ಮೇ 13 ರಂದು ಮತ ಎಣಿಕೆ ಹಿನ್ನೆಲೆ ಬೆಂಗಳೂರಿನಾದ್ಯಂತ 144 ಸೆಕ್ಷನ್ ಜಾರಿ..!
Section 144 imposed in Bangalore : ಮೇ 13ರಂದು ಮತ ಎಣಿಕೆ ಕಾರ್ಯ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಮುಂಜಾಗೃತ ಕ್ರಮವಾಗಿ ಬೆಂಗಳೂರು ನಗರದಾದ್ಯಂತ 144 ಸೆಕ್ಷನ್ ಜಾರಿ ಮಾಡಿ ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಆದೇಶ ಹೊರಡಿಸಿದ್ದಾರೆ.
ಬೆಂಗಳೂರು : ಮೇ 13 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಯ ಮತ ಎಣಿಕೆ ಸಮಯದಲ್ಲಿ ಸಮಾಜಘಾತುಕ ವ್ಯಕ್ತಿಗಳು, ಕಿಡಿಗೇಡಿಗಳು ಗೆದ್ದ ಹಾಗು ಸೋತ ಅಭ್ಯರ್ಥಿಗಳ ಪರವಾಗಿ ಪ್ರತಿಭಟನೆ ಮಾಡುವ ಸಾಧ್ಯತೆ ಹಿನ್ನಲೆ ಬೆಂಗಳೂರು ನಗರದಾದ್ಯಂತ 144 ಸೆಕ್ಷನ್ ಜಾರಿಮಾಡಿ ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಆದೇಶ ಹೊರಡಿಸಿದ್ದಾರೆ.
ಹೌದು.. ನಿನ್ನೆ ಅಂದ್ರೆ, ಮೇ 10 ರಂದು 224 ವಿಧಾನಸಭಾ ಕ್ಷೇತಗಳಿಗೆ ಮತದಾನ ನಡೆದಿದೆ. ರಾಜಧಾನಿ ಬೆಂಗಳೂರಿನಲ್ಲಿಯೂ ಸಹ ಶಾಂತಿಯುತ ಮತದಾನ ನಡೆಯಿತು. ಇದೀಗ ಇದೇ ತಿಂಗಳು 13ರಂದು ಮತ ಎಣಿಕೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಕೇಂದ್ರಗಳನ್ನೊಳಗೊಂಡಂತೆ ಬೆಂಗಳೂರಿನಾದ್ಯಂತ 144 ಸೆಕ್ಷನ್ ಜಾರಿ ಮಾಡಿ ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿಯವರು ಆದೇಶಿಸಿದ್ದಾರೆ.
ಇದನ್ನೂ ಓದಿ: ತಂದೆ-ತಾಯಿ, ಹೆಂಡತಿ-ಮಕ್ಕಳ ಜೊತೆ ಕಾಲ ಕಳೆಯಿರಿ: ‘ಕೈ’ ಕಾರ್ಯಕರ್ತರಿಗೆ ಸಿದ್ದರಾಮಯ್ಯ ಸಲಹೆ
ಗುಪ್ತವಾರ್ತೆ ಮಾಹಿತಿ ಹಿನ್ನಲೆ ನಗರ ಪೊಲೀಸ್ ಆಯುಕ್ತರು ಕ್ರಮಕ್ಕೆ ಮುಂದಾಗಿದ್ದಾರೆ. ಬೆಂಗಳೂರಿನಾದ್ಯಂತ 5 ಅಥವಾ ಅದಕ್ಕಿಂತ ಹೆಚ್ಚು ಜನರ ಗುಂಪು ಸೇರುವುದು ನಿಷೇಧಿಸಲಾಗಿದೆ. ಮದುವೆ ಹಾಗು ಶವಸಂಸ್ಕಾರವನ್ನ ಹೊರತುಪಡಿಸಿ ಉಳಿದೆಲ್ಲದಕ್ಕು ಪ್ರತಿಬಂಧಕಾಜ್ಞೆ ಅನ್ವಯವಾಗುತ್ತದೆ. ಅಲ್ಲದೆ, ಯಾವುದೇ ಮಾರಾಕಾಸ್ತ್ರಗಳನ್ನ ಒಯ್ಯುವುದು ನಿಷೇಧಿಸಲಾಗಿದೆ.
ಪಟಾಕಿಯಂತಹ ಸ್ಪೋಟಕ ವಸ್ತುಗಳ ಸಾಗಾಟ, ಪಟಾಕಿ ಹೊಡೆಯುವುದು, ಪ್ರತಿಕೃತಿ ಪ್ರದರ್ಶನ, ದಹನ, ಬಹಿರಂಗ ಘೋಷಣೆ ಕೂಗುವುದು, ಸಂಗೀತ ನುಡಿಸುವುದು, ಸನ್ನೆ ಮಾಡುವುದು, ಬಿತ್ತಿ ಪತ್ರ ಪ್ರದರ್ಶನ ಕೂಡ ನಿಷೇಧ ಮಾಡಲಾಗಿದೆ. 13ರ ರಂದು ಬೆಳಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12ರ ವರೆಗೂ ಈ ಆದೇಶ ಜಾರಿ ಇರಲಿದೆ ಎಂದು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿಯವರು ಮಾಹಿತಿ ನೀಡಿದ್ದಾರೆ.https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ