ಹಗರಣ ಇಲ್ಲದೆ ಶಿಕ್ಷಕರ ನೇಮಕ; ಸಿಎಂ ಬಸವರಾಜ ಬೊಮ್ಮಾಯಿ
ರಾಜ್ಯದಲ್ಲಿ ಶಿಕ್ಷಣ ಇಲಾಖೆಯಲ್ಲಿ 8000 ಶಾಲಾ ಕೊಠಡಿ ನಿರ್ಮಾಣ, 17,000 ಶಿಕ್ಷಕರ ನೇಮಕ ಯಾವುದೇ ಹಗರಣವಿಲ್ಲದೆ ನೇಮಕ ಮಾಡಲಾಗಿದೆ. ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ಅರ್ಜಿ ಹಾಕದವರಿಗೂ ಶಿಕ್ಷಕರ ನೇಮಕ ಮಾಡಿ ಭ್ರಷ್ಟಾಚಾರ ಮಾಡಿದ್ದರು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.
ತಿಪಟೂರು (ಕೆಬಿ ಕ್ರಾಸ್): ರಾಜ್ಯದಲ್ಲಿ ಶಿಕ್ಷಣ ಇಲಾಖೆಯಲ್ಲಿ 8000 ಶಾಲಾ ಕೊಠಡಿ ನಿರ್ಮಾಣ, 17,000 ಶಿಕ್ಷಕರ ನೇಮಕ ಯಾವುದೇ ಹಗರಣವಿಲ್ಲದೆ ನೇಮಕ ಮಾಡಲಾಗಿದೆ. ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ಅರ್ಜಿ ಹಾಕದವರಿಗೂ ಶಿಕ್ಷಕರ ನೇಮಕ ಮಾಡಿ ಭ್ರಷ್ಟಾಚಾರ ಮಾಡಿದ್ದರು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.
ತುಮಕೂರು ಜಿಲ್ಲೆಯ ತಿಪಟೂರು ಬಿಜೆಪಿ ಅಭ್ಯರ್ಥಿ ಬಿಸಿ ನಾಗೇಶ್ ಪರ ಕೆಬಿ ಕ್ರಾಸ್ ಬಳಿ ರೋಡ್ ಶೋ ನಡೆಸಿ ಮಾತನಾಡಿದ ಅವರು, ‘ಕಾಂಗ್ರೆಸ್ ಅವಧಿಯಲ್ಲಿ Sc/St ವಿದ್ಯಾರ್ಥಿಗಳ ಹಾಸಿಗೆ ದಿಂಬಿನಲ್ಲಿಯೂ ಲಂಚಾವತಾರ ಮಾಡಿದರು. ಪೊಲಿಸ್ ನೇಮಕಾತಿಯಲ್ಲಿಯೂ ಹಗರಣ ಮಾಡಿದರು ಎಂದು ಕಿಡಿಕಾರಿದ್ದಾರೆ. ತುಮಕೂರು ಜಿಲ್ಲೆ ತಿಪಟೂರು ಕಲ್ಪವೃಕ್ಷದ ನಾಡು. ಇಲ್ಲಿನ ಜನರು ಒಳ್ಳೆಯದನ್ನು ಬೆಂಬಲಿಸುತ್ತಿರಿ. ಬಿ.ಸಿ.ನಾಗೇಶ್ ತಿಪಟೂರು ರಾಜ್ಯ ಮಟ್ಟದಲ್ಲಿ ಗುರುತಿಸುವಂತೆ ಮಾಡಿದ್ದಾರೆ. ಈ ಭಾಗದಲ್ಲಿ ಹೊನ್ನಳ್ಳಿ ಏತ ನೀರಾವರಿ ಯೋಜನೆ ಜಾರಿಗೆ ತಂದು ಕಟ್ಟ ಕಡೆಯ ಕೆರೆ ತುಂಬಿಸುವ ಕೆಲಸ ಮಾಡಿದ್ದಾರೆ ಎಂದು ಹೇಳಿದರು.
ಬಿ.ಎಸ್.ಯಡಿಯೂರಪ್ಪ ಸಿಎಂ ಆದಾಗ ಭಾಗ್ಯಲಕ್ಷ್ಮಿ ಯೊಜನೆ ಜಾರಿಗೆ ತಂದಿದ್ದಾರೆ. ಇದರಿಂದ ಶೇ.30ರಷ್ಟು ಅಲ್ಪ ಸಂಖ್ಯಾತ ಮಹಿಳೆಯರಿಗೆ ಅನುಕೂಲವಾಗಿದೆ. ಕೇಂದ್ರದ ಕಿಸಾನ್ ಸಮ್ಮಾನ್ ಯೋಜನೆಗೆ ಯಡಿಯೂರಪ್ಪ ಅವರು 4000 ರೂ. ಸೇರಿಸಿ ಕೊಡುವ ಕೆಲಸ ಮಾಡಿದ್ದಾರೆ. ರೈತ ವಿದ್ಯಾನಿಧಿ, ಎಸ್ಸಿ/ಎಸ್ಟಿ ಸಮುದಾಯಕ್ಕೆ 75 ಯುನಿಟ್ ಉಚಿತ ವಿದ್ಯುತ್, ಹೆಣ್ಣು ಮಕ್ಕಳಿಗೆ ಉಚಿತ ಶಿಕ್ಷಣ ನೀಡುವ ಯೋಜನೆಯನ್ನು ನಾವು ಜಾರಿಗೆ ತಂದಿದ್ದೇವೆ ಎಂದು ಹೇಳಿದರು. ಬಿ.ಸಿ.ನಾಗೇಶ್ ಅವರನ್ನು 25 ಸಾವಿರಕ್ಕೂ ಹೆಚ್ಚು ಮತಗಳಿಂದ ಗೆಲ್ಲಿಸಿಕೊಂಡು ಬರಬೇಕು. ಹೇಮಾವತಿ ನಿರು ತರುವ ಕೆಲಸ ಮಾಡಿದ್ದಾರೆ. ಅವರು ಸಾಕಷ್ಟು ಅನುದಾನ ತಂದಿದ್ದಾರೆ. ಅವರನ್ನು ಗೆಲ್ಲಿಸಿ ರಾಜ್ಯದಲ್ಲಿ ಮತ್ತೆ ಕಮಲ ಅರಳಿಸಿ ಎಂದು ಇದೇ ವೇಳೆ ಮನವಿ ಮಾಡಿದರು.
ಮನೆಮನೆಗೆ ನಲ್ಲಿ ನೀರು
ತಿಪಟೂರಿನಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ‘ತುಮಕೂರು ಭಾಗದಲ್ಲಿ ಗೊಳುರು, ಹೊನ್ನಳ್ಳಿ ಏತ ನೀರಾವರಿ ಮಾಡಿದ್ದರಿಂದ ಪ್ರತಿ ಗ್ರಾಮದಲ್ಲಿ ಜಲ ಜೀವನ ಮಿಷನ್ ಯೋಜನೆಡಿ ಮನೆ ಮನೆಗಳಿಗೆ ನೀರು ಕೊಡಲಾಗುತ್ತಿದೆ. 70 ವರ್ಷದಲ್ಲಿ ರಾಜ್ಯದಲ್ಲಿ 25 ಲಕ್ಷ ಮನೆಗಳಿಗೆ ನಲ್ಲಿ ನೀರು ಕೊಡಲಾಗಿತ್ತು. ನಾವು ಬಂದು 40 ಲಕ್ಷ ಮನೆಗಳಿಗೆ ನಲ್ಲಿ ನೀರು ಕೊಡುವ ಕೆಲಸ ಮಾಡಿದ್ದೇವೆ. ಕಾಂಗ್ರೆಸ್ ಇದ್ದಿದ್ದರೆ ಈ ಕೆಲಸ ಆಗುತ್ತಿತ್ತಾ ? ಈ ಭಾಗದ ರಸ್ತೆಗಳು ಅಭಿವೃದ್ಧಿ ಆಗುತ್ತಿತ್ತಾ ಎಂದು ಪ್ರಶ್ನಿಸಿದರು. ದುಡಿಯುವ ಸಮುದಾಯಗಳಿಗೆ ಕಾಯಕ ಯೊಜನೆ, ರೈತರು, ಮೀನುಗಾರರ ಮಕ್ಕಳಿಗೆ ವಿದ್ಯಾನಿಧಿ ಯೋಜನೆ ಜಾರಿಗೊಳಿಸಿದ್ದೇವೆ ಎಂದು ಹೇಳಿದರು.
ಕಾಂಗ್ರೆಸ್ ಗ್ಯಾರೆಂಟಿ ಬರೆ ಗಳಗಂಟಿ!
ಕಾಂಗ್ರೆಸ್‍ನವರು 10 ಕೆಜಿ ಅಕ್ಕಿ ಕೊಡುತ್ತೇನೆ ಎನ್ನುತ್ತಾರೆ. ಹೆಣ್ಣು ಮಕ್ಕಳಿಗೆ 2000 ರೂ. ಕೊಡುವುದಾಗಿ ಹೇಳುತ್ತಾರೆ. 200 ಯುನಿಟ್ ಉಚಿತ ವಿದ್ಯುತ್ ನೀಡುತ್ತೇನೆ ಎಂದು ಗ್ಯಾರೆಂಟಿ ಕೊಡುತ್ತಿದ್ದಾರೆ. ಅದರ ಮೇಲೆ ನಂಬಿಕೆ ಇದಿಯಾ? ಕಾಂಗ್ರೆಸ್‍ನವರ ಗ್ಯಾರೆಂಟಿ ಬರೆ ಗಳಗಂಟಿ ಎಂದು ಟೀಕಿಸಿದರು.
ಇದನ್ನೂ ಓದಿ: ಆರ್‌ಎಸ್‌ಎಸ್ ‘ವಿಘ್ನಸಂತೋಷಿ’ಗಳು ಲಿಂಗಾಯತ ನಾಯಕರನ್ನು ಮುಗಿಸುವ ಸಂಚು ರೂಪಿಸಿವೆ..!
ಸಿದ್ದರಾಮಯ್ಯ ಮುಖ್ಯಮಂತ್ರಿ ಆದವರು, ಒಂದು ಸಮುದಾಯ ಭ್ರಷ್ಟಾಚಾರದಲ್ಲಿ ತೊಡಗಿದೆ ಅಂತಾ ನೇರವಾಗಿ ಆರೋಪ ಮಾಡಿದ್ದಾರೆ. ಎಷ್ಟೇ ಸಣ್ಣ ಸಮುದಾಯಗಳಿಗೂ ಗೌರವ ಕೊಡಬೇಕು. ಸಿದ್ದರಾಮಯ್ಯ ಸಾರ್ವಜನಿಕ ಜೀವನದಲ್ಲಿ ಇರಬೇಕಾ? ಮೊದಲು ಲಿಂಗಾಯತ ಸಮುದಾಯದವರೆಲ್ಲ ಅಂತಾ ಹೇಳಿದರು. ಮತ್ತೆ ಸಮಜಾಯಿಸಿ ನೀಡಿ ನನ್ನ ಮೇಲೆ ಆರೋಪ ಮಾಡಿದರು. ಸಿದ್ದರಾಮಯ್ಯನವರ ಅವಧಿಯಲ್ಲಿ ಬಿಡಿಎನಲ್ಲಿ 8000 ಕೋಟಿ ರೂ. ಹಗರಣ ನಡೆದಿದೆ ಎಂದು ಹೇಳಿದರು.
ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರ ಮೇಲೆ ಆರೊಪ ಮಾಡಿದರು. ನಾಗೇಶ್ ಮೇಲೆ ಮಾಡಿರುವ ಆರೋಪ ದೇವರ ಮೇಲೆ ಆರೋಪ ಮಾಡಿದಂತೆ. ಅವರ ಕಾಲದಲ್ಲಿ ನಡೆದ ಶಿಕ್ಷಕರ ಹಗರಣ ತನಿಖೆ ನಡೆಸಿದಾಗ 72 ಜನರನ್ನು ತೆಗೆದು ಹಾಕಲಾಯಿತು ಎಂದು ಹೇಳಿದರು. ಈ ಸಂದರ್ಭದಲ್ಲಿ ಸಚಿವ ಬಿ.ಸಿ.ನಾಗೇಶ್ ಹಾಜರಿದ್ದರು.
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.