Ramnagara Vidhansabha Chunavane Result 2023: ರಾಮನಗರದ ಒಟ್ಟು ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿ ಮೂರು ಕ್ಷೇತ್ರಗಳು ಕಾಂಗ್ರೆಸ್ ತೆಕ್ಕೆಗೆ ಬಿದ್ದಿವೆ. ರಾಮನಗರ ಜಿಲ್ಲೆಯಲ್ಲಿ ಒಟ್ಟು ನಾಲ್ಕು ವಿಧಾನಸಭಾ ಕ್ಷೇತ್ರಗಳಿವೆ. ಅವುಗಳೆಂದರೆ ಮಾಗಡಿ, ರಾಮನಗರ, ಕನಕಪುರ, ಚನ್ನಪಟ್ಟಣ. ಈ ಕ್ಷೇತ್ರಗಳಲ್ಲಿ ಬಿಜೆಪಿ ಅಷ್ಟು ಪ್ರಬಲವಾಗಿಲ್ಲ. ಈ ಜಿಲ್ಲೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ಜಿದ್ದಾಜಿದ್ದಿನ ಸ್ಪರ್ಧೆ ಏರ್ಪಟ್ಟಿತ್ತು. ರಾಮನಗರವನ್ನು ಸಾಮಾನ್ಯವಾಗಿ ಜೆಡಿಎಸ್ ಭದ್ರಕೋಟೆ ಎಂತಲೇ ಬಿಂಬಿಸಲಾಗುತ್ತದೆ. ಇದೀಗ ನಾಲ್ಕರಲ್ಲಿ ಮೂರು ಕ್ಷೇತ್ರಗಳನ್ನು ವಶಪಡಿಸಿಕೊಂಡಿರುವ ಕಾಂಗ್ರೆಸ್ ಜೆಡಿಎಸ್ ಭದ್ರಕೋಟೆಯನ್ನು ಛಿದ್ರಗೊಳಿಸಿದೆ.
ರಾಮನಗರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎಚ್.ಎ. ಇಕ್ಬಾಲ್ ಹುಸೇನ್, ಎಚ್.ಡಿ. ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಅವರ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದಾರೆ. ಇದರಿಂದಾಗಿ ಎಚ್‌ಡಿಕೆ ಪುತ್ರ ನಿಖಿಲ್ ಕುಮಾರಸ್ವಾಮಿ ಭಾರೀ ಮುಖಭಂಗ ಅನುಭವಿಸಿದ್ದಾರೆ.
ಇದಲ್ಲದೆ, ಮಾಗಡಿ ವಿಧಾನಸಭಾ ಕ್ಷೇತ್ರದಲ್ಲೂ ಎಚ್.ಸಿ. ಬಾಲಕೃಷ್ಣ ಗೆಲುವು ಸಾಧಿಸಿದ್ದು, ಕನಕಪುರ ಕ್ಷೇತ್ರದಲ್ಲಿ ಡಿ.ಕೆ. ಶಿವಕುಮಾರ್ ಮತ್ತೆ ಗೆಲುವಿನ ನಗೆ ಬೀರಿದ್ದಾರೆ. ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಡಿಕೆಶಿ ಗೆಲುವು ಸಾಧಿಸಿದ್ದಾರೆ.
ರಾಮನಗರ ಜಿಲ್ಲೆಯಲ್ಲಿ ಬರುವ ಮಾಗಡಿ ವಿಧಾನಸಭಾ ಕ್ಷೇತ್ರವು ಕುಟುಂಬ ರಾಜಕಾರಣಕ್ಕೆ ನೆಲೆ ಒದಗಿಸಿದ ಕ್ಷೇತ್ರ ಎಂತಲೂ ಹೇಳಬಹುದು. ಇದೇ ಜಿಲ್ಲೆಯಲ್ಲಿ ಬರುವ ರಾಮನಗರ ವಿಧಾನಸಭಾ ಕ್ಷೇತ್ರ 1994ರಿಂದಲೂ ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಮಂತ್ರಿಗಳಾದ ಎಚ್. ಡಿ. ದೇವೇಗೌಡರ ಕುಟುಂಬದ ಭದ್ರಕೋಟೆ ಆಗಿದ್ದು ಇದನ್ನು ಬೇದಿಸುವವರೇ ಇಲ್ಲ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ರಾಮನಗರದ ಎರಡು ವಿಧಾನಸಭಾ ಕ್ಷೇತ್ರಗಳಲ್ಲೂ (ರಾಮನಗರ ಹಾಗೂ ಚನ್ನಪಟ್ಟಣ) ಸ್ಪರ್ಧಿಸಿದ್ದ ದೇವೇಗೌಡರ ಪುತ್ರ ಎಚ್. ಡಿ. ಕುಮಾರಸ್ವಾಮಿ ಎರಡೂ ಕ್ಷೇತ್ರಗಳಲ್ಲಿ ವಿಜಯಶಾಲಿ ಆಗಿದ್ದರೂ. ಬಳಿಕ ರಾಮನಗರ ಕ್ಷೇತ್ರದಲ್ಲಿ ರಾಜೀನಾಮೆ ನೀಡಿ ಇದೇ ಕ್ಷೇತ್ರದಲ್ಲಿ ತಮ್ಮ ಪತ್ನಿ ಅನಿತಾ ಕುಮಾರಸ್ವಾಮಿ ಅವರನ್ನು ನಿಲ್ಲಿಸಿ ಮತ್ತೆ ಗೆದ್ದಿದ್ದರು.
ರಾಮನಗರ ಜಿಲ್ಲೆಯ ಕನಕಪುರ ವಿಧಾನಸಭಾ ಕ್ಷೇತ್ರದಲ್ಲಿ ಪ್ರಸ್ತುತ ಕೆಪಿಸಿಸಿ ಅಧ್ಯಕ್ಷರಾಗಿರುವ ಡಿ.ಕೆ. ಶಿವಕುಮಾರ್ ಹಿಡಿತ ಹೊಂದಿದ್ದಾರೆ. ಈ ಕ್ಷೇತ್ರದಲ್ಲಿ ಹೇಗಾದರೂ ಡಿಕೆ ಬ್ರದರ್ಸ್ ಅನ್ನು ಮಣಿಸಲೇಬೇಕು ಎಂದು ಪಣತೊಟ್ಟಿರುವ ಬಿಜೆಪಿ ಈ ಕ್ಷೇತ್ರದಿಂದ ಈ ಬಾರಿ ಆರ್. ಅಶೋಕ್ ಅವರನ್ನು ಕಣಕ್ಕಿಳಿಸಿದೆ. ಇನ್ನು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ-ಜೆಡಿಎಸ್ ನಡುವೆ ಪ್ರಬಲ ಸ್ಪರ್ಧೆ ಇದೆ.
ಮಾಗಡಿ ವಿಧಾನಸಭಾ ಕ್ಷೇತ್ರ (Magadi Assembly Constituency):
2018 ರ ವಿಧಾನಸಭಾ ಚುನಾವಣೆಯಲ್ಲಿ ಜನತಾ ದಳದ ಎ. ಮಂಜುನಾಥ ಗೆಲುವು ಸಾಧಿಸಿದ್ದರು. ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಎಚ್ ಸಿ ಬಾಲಕೃಷ್ಣ 51425 ಮತಗಳ ಅಂತರದಿಂದ ಸೋಲನ್ನು ಅನುಭವಿಸಿದ್ದರು.
ಮಾಗಡಿ ವಿಧಾನಸಭಾ ಕ್ಷೇತ್ರದ 2023ರ ಚುನಾವಣಾ ಫಲಿತಾಂಶ (Magadi Assembly Constituency Election Result 2023):
2023ರ ವಿಧಾನಸಭಾ ಚುನಾವಣೆಯಲ್ಲಿ ಮಾಗಡಿ ಕ್ಷೇತ್ರದ ಸ್ಪರ್ಧಾಳುಗಳು :
* ಪ್ರಸಾದ್ ಗೌಡ (ಬಿಜೆಪಿ) - ಸೋಲು
* ಎಚ್.ಸಿ.ಬಾಲಕೃಷ್ಣ (ಕಾಂಗ್ರೆಸ್) - ಗೆಲುವು
* ಎ.ಮಂಜುನಾಥ್ (ಜೆಡಿಎಸ್) - ಸೋಲು
* ರವಿಕಿರಣ್ ಎಂ.ಎನ್ (ಎಎಪಿ) - ಸೋಲು
______________________________________________
ರಾಮನಗರ ವಿಧಾನಸಭಾ ಕ್ಷೇತ್ರ (Ramnagara Assembly Constituency):
2018 ರ ವಿಧಾನಸಭಾ ಚುನಾವಣೆಯಲ್ಲಿ ಜನತಾ ದಳದ ಅನಿತಾ ಕುಮಾರಸ್ವಾಮಿ ಗೆಲುವು ಸಾಧಿಸಿದ್ದರು. ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಎಚ್ ಎ ಇಕ್ಬಾಲ್ ಹುಸೇನ್ 22636 ಮತಗಳ ಅಂತರದಿಂದ ಸೋಲನ್ನು ಅನುಭವಿಸಿದ್ದರು.
ರಾಮನಗರ ವಿಧಾನಸಭಾ ಕ್ಷೇತ್ರದ 2023ರ ಚುನಾವಣಾ ಫಲಿತಾಂಶ (Ramnagara Assembly Constituency Election Result 2023):
ರಾಮನಗರ ಕ್ಷೇತ್ರದ ಸ್ಪರ್ಧಾಳುಗಳು :
>> ಗೌತಮ್ ಗೌಡ (ಬಿಜೆಪಿ)- ಸೋಲು
>> ಇಕ್ಬಾಲ್ ಹುಸೇನ್ ಎಚ್.ಎ. (ಕಾಂಗ್ರೆಸ್) - ಗೆಲುವು
>> ನಿಖಿಲ್ ಕುಮಾರಸ್ವಾಮಿ (ಜೆಡಿಎಸ್) - ಸೋಲು
>> ನಂಜಪ್ಪ ಕಾಳೇಗೌಡ (ಎಎಪಿ) - ಸೋಲು
_____________________________________________
ಕನಕಪುರ ವಿಧಾನಸಭಾ ಕ್ಷೇತ್ರ (Kanakapura Assembly Constituency):
2018 ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಪಕ್ಷದ ಡಿ.ಕೆ. ಶಿವಕುಮಾರ್ ಗೆಲುವು ಸಾಧಿಸಿದ್ದರು. ಜನತಾ ದಳದ ನಾರಾಯಣ ಗೌಡ 79909 ಮತಗಳ ಅಂತರದಿಂದ ಸೋಲನ್ನು ಅನುಭವಿಸಿದ್ದರು.
ಕನಕಪುರ ವಿಧಾನಸಭಾ ಕ್ಷೇತ್ರದ 2023ರ ಚುನಾವಣಾ ಫಲಿತಾಂಶ (Kanakapura Assembly Constituency Election Result 2023):
ಕನಕಪುರ ಕ್ಷೇತ್ರದ ಸ್ಪರ್ಧಾಳುಗಳು :
* ಆರ್.ಅಶೋಕ್ (ಬಿಜೆಪಿ) - ಸೋಲು
* ಡಿ.ಕೆ.ಶಿವಕುಮಾರ್ (ಕಾಂಗ್ರೆಸ್) - ಗೆಲುವು
* ನಾಗರಾಜ (ಜೆಡಿಎಸ್) - ಸೋಲು
* ಪುಟ್ಟರಾಜು ಗೌಡ (ಎಎಪಿ) - ಸೋಲು
_______________________________________________
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ (Chennapatna Assembly Constituency):
2018 ರ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಎಚ್ ಡಿ ಕುಮಾರಸ್ವಾಮಿ ಗೆಲುವು ಸಾಧಿಸಿದ್ದರು. ಭಾರತೀಯ ಜನತಾ ಪಾರ್ಟಿಯ ಸಿ.ಪಿ. ಯೋಗೇಶ್ವರ್ 21530 ಮತಗಳ ಅಂತರದಿಂದ ಸೋಲುಂಡಿದ್ದರು.
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ 2023ರ ಚುನಾವಣಾ ಫಲಿತಾಂಶ (Chennapatna Assembly Constituency Election Result 2023):
ಚನ್ನಪಟ್ಟಣ ಕ್ಷೇತ್ರದ ಸ್ಪರ್ಧಾಳುಗಳು :
>> ಸಿ.ಪಿ.ಯೋಗೇಶ್ವರ್ (ಬಿಜೆಪಿ)
>> ಗಂಗಾಧರ್.ಎಸ್ (ಕಾಂಗ್ರೆಸ್)
>> ಹೆಚ್.ಡಿ. ಕುಮಾರಸ್ವಾಮಿ (ಜೆಡಿಎಸ್)
>> ಶರತ್ ಚಂದ್ರ (ಎಎಪಿ)
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.