ಧಾರವಾಡ ಜಿಲ್ಲೆಯ ರಾಜಕೀಯ ಚಿತ್ರಣ- ಮೂರು ಕಡೆ ಕಮಲ, ನಾಲ್ಕು ಕಡೆ ಕೈ ಗೆಲುವು

Written by - Zee Kannada News Desk | Last Updated : May 13, 2023, 06:07 PM IST
  • ಕಾಂಗ್ರೆಸ್ ಹಾಗೂ ಭಾರತೀಯ ಜನತಾ ಪಕ್ಷದಲ್ಲಿ ಘಟನಾ ಘಟಿಗಳು ಪ್ರಚಾರಕ್ಕೆ ಬಂದು ದೇಶ್ ಗಮನ ಸೆಳೆದರು
  • ಜಗದೀಶ್ ಶೆಟ್ಟರ್ ಸ್ವಾಭಿಮಾನ ವರ್ಕೌಟ್ ಆಗಲಿಲ್ಲ
  • ಕಾಂಗ್ರೆಸ್ ಹಾಗೂ ಭಾರತೀಯ ಜನತಾ ಪಕ್ಷದಲ್ಲಿ ಘಟನಾ ಘಟಿಗಳು ಪ್ರಚಾರಕ್ಕೆ ಬಂದು ದೇಶ್ ಗಮನ ಸೆಳೆದರು
ಧಾರವಾಡ ಜಿಲ್ಲೆಯ ರಾಜಕೀಯ ಚಿತ್ರಣ- ಮೂರು ಕಡೆ ಕಮಲ, ನಾಲ್ಕು ಕಡೆ ಕೈ ಗೆಲುವು title=

ಹುಬ್ಬಳ್ಳಿ; ಕರುನಾಡು ಕುರುಕ್ಷೇತ್ರ ಮುಗಿದಿದ್ದು ಧಾರವಾಡ ಜಿಲ್ಲೆಯಲ್ಲಿ ಸಹ ಸಾಕಷ್ಟು ಜಿದ್ದಾಜಿದ್ದಿನ ರಾಜಕೀಯ ಅಖಾಡ ರೆಡಿಯಾಗಿತ್ತು. ಇಂದು ಅಂತಿಮ ಫಲಿತಾಂಶ ಹೊರಬಿದ್ದಿದ್ದು ಜಿಲ್ಲೆಯ ಏಳು ವಿಧಾನ ಸಭಾ ಕ್ಷೇತ್ರಗಳ ಪೈಕಿ 3 ಬಿಜೆಪಿ ಹಾಗೂ 4 ಕಾಂಗ್ರೆಸ್ ಅಭ್ಯರ್ಥಿಗಳು ವಿಜಯಶಾಲಿ ಆಗಿದ್ದಾರೆ.

ಇದನ್ನೂ ಓದಿ: Mudigere Vidhan Sabha Constituency : ಮೂಡಿಗೆರೆ ಕಾಂಗ್ರೆಸ್ ಅಭ್ಯರ್ಥಿ ನಯನ ಮೋಟಮ್ಮ ಗೆಲುವು

ಈ ಏಳು ವಿಧಾನ ಸಭಾ ಕ್ಷೇತ್ರಗಳಲ್ಲಿ ಅತ್ಯಂತ ಹೆಚ್ಚು ಸದ್ದು ಮಾಡಿದ್ದು ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ವಿಧಾನ ಸಭಾ ಕ್ಷೇತ್ರ. ಈ ಕ್ಷೇತ್ರದಲ್ಲಿ ಭಾರತೀಯ ಜನತಾ ಪಕ್ಷದಲ್ಲಿ ಟಿಕೆಟ್ ಸಿಗಲಿಲ್ಲ ಎಂಬ ಕಾರಣಕ್ಕಾಗಿ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಅಭ್ಯರ್ಥಿ ಆಗಿ ಕಣಕ್ಕೆ ಇಳಿದರೆ ಜಗದೀಶ್ ಶೆಟ್ಟರ್ ಅವರ ಗರಡಿಯಲ್ಲಿಯೇ ಪಳಗಿದ ಶೆಟ್ಟರ್ ಶಿಷ್ಯ ಮಹೇಶ ಟೆಂಗಿನಕಾಯಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಎದುರುರಾಳಿ ಆದರು. ಗುರು ಶಿಷ್ಯ ಕಾಳಗ ರಾಜ್ಯ ರಾಷ್ಟ್ರ ಮಟ್ಟದ ಭಾರೀ ಸದ್ದು ಮಾಡಿತು.

ಕಾಂಗ್ರೆಸ್ ಹಾಗೂ ಭಾರತೀಯ ಜನತಾ ಪಕ್ಷದಲ್ಲಿ ಘಟನಾ ಘಟಿಗಳು ಪ್ರಚಾರಕ್ಕೆ ಬಂದು ದೇಶ್ ಗಮನ ಸೆಳೆದರು. ತಮ್ಮ ಸ್ವಾಭಿಮಾನಕ್ಕೆ ಧಕ್ಕೆ ಆಗಿದೆ ಅಂತಾ ಜಗದೀಶ್ ಶೆಟ್ಟರ್ ಭಾರತೀಯ ಜನತಾ ಪಕ್ಷದಲ್ಲಿ ಎಲ್ಲವನ್ನೂ ಅನುಭವಿಸಿ  ಅಧಿಕಾದದ ಹಪಾಹಪಿಗಾಗಿ ಕಾಂಗ್ರೆಸ್ ಸೇರ್ಪಡೆ ಆಗಿದ್ದಾರೆ ಅಂತಾ ಭಾರತೀಯ ಜನತಾ ಪಕ್ಷದವರು ಆರೋಪ ಪ್ರತ್ಯಾರೋಪ ಮಾಡಿದ್ದರು. ಆದರೆ ಜಗದೀಶ್ ಶೆಟ್ಟರ್ ಸ್ವಾಭಿಮಾನ ವರ್ಕೌಟ್ ಆಗಲಿಲ್ಲ.

ಇದನ್ನೂ ಓದಿ: Chikkamagalore Vidhan Sabha Chunav: ಕಾಫಿನಾಡು ಚಿಕ್ಕಮಗಳೂರಿನಲ್ಲಿ ಕೈ ಕಲಿಗಳದ್ದೇ ಮೇಲು ಗೈ!

ಸಹಜವಾಗಿಯೇ ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ವಿಧಾನ ಸಭಾ ಕ್ಷೇತ್ರ ಭಾರತೀಯ ಜನತಾ ಪಕ್ಷದ ಭದ್ರ ಬುನಾದಿ ಮಹೇಶ್ ಟೆಂಗಿನಕಾಯಿ ಹೊಸ ಮುಖ ಆದರು ಮತದಾರರು ಆಯ್ಕೆ ಮಾಡಿದ್ದಾರೆ. ಇನ್ನು ಧಾರವಾಡ ಗ್ರಾಮಾಂತರ ವಿಧಾನ ಸಭಾ ಕ್ಷೇತ್ರದಲ್ಲಿ ವಿನಯ ಕುಲಕರ್ಣಿ ಜಿಲ್ಲೆಯ ಹೊರಗಡೆ ಇದ್ದೇ ಗೆಲುವು ಸಾಧಿಸಿದ್ದು ಇದಕ್ಕೆ ಕಾರಣ ವಿನಯ ಕುಲಕರ್ಣಿ ಪತ್ನಿ ಶಿವಲೀಲಾ ಕುಲಕರ್ಣಿ. ಇನ್ನು ಕಲಘಟಗಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಹಾಗೂ ಅವರ ಗೆಳಯ ನಾಗರಾಜ ಛಬ್ಬಿ ವಿರುದ್ಧ ಗೆಲುವು ಕಂಡಿದ್ದಾರೆ. ನವಲಗುಂದ ವಿಧಾನ ಸಭಾ ಕ್ಷೇತ್ರದಲ್ಲಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಹಾಗೂ ಸಚಿವ ಶಂಕರ ಪಾಟೀಲ್ ಮುನೇನಕೊಪ್ಪ ವಿರುದ್ಧ ವಿಜಯ ಪತಾಕಿ ಹಾರಿಸಿದ್ದಾರೆ.

ಹುಬ್ಬಳ್ಳಿ ಧಾರವಾಡ ಪೂರ್ವ ವಿಧಾನ ಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಕ್ರಾಂತಿಕಿರಣ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿ ಹಾಲಿ ಶಾಸಕ ಪ್ರಸಾದ್ ಅಬ್ಬಯ್ಯಾ ಗೆಲುವು ಸಾಧಿಸಿದ್ದು ಕುಂದಗೋಳಸಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕುಸುಮಾವತಿ ಶಿವಳ್ಳಿ ವಿರುದ್ಧ ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಎಂ ಆರ್ ಪಾಟೀಲ್ ಜಯ ದ ಕೇಕೆ ಹಾಕಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

 

Trending News