ್ರೀರಾಮ ಮಂದಿರದಲ್ಲಿ ಅಭಿಮಾನಿಗಳು ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ. 1001 ತೆಂಗಿನಕಾಯಿ ಈಡುಗಾಯಿ ಒಡೆದು ಪ್ರಾರ್ಥಿಸಿದ್ದಾರೆ. ಡಿಕೆ ಶಿವಕುಮಾರ್‌ಗೆ ಜೈಕಾರ ಹಾಕಿ, ಮುಂದಿನ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಎಂದು ಘೋಷಣೆ ಕೂಗಿದ್ದಾರೆ.  


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.