NEET Exam ದಿನವೇ ಪ್ರಧಾನಿ ರೋಡ್ ಶೋ, ವಿದ್ಯಾರ್ಥಿಗಳಿಗೆ ತೊಂದರೆ ಆಗದಂತೆ ವೇಳಾಪಟ್ಟಿ ಬದಲಿಸಿಕೊಳ್ಳಲು ಎಚ್‌ಡಿ‌ಕೆ ಆಗ್ರಹ

Karnataka Assembly Election: ಭಾನುವಾರ ನೀಟ್ ಪರೀಕ್ಷೆಯ ನಡುವೆಯೂ ಪ್ರಧಾನಿ ಮೋದಿ ರೋಡ್ ಶೋ ವಿಚಾರದ ಬಗ್ಗೆ ವಿದ್ಯಾರ್ಥಿಗಳ ಪೋಷಕರು ಹಾಗೂ ಸಾರ್ವಜನಿಕರಿಂದ ಬರುತ್ತಿರುವ ಟೀಕೆಗಳ ಬಗ್ಗೆ ನನಗೆ ಮಾಹಿತಿ ಇದೆ. ರೋಡ್ ಶೋ ಗಳಿಂದ ಮಕ್ಕಳ ಭವಿಷ್ಯಕ್ಕೆ ಧಕ್ಕೆ ಉಂಟಾಗಬಾರದು - ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ  

Written by - Yashaswini V | Last Updated : May 5, 2023, 01:20 PM IST
  • ನೀಟ್ ಪರೀಕ್ಷೆ ದಿನವೇ ಪ್ರಧಾನಿ ರೋಡ್ ಶೋ
  • ಸಾರ್ವಜನಿಕ ವಲಯದಲ್ಲಿ ಇದು ಸರಿನಾ, ತಪ್ಪಾ ಚರ್ಚೆ ನಡೆದರೂ ಅದನ್ನು ಬಿಜೆಪಿಯವರು ಗಂಭೀರವಾಗಿ ತೆಗೆದುಕೊಳ್ಳುವುದಿಲ್ಲ.
  • ದೇಶದ ಪ್ರಧಾನಿಯಾಗಿ ಮಕ್ಕಳ ಭವಿಷ್ಯದ ಜತೆಗೆ ಚೆಲ್ಲಾಟ ಆಡೋದು ಸರಿಯಲ್ಲ- ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ
NEET Exam ದಿನವೇ ಪ್ರಧಾನಿ ರೋಡ್ ಶೋ, ವಿದ್ಯಾರ್ಥಿಗಳಿಗೆ ತೊಂದರೆ ಆಗದಂತೆ ವೇಳಾಪಟ್ಟಿ ಬದಲಿಸಿಕೊಳ್ಳಲು ಎಚ್‌ಡಿ‌ಕೆ ಆಗ್ರಹ  title=

Karnataka Assembly Election 2023: ಇದೇ 7ರಂದು ಬೆಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಚುನಾವಣೆಗಾಗಿ ಹಮ್ಮಿಕೊಂಡಿರುವ ರೋಡ್ ಶೋದಿಂದ ನೀಟ್ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ತೊಂದರೆ ಉಂಟಾಗಲಿದೆ. ಈ ಕಾರಣಕ್ಕೆ ಪ್ರಧಾನಿಗಳು ರೋಡ್ ಶೋ ವೇಳಾಪಟ್ಟಿಯನ್ನು ಬದಲಿಸಿಕೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಒತ್ತಾಯಿಸಿದ್ದಾರೆ.

ಇಂದು ಬೆಳಗ್ಗೆ ಜೆಪಿ ನಗರದ ತಮ್ಮ ನಿವಾಸದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಭಾನುವಾರ ನೀಟ್ ಪರೀಕ್ಷೆಯ ನಡುವೆಯೂ ಪ್ರಧಾನಿ ಮೋದಿ ರೋಡ್ ಶೋ ವಿಚಾರದ ಬಗ್ಗೆ ವಿದ್ಯಾರ್ಥಿಗಳ ಪೋಷಕರು ಹಾಗೂ ಸಾರ್ವಜನಿಕರಿಂದ ಬರುತ್ತಿರುವ ಟೀಕೆಗಳ ಬಗ್ಗೆ ನನಗೆ ಮಾಹಿತಿ ಇದೆ. ರೋಡ್ ಶೋ ಗಳಿಂದ ಮಕ್ಕಳ ಭವಿಷ್ಯಕ್ಕೆ ಧಕ್ಕೆ ಉಂಟಾಗಬಾರದು ಎಂದರು.

ಇದನ್ನೂ ಓದಿ- ಶಿವಣ್ಣ ನಿಮ್ಮ ಈ ನಡೆಯನ್ನು ಸ್ವರ್ಗದಲ್ಲಿರುವ ಡಾಕ್ಟರ್ ರಾಜ್, ಅಪ್ಪು ಅವರ ಆತ್ಮಗಳು ಕ್ಷಮಿಸಲ್ಲ!

ಬಿಜೆಪಿ ಪಕ್ಷಕ್ಕೆ ನಾಡಿನ ಜನರ ಸಮಸ್ಯೆಗಳಿಗಿಂತ ಅವರಿಗೆ ಅಧಿಕಾರ ಹಿಡಿಯೋದೆ ಮುಖ್ಯವಾಗಿದೆ. ಅಧಿಕಾರಕ್ಕೋಸ್ಕರ ಅವರು ಏನು ಬೇಕಾದರೂ ಮಾಡ್ತಾರೆ. ಜನಸಾಮಾನ್ಯರ ಬದುಕಿನ ಬಗ್ಗೆ ಅವರಿಗೆ ಯಾವುದೇ ಕಾಳಜಿ ಇಲ್ಲ. ಏನಾದರೂ ಮಾಡಿ ಅಧಿಕಾರ ಹಿಡಿಯಬೇಕು ಎಂಬ ಅಜೆಂಡಾ ಇಟ್ಟುಕೊಂಡಿದ್ದಾರೆ ಎಂದು ಕುಮಾರಸ್ವಾಮಿ ಅವರು ಕಟುವಾಗಿ ಟೀಕಿಸಿದರು.

ಇದನ್ನೂ ಓದಿ- ಚುನಾವಣಾ ಅಕ್ರಮ ತಡೆಗೆ ಬೆಂಗಳೂರು ನಗರ ಜಿಲ್ಲಾಡಳಿತ ಸಿದ್ಧತೆ!

ಸಾರ್ವಜನಿಕ ವಲಯದಲ್ಲಿ ಇದು ಸರಿನಾ, ತಪ್ಪಾ  ಚರ್ಚೆ ನಡೆದರೂ ಅದನ್ನು ಬಿಜೆಪಿಯವರು ಗಂಭೀರವಾಗಿ ತೆಗೆದುಕೊಳ್ಳುವುದಿಲ್ಲ. ದೇಶದ ಪ್ರಧಾನಿಯಾಗಿ ಮಕ್ಕಳ ಭವಿಷ್ಯದ ಜತೆಗೆ ಚೆಲ್ಲಾಟ ಆಡೋದು ಸರಿಯಲ್ಲ. ನೀಟ್ ಪರೀಕ್ಷೆಗೆ ತೊಂದರೆ ಕೊಡಬಾರದು. ಮಕ್ಕಳ ಭವಿಷ್ಯದ ಬಗ್ಗೆ ಅವರಿಗೆ ಏನಾದರೂ ಕಿಂಚಿತ್ ಕಾಳಜಿ ಇದ್ದರೆ ರೋಡ್ ಶೋ ಮುಂದಕ್ಕೆ ಹಾಕುವುದು ಒಳ್ಳೆಯದು ಎಂದು ಜೆಡಿಎಸ್ ನಾಯಕ, ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಆಗ್ರಹಿಸಿದ್ದಾರೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News