ಎಸ್.ಸಿ ಪಟ್ಟಿಯಿಂದ ಯಾರನ್ನೂ ತೆಗೆಯುವ ಪ್ರಶ್ನೆ ಇಲ್ಲ: ಸಿಎಂ ಬೊಮ್ಮಾಯಿ
ಎಸ್.ಸಿ ಪಟ್ಟಿಯಿಂದ ಕೈಬಿಡಲಾಗಿದೆ ಎಂದು ಸಮುದಾಯಗಳಿಗೆ ಕಾಂಗ್ರೆಸ್ ನವರು ಸುಳ್ಳು ಮಾಹಿತಿ ಕೊಡುತ್ತಿದ್ದಾರೆ. ಬಂಜಾರ, ಭೋವಿ, ಕೊರಚ ಯಾರನ್ನೂ ಕೂಡ ಪಟ್ಟಿಯಿಂದ ತೆಗೆಯಲಾಗುವುದಿಲ್ಲ.
ಬೆಂಗಳೂರು, ಮಾರ್ಚ್ 29: ಎಸ್.ಸಿ ಪಟ್ಟಿಯಿಂದ ಕೈಬಿಡುವುದಾಗಿ ಕಾಂಗ್ರೆಸ್ ರಾಜಕೀಯ ಪ್ರೇರಿತ ಕುತಂತ್ರ ಮಾಡಿದ್ದು ಯಾರನ್ನೂ ತೆಗೆಯುವ ಪ್ರಶ್ನೆ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿದರು.
ಎಸ್.ಸಿ ಪಟ್ಟಿಯಿಂದ ಕೈಬಿಡಲಾಗಿದೆ ಎಂದು ಸಮುದಾಯಗಳಿಗೆ ಕಾಂಗ್ರೆಸ್ ನವರು ಸುಳ್ಳು ಮಾಹಿತಿ ಕೊಡುತ್ತಿದ್ದಾರೆ. ಬಂಜಾರ, ಭೋವಿ, ಕೊರಚ ಯಾರನ್ನೂ ಕೂಡ ಪಟ್ಟಿಯಿಂದ ತೆಗೆಯಲಾಗುವುದಿಲ್ಲ. ಈ ಬಗ್ಗೆ ಫೆಬ್ರವರಿ ಮಾಹೆಯಲ್ಲಿ ಕೇಂದ್ರ ಸರ್ಕಾರಕ್ಕೆ ಮಾಹಿತಿ ನೀಡಲಾಗಿದೆ. ಇವರೆಲ್ಲಾ ಮಹಾರಾಜರ ಕಾಲದಿಂದಲೂ ಇರುವಂಥ ಸಮುದಾಯಗಳು. ಸಂವಿಧಾನ ಆದ ನಂತರ ಇದ್ದ ಆರು ಸಮುದಾಯಗಳಲ್ಲಿ ಇವೂ ಇದ್ದು, ಇದನ್ನು ತೆಗೆಯುವ ಪ್ರಶ್ನೆಯೇ ಇಲ್ಲ ಎಂದು ಆಧಾರ ಸಮೇತವಾಗಿ ನೀಡಲಾಗಿದೆ.
ಇದನ್ನೂ ಓದಿ: Priyanka Chopra : ಪ್ರಿಯಾಂಕಾ ಬಾಲಿವುಡ್ ತೊರೆಯಲು ಕಾರಣ ಕರಣ್ ಜೋಹರ್!? ಹೊರಬಿತ್ತು ಅಸಲಿ ಸತ್ಯ
ಅವರಿಗೆ ಗೊತ್ತು
ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಎರಡೂ ಪಕ್ಷಗಳ ವರಿಷ್ಠರು ಆಫರ್ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಅವರಿಗೆ ಯಾರು ಯಾವಾಗ ಏನು ಕೊಡುಗೆ ನೀಡುತ್ತಾರೆ, ಅವರು ಏನು ಸ್ವೀಕಾರ ಮಾಡುತ್ತಾರೆ ಎಂದು ಅವರಿಗೇ ಗೊತ್ತು ಎಂದರು. ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಲಿದೆ. ಈಗಾಗಲೇ ಸಮೀಕ್ಷೆಯ ವರದಿಗಳಿವೆ. ಅದರೊಂದಿಗೆ ತಾಲ್ಲೂಕು ಹಾಗೂ ಜಿಲ್ಲಾ ಮಟ್ಟದ ಅಭಿಪ್ರಾಯಗಳನ್ನು ಪಡೆದು ರಾಜ್ಯ ಮಟ್ಟದಲ್ಲಿ ಕ್ರೂಢೀಕರಿಸಿ ಪಟ್ಟಿ ಸಂಸದೀಯ ಮಂಡಳಿಗೆ ಕಳುಹಿಸಲಾಗುವುದು. ಒಂದು ವಾರ ಪ್ರಕ್ರಿಯೆ ನಡೆಯಲಿದೆ ಎಂದರು.
ಇದನ್ನೂ ಓದಿ: ನೂತನ ಕೊಪ್ಪಳ ವಿಶ್ವವಿದ್ಯಾಲಯಕ್ಕೆ ಮುಖ್ಯಮಂತ್ರಿ ಬೊಮ್ಮಾಯಿ ಚಾಲನೆ
ಕಾಂಗ್ರೆಸ್ ಗೆ ಅಭ್ಯರ್ಥಿಗಳ ಕೊರತೆ
ಕೆ.ಪಿ.ಸಿ.ಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಎರಡನೇ ಪಟ್ಟಿ ಸಿದ್ದ ಮಾಡುವಾಗ ನಮ್ಮ ಶಾಸಕರಿಗೆ ಕರೆ ಮಾಡಿದ್ದಾರೆ. ನಮ್ಮ ಶಾಸಕರನ್ನು ಸಂಪರ್ಕಿಸಿರುವುದು ಅವರ ಪರಿಸ್ಥಿತಿ ತೋರಿಸುತ್ತದೆ. ಗಟ್ಟಿಯಾದ ಅಭ್ಯರ್ಥಿ ಗಳಿದ್ದಿದ್ದರೆ ನಮ್ಮ ಶಾಸಕರಿಗೆ ಕರೆ ಮಾಡುತ್ತಿರಲಿಲ್ಲ. ಸಾರಾಸಗಟಾಗಿ ಎಲ್ಲರಿಗೂ ಕರೆ ಮಾಡಿ ನಮ್ಮದಿನ್ನೂ ನಿರ್ಣಯವಾಗಿಲ್ಲ, ನೀವು ಬಂದರೆ ನಿಮಗೆ ಟಿಕೆಟ್ ಕೊಡುವುದಾಗು ಹೇಳಿದ್ದಾರೆ ಎಂದರು. ನಮ್ಮ ಪಕ್ಷದವರು ಅವರು ಬರುವುದಿಲ್ಲ ಎಂದು ತಿಳಿಸಿದ್ದಾರೆ. ಕಾಂಗ್ರೆಸ್ ಗೆ ಅಭ್ಯರ್ಥಿಗಳ ಕೊರತೆ ಎದುರಾಗಿದೆ. ವಲಸಿಗರು ಸೇರಿದಂತೆ ಮೂಲ ಬಿಜೆಪಿ ಶಾಸಕರನ್ನ ಸಂಪರ್ಕ ಮಾಡಿದ್ದಾರೆ. ಈ ಬಾರಿ ಸ್ಪಷ್ಟ ಬಹುಮತದ ಮೇಲೆ ಅಧಿಕಾರಕ್ಕೆ ಬರುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಜನಸೇವೆಗೆ ಅವಕಾಶ
ಇಷ್ಟು ಜನರ ಅಹವಾಲು ಸ್ವೀಕರಿಸಿದೆ ನಾಳೆಯಿಂದ ಸ್ವೀಕರಿಸಲು ನೀತಿ ಸಂಹಿತೆ ಅಡ್ಡಿ ಆಗಲಿದೆ. ಇಷ್ಟು ದಿನ ಜನರ ಸೇವೆ ಮಾಡಲು ಅವಕಾಶ ದೊರೆತಿತ್ತು. ಕಾನೂನು ಪ್ರಕಾರ ನಾವು ನಡೆದುಕೊಳ್ಳಬೇಕು ಎಂದರು.
ಕಾದು ನೋಡಿ
ಚುನಾವಣೆ ಒಂದು ಹಂತವೋ, ಎರಡು ಹಂತದ ಚುನಾವಣೆಯೋ ಅನ್ನೋ ಪ್ರಶ್ನೆಗೆ ಕಾದು ನೋಡಿ ಎಂದ ಸಿಎಂ ಬಸವರಾಜ ಬೊಮ್ಮಾಯಿ ಅವರು ಪ್ರಧಾನಿ ಮೋದಿ ಮತ್ತು ನಮ್ಮ ವೇಳಾಪಟ್ಟಿಯನ್ನ ಪಕ್ಷದಿಂದ ನಿಗದಿಯಾಗುತ್ತೆ. ಪಟ್ಟಿ ಬಿಡುಗಡೆ ಬಗ್ಗೆ ದಿನಾಂಕ ಹೇಳಲಾಗುವುದಿಲ್ಲ ಇನ್ನೂ ಮುಂದೆ ಪಟ್ಟಿ ಅಂತಿಮ ಮಾಡಲಾಗುವುದು ಎಂದರು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.