"ಯತ್ನಾಳ್ ರನ್ನು ತಕ್ಷಣ ಪಕ್ಷದಿಂದ ಉಚ್ಚಾಟಿಸುವಂತೆ ಪ್ರಧಾನಿ ಮೋದಿ ಅವರು ಸೂಚನೆ ನೀಡಬೇಕು"

ಕಾಂಗ್ರೆಸ್ ಪಕ್ಷದ ಗೌರವಾನ್ವಿತ ನಾಯಕಿ ಸೋನಿಯಾ ಗಾಂಧಿಯವರನ್ನು ಅಶ್ಲೀಲ ಶಬ್ದಗಳಿಂದ ನಿಂದಿಸುತ್ತಿರುವ ಬಿಜೆಪಿ‌ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ತಕ್ಷಣ ಪಕ್ಷದಿಂದ ಉಚ್ಚಾಟಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಸೂಚನೆ ನೀಡಬೇಕು, ಇಲ್ಲದೆ ಇದ್ದರೆ ಅವರ ಬೆಂಬಲದಿಂದಲೇ ಯತ್ನಾಳ್ ಅವರು ಇಂತಹ ನೀಚತನದ ಪ್ರದರ್ಶನ ಮಾಡುತ್ತಿದ್ದಾರೆಂದು ತಿಳಿದುಕೊಳ್ಳಬೇಕಾಗುತ್ತದೆ ಎಂದು ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಆಗ್ರಹಿಸಿದ್ದಾರೆ.

Written by - Zee Kannada News Desk | Last Updated : Apr 28, 2023, 08:23 PM IST
  • ಶಾಸಕ ಯತ್ನಾಳ್ ಅವರ ಕೊಳಕು ನಾಲಿಗೆ ವಿರೋಧ ಪಕ್ಷದ ನಾಯಕರ ಮೇಲೆ ಮಾತ್ರ ಹರಿದಾಡಿದ್ದಲ್ಲ
  • ಸ್ವಂತ ಪಕ್ಷದ ನಾಯಕರನ್ನೂ ಅವರು ಅವಾಚ್ಯವಾಗಿ ನಿಂದಿಸುತ್ತಾ ಬಂದಿದ್ದರೂ ಅವರ ವಿರುದ್ಧ ಯಾವ ಕ್ರಮವನ್ನೂ ಕೈಗೊಂಡಿಲ್ಲ.
"ಯತ್ನಾಳ್ ರನ್ನು ತಕ್ಷಣ ಪಕ್ಷದಿಂದ ಉಚ್ಚಾಟಿಸುವಂತೆ ಪ್ರಧಾನಿ ಮೋದಿ ಅವರು ಸೂಚನೆ ನೀಡಬೇಕು" title=
file photo

ಬೆಂಗಳೂರು: ಕಾಂಗ್ರೆಸ್ ಪಕ್ಷದ ಗೌರವಾನ್ವಿತ ನಾಯಕಿ ಸೋನಿಯಾ ಗಾಂಧಿಯವರನ್ನು ಅಶ್ಲೀಲ ಶಬ್ದಗಳಿಂದ ನಿಂದಿಸುತ್ತಿರುವ ಬಿಜೆಪಿ‌ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ತಕ್ಷಣ ಪಕ್ಷದಿಂದ ಉಚ್ಚಾಟಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಸೂಚನೆ ನೀಡಬೇಕು, ಇಲ್ಲದೆ ಇದ್ದರೆ ಅವರ ಬೆಂಬಲದಿಂದಲೇ ಯತ್ನಾಳ್ ಅವರು ಇಂತಹ ನೀಚತನದ ಪ್ರದರ್ಶನ ಮಾಡುತ್ತಿದ್ದಾರೆಂದು ತಿಳಿದುಕೊಳ್ಳಬೇಕಾಗುತ್ತದೆ ಎಂದು ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಉಮಂಗ್ ಆ್ಯಪ್ ಮೂಲಕ ಓಪನ್‌ ಮಾಡಬಹುದು ಇಪಿಎಫ್ ಪಾಸ್​ಬುಕ್

ಸೋನಿಯಾ ಗಾಂಧಿಯವರ ವಿರುದ್ಧ ಈ ರೀತಿ ಅವಹೇಳನಕಾರಿಯಾದ ನಿಂದನೆ, ಚಾರಿತ್ರ್ಯಹನನದ ಪ್ರಯತ್ನ ಇದು ಮೊದಲ ಬಾರಿ ಅಲ್ಲ. ಸಾಕ್ಷಾತ್ ನರೇಂದ್ರ ಮೋದಿ ಅವರೇ ಸೋನಿಯಾ ಗಾಂಧಿಯವರನ್ನು ಕಾಂಗ್ರೆಸಿನ ವಿಧವೆ, ಜರ್ಸಿಕೌ, ಬಾರ್ ಡಾನ್ಸರ್ ಎಂದೆಲ್ಲ ಅವಹೇಳನ ಮಾಡಿದ್ದಾರೆ. ಬಹುಷಃ ಇದರ ಪ್ರಚೋದನೆಯಿಂದಲೇ ಯತ್ನಾಳ್ ಅಂತಹವರು ಈ ರೀತಿಯ ನೀಚ ಬುದ್ದಿಯನ್ನು ನಿರ್ಭೀತಿಯಿಂದ ಪ್ರದರ್ಶಿಸುತ್ತಿರುವಂತಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Karnataka Assembly Election: ಬಿಜೆಪಿ ಸಮಾವೇಶದಲ್ಲಿ ಕನ್ನಡ ನಾಡ ಗೀತೆಗೆ ಅವಮಾನ ತಮಿಳು ನಾಡಗೀತೆ ಪ್ರಸಾರ!

ಶಾಸಕ ಯತ್ನಾಳ್ ಅವರ ಕೊಳಕು ನಾಲಿಗೆ ವಿರೋಧ ಪಕ್ಷದ ನಾಯಕರ ಮೇಲೆ ಮಾತ್ರ ಹರಿದಾಡಿದ್ದಲ್ಲ, ಸ್ವಂತ ಪಕ್ಷದ ನಾಯಕರನ್ನೂ ಅವರು ಅವಾಚ್ಯವಾಗಿ ನಿಂದಿಸುತ್ತಾ ಬಂದಿದ್ದರೂ ಅವರ ವಿರುದ್ಧ ಯಾವ ಕ್ರಮವನ್ನೂ ಕೈಗೊಂಡಿಲ್ಲ. ಪಕ್ಷದ ಉನ್ನತ ಮಟ್ಟದ ನಾಯಕರ ಆಶೀರ್ವಾದ ಬಲದಿಂದಲೇ ಯತ್ನಾಳ್ ಅವರು ಈ ರೀತಿಯ ದುರ್ಬುದ್ದಿಯನ್ನು ತೋರಿಸುತ್ತಿರುವಂತಿದೆ ಎಂದು ಕಿಡಿ ಕಾರಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಆಧ್ಯಾತ್ಮ, ಜೀವನಶೈಲಿ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3Lw

 

 

Trending News