ಹುಬ್ಬಳ್ಳಿ: ರಾಹುಲ್ ಗಾಂಧಿ ರಾಜ್ಯಕ್ಕೆ ಭೇಟಿ ನೀಡಿರುವುದು ಯಾವುದೇ ಪರಿಣಾಮ ಬೀರಿಲ್ಲವೆಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿರುವ ಅವರು, ‘ರಾಹುಲ್ ಗಾಂಧಿ ‘ಭಾರತ್ ಜೋಡೋ ಯಾತ್ರೆ’ ಮಾಡಿದ್ದು, ಯಾವುದೇ ಪರಿಣಾಮ ಉಂಟಾಗಿಲ್ಲ. ಕಾಂಗ್ರೆಸ್‍ನ ಬೋಗಸ್ ಘೋಷಣೆಗಳಿಂದ  ಯಾವುದೇ ಪರಿಣಾಮವಾಗುವುದಿಲ್ಲ’ವೆಂದು ಹೇಳಿದರು.


COMMERCIAL BREAK
SCROLL TO CONTINUE READING

ರಾಹುಲ್ ಗಾಂಧಿ ಕಳೆದ ಬಾರಿ ಬಂದದ್ದಕ್ಕೂ  ಈ ಬಾರಿ ಬಂದಿರುವುದಕ್ಕೂ ಬಹಳ ವ್ಯತ್ಯಾಸವಿದೆ. ಲಂಡನ್ ವಿಶ್ವವಿದ್ಯಾಲಯದಲ್ಲಿ ಅವರು ಮಾತನಾಡಿರುವುದು ದೇಶ ವಿರೋಧಿಯಾಗಿದೆ. ಇಡೀ ದೇಶದಲ್ಲಿ ಹಾಗೂ ರಾಜ್ಯದಲ್ಲಿ ಈ ಬಗ್ಗೆ ಖಂಡನೆಯಾಗಿದೆ. ಅವರ ಮಾತಿಗೆ ಯಾವುದೇ ಬೆಲೆ ನೀಡುವುದಿಲ್ಲವೆಂಬ ವಿಶ್ವಾಸವಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.


ಮಾರ್ಚ್ 25ರಂದು ರಾಜ್ಯಕ್ಕೆ ಪ್ರಧಾನಿ ಮೋದಿ 


ಮಾರ್ಚ್ 25ರಂದು ಪ್ರಧಾನಿ ಮೋದಿಯವರು ಹಾಗೂ ಮಾರ್ಚ್ 24, 26ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯಕ್ಕೆ  ಭೇಟಿ ನೀಡಲಿದ್ದಾರೆ ಎಂದು ಸಿಎಂ ತಿಳಿಸಿದರು.


ಇದನ್ನೂ ಓದಿ: Randeep Surjewala : 'ನಾಳೆ ಕರ್ನಾಟಕದಲ್ಲಿ ಹೊಸ ಇತಿಹಾಸ ಸೃಷ್ಟಿಯಾಗಲಿದೆ'


ಬೋಗಸ್ ಟ್ರ್ಯಾಕ್ ರೆಕಾರ್ಡ್


ಸಿದ್ದರಾಮಯ್ಯನವರು ಬೋಗಸ್ ಕಾರ್ಡ್ ಬಗ್ಗೆ ಮಾತನಾಡುತ್ತಿದ್ದಾರೆ. ಬೇರೆ ಬೇರೆ ರಾಜ್ಯಗಳಲ್ಲಿ ಈ  ರೀತಿ ಆಶ್ವಾಸನೆಗಳನ್ನು ನೀಡಿದ್ದು, ಇಂದಿಗೂ ಈಡೇರಿಸಿಲ್ಲ. ಇದು ಅವರ  ಟ್ರ್ಯಾಕ್ ರೆಕಾರ್ಡ್. ರಾಜಸ್ಥಾನ, ಛತ್ತೀಸ್‌ಘಡ್‍ದಲ್ಲಿ ಘೋಷಣೆ ಮಾಡಿದ್ದನ್ನು ಅವರು ಈಡೇರಿಸಿಲ್ಲ. ಛತ್ತೀಸ್‌ಘಡ್‍ದಲ್ಲಿ ಪ್ರತಿ ಮನೆಗೆ 1 ಸಾವಿರ ರೂ. ನೀಡುವುದಾಗಿ ಹೇಳಿದ್ದರು. 4 ವರ್ಷ ನೀಡಿ, ಕೊನೆ ವರ್ಷ ಕೊಡಲು ಓಡಾಡಿದರು. ಈ ರೀತಿ ಜನರನ್ನು ಯಾಮಾರಿಸುತ್ತಾರೆ. ಅದು ಗ್ಯಾರಂಟಿ ಕಾರ್ಡ್ ಅಲ್ಲ, ಬರೀ ವಿಸಿಟಿಂಗ್ ಕಾರ್ಡ್ ಎಂದು ವ್ಯಂಗ್ಯವಾಡಿದರು.


ಇದ್ದಲು ಮಸಿಗೆ ಬುದ್ಧಿ ಹೇಳಿದಂತೆ!


ವಿಪಕ್ಷ ನಾಯಕ ಸಿದ್ದರಾಮಯ್ಯನವರ ಮೇಲೆ ಲೋಕಾಯುಕ್ತದಲ್ಲಿ ದೂರು ದಾಖಲಾಗಿದೆ ಹಾಗೂ ರೀಡೂ ಸೇರಿದಂತೆ ಹಲವಾರು ಪ್ರಕರಣಗಳಲ್ಲಿ ಭ್ರಷ್ಟಾಚಾರದ ಆರೋಪವಿದೆ. ಅವರು ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಾರೆಂದರೆ ಇದ್ದಲು ಮಸಿಗೆ ಬುದ್ಧಿ ಹೇಳಿದಂತೆ. ಕಾಂಗ್ರೆಸ್ ಅಧಃಪತನಕ್ಕೆ ಸಿದ್ಧವಾಗಿದೆ. ಭಾರತ ದೇಶದಲ್ಲಿ ಎಲ್ಲಾ ಕಡೆ ಈಗಾಗಲೇ ಪತನವಾಗಿದೆ ಎಂದು ಟೀಕಿಸಿದರು.


ನ್ಯಾಯಾಂಗ ತನಿಖೆ


ಸಿದ್ದರಾಮಯ್ಯನವರ ಸರ್ಕಾರದ 59 ಭ್ರಷ್ಟಾಚಾರ ಪ್ರಕರಣಗಳ ಬಗ್ಗೆ ನ್ಯಾಯಾಂಗ ತನಿಖೆಯನ್ನು ನಡೆಸಲು ಕಾನೂನು ತಜ್ಞರೊಂದಿಗೆ ಚರ್ಚಿಸಲಾಗಿತ್ತಿದೆ. ಕೆಲವೇ ದಿನಗಳಲ್ಲಿ ಈ ಬಗ್ಗೆ ತೀರ್ಮಾನವಾಗುತ್ತದೆ. 59 ಪ್ರಕರಣಗಳಲ್ಲಿ ಕೆಲವನ್ನು ವಹಿಸಲಾಗಿದೆ. ಬಾಕಿ ಇರುವುದನ್ನು ವಹಿಸಲಾಗುವುದು ಎಂದು ಹೇಳಿದರು.


ಇದನ್ನೂ ಓದಿ: 78 ಯೋಜನೆಗಳ 5298.69 ಕೋಟಿ ರೂ. ಬಂಡವಾಳ ಹೂಡಿಕೆ ಪ್ರಸ್ತಾವನೆಗಳಿಗೆ ಏಕಗವಾಕ್ಷಿ ಸಮಿತಿ ಅನುಮೋದನೆ


ಉರಿಗೌಡ-ನಂಜೇಗೌಡ ಪ್ರಕರಣದಲ್ಲಿ ಹಿನ್ನಡೆ ಪ್ರಶ್ನೆಯೇ ಇಲ್ಲ


ಉರಿಗೌಡ-ನಂಜೇಗೌಡ ಕುರಿತ ಚರ್ಚೆಗೆ ಸಂಬಂಧಿಸಿದಂತೆ ಉತ್ತರಿಸಿದ ಸಿಎಂ ಬೊಮ್ಮಾಯಿ, ‘ಸಂಶೋಧನೆಯಾಗಿ ಸತ್ಯ ಹೊರಗೆ ಬಂದಾಗ ಜಯ ದೊರೆಯಲಿದೆ. ಉರಿಗೌಡ-ನಂಜೇಗೌಡ ಪ್ರಕರಣದಲ್ಲಿ ಹಿನ್ನಡೆಯಾಗಿರುವ ಪ್ರಶ್ನೆಯೇ ಇಲ್ಲ. ಹಲವಾರು ಐತಿಹಾಸಿಕ ಸತ್ಯಗಳನ್ನು ಮರೆಮಾಚಲಾಗಿದೆ. ಇತಿಹಾಸವನ್ನು ಭಾರತ ಹಾಗೂ ಕರ್ನಾಟಕದಲ್ಲಿ ತಿರುಚಿರುವ ಕೆಲಸವಾಗಿದೆ. ಆ ಸಂದರ್ಭದಲ್ಲಿ ಯಾರು ಪ್ರಮುಖ ಪಾತ್ರ ವಹಿಸಿದ್ದರು ಎನ್ನುವುದು ಜಗಜ್ಜಾಹೀರಾಗಿದೆ. ಸತ್ಯ ಹೇಳಿದರೆ ಇವರಿಗೆ ತಡೆಯಲು ಆಗುವುದಿಲ್ಲವೆಂದು ಕಿಡಿಕಾರಿದರು.


ಗುರ್ಮಿಟ್ಕಲ್ ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲಲಿದೆ


ಬಾಬುರಾವ್ ಚಿಂಚನಸೂರ ಕಾಂಗ್ರೆಸ್ ನಲ್ಲಿದ್ದವರು, ವಾಪಸ್ ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದಾರೆ. ಆ ಕ್ಷೇತ್ರದಲ್ಲಿ ನಮ್ಮ ಸಂಘಟನೆ ಉತ್ತಮವಾಗಿದೆ. ಗುರ್ಮಿಟ್ಕಲ್ ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲಲಿದೆ ಎಂದು ಸಿಎಂ ವಿಶ್ವಾಸ ವ್ಯಕ್ತಪಡಿಸಿದರು. ಸಾರಿಗೆ ನೌಕರರ ಸಂಘದವರು ಪ್ರತಿಭಟನೆ ಹಿಂಪಡೆದಿದ್ದಾರೆ ಎಂದು ಇದೇ ವೇಳೆ ಅವರು ತಿಳಿಸಿದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.