ಶಂಕರ್ ನಾಗ್ ಕನಸು ನನಸು: ಸಿಎಂ ಬೊಮ್ಮಾಯಿ

ನಮ್ಮ ಯೋಜನೆಗಳ ಬಗ್ಗೆ ಜನರಿಗೆ ವಿಶ್ವಾಸ ಮೂಡಿದೆ‌.  ಇದರಿಂದ ನಮ್ಮ‌ಆತ್ಮವಿಶ್ವಾಸ ಹೆಚ್ಚಾಗಿದೆ‌. ಅಮಿತ್ ಶಾ ಅವರ ಸಭೆಯಲ್ಲಿ ಪ್ರಣಾಳಿಕೆಯ ಬಗ್ಗೆ ಚರ್ಚೆ ಮಾಡಿದ್ದೇವೆ. ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಅವರು ಪ್ರಾಣಾಳಿಕೆ  ಸಮಿತಿ  ಅಧ್ಯಕ್ಷರಾಗಿದ್ದಾರೆ. ಈ ಬಾರಿ ನಮ್ಮದು ಜನತಾ ಪ್ರಣಾಳಿಕೆಯಾಗಲಿದೆ ಎಂದು ಸಿಎಂ ಇದೇ ವೇಳೆ ಭರವಸೆ ನೀಡಿದರು.

Written by - Prashobh Devanahalli | Edited by - Yashaswini V | Last Updated : Mar 27, 2023, 03:33 PM IST
  • ರೋಪ್ ವೇ ಮಾಡಿದರೆ ಪ್ರವಾಸೋದ್ಯಮಕ್ಕೆ ಸಾಕಷ್ಟು ಅನುಕೂಲವಾಗುತ್ತದೆ‌.
  • ಈ ಭಾಗದಲ್ಲಿ ಸಾಕಷ್ಟು ಪ್ರವಾಸಿ ತಾಣಗಳಿವೆ.
  • ನಂದಿ ಬೆಟ್ಟದ ಪಕ್ಕದ ದೇವಸ್ಥಾನ ಅಭಿವೃದ್ಧಿ ಆಗುತ್ತದೆ.
ಶಂಕರ್ ನಾಗ್ ಕನಸು ನನಸು: ಸಿಎಂ ಬೊಮ್ಮಾಯಿ title=
Karnataka Assembly Election

ಚಿಕ್ಕಬಳ್ಳಾಪುರ : ನಂದಿಬೆಟ್ಟಕ್ಕೆ ರೋಪ್ ವೇ ಆಗಬೇಕೆಂದು ದಿವಂಗತ ನಟ  ಶಂಕರನಾಗ್ ಅವರು ಕಂಡ ಕನಸು ಈಗ ನನಸಾಗುತ್ತಿದೆ.   ರೋಪ್ ವೇ ಮಾಡಿದರೆ  ಪ್ರವಾಸೋದ್ಯಮಕ್ಕೆ ಸಾಕಷ್ಟು ಅನುಕೂಲವಾಗುತ್ತದೆ‌. ಈ ಭಾಗದಲ್ಲಿ  ಸಾಕಷ್ಟು  ಪ್ರವಾಸಿ ತಾಣಗಳಿವೆ. ನಂದಿ ಬೆಟ್ಟದ  ಪಕ್ಕದ ದೇವಸ್ಥಾನ ಅಭಿವೃದ್ಧಿ ಆಗುತ್ತದೆ. ಆದ್ದರಿಂದ ಇದೊಂದು ಪ್ರವಾಸಿ ಸರ್ಕಿಟ್ ಆಗಲು ಅನುಕೂಲವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದರು.

ಪ್ರತಿ ಜಿಲ್ಲೆಯಲ್ಲಿ ವೈದ್ಯಕೀಯ ಕಾಲೇಜು  ಆಗಬೇಕು ಎನ್ನುವ  ಅಭಿಲಾಷೆಯಿಂದ   ನಮ್ಮ ಪ್ರಧಾನಿಗಳು ನಿಯಮ ಸರಳಿಕರಣಗೊಳಿಸಿದ್ದರಿಂದ,  ಹಿಂದುಳಿದ ಜಿಲ್ಲೆಗಳಲ್ಲಿ ವೈದ್ಯಕೀಯ ಕಾಲೇಜು  ಸ್ಥಾಪಿಸಲಾಗುತ್ತಿದೆ ಎಂದು ತಿಳಿಸಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಚಿಕ್ಕಬಳ್ಳಾಪುರ, ಹಾವೇರಿ, ಯಾದಗಿರಿ, ಚಿಕ್ಕಮಗಳೂರು ಮೆಡಿಕಲ್ ಕಾಲೇಜು ಅಭಿವೃದ್ಧಿ ಮಾಡಲಾಗಿದೆ. ರಾಮನಗರದಲ್ಲಿಯೂ ವೈದ್ಯಕೀಯ ಕಾಲೇಜು  ಆರಂಭಿಸಲಾಗುವುದು ಎಂದರು. 

ಇದನ್ನೂ ಓದಿ- Yadgiri: ಬಟ್ಟೆ ಅಂಗಡಿಗೆ ಬೆಂಕಿ, ದಂಪತಿ ಸಜೀವ ದಹನ!

ಸರ್ಕಾರದ ಯೋಜನೆಗಳ ಬಗ್ಗೆ ಜನರಿಗೆ ವಿಶ್ವಾಸ:
ನಮ್ಮ ಯೋಜನೆಗಳ ಬಗ್ಗೆ ಜನರಿಗೆ ವಿಶ್ವಾಸ ಮೂಡಿದೆ‌.  ಇದರಿಂದ ನಮ್ಮ‌ಆತ್ಮವಿಶ್ವಾಸ ಹೆಚ್ಚಾಗಿದೆ‌. ಅಮಿತ್ ಶಾ ಅವರ ಸಭೆಯಲ್ಲಿ ಪ್ರಣಾಳಿಕೆಯ ಬಗ್ಗೆ ಚರ್ಚೆ ಮಾಡಿದ್ದೇವೆ. ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಅವರು ಪ್ರಾಣಾಳಿಕೆ  ಸಮಿತಿ  ಅಧ್ಯಕ್ಷರಾಗಿದ್ದಾರೆ. ಈ ಬಾರಿ ನಮ್ಮದು ಜನತಾ ಪ್ರಣಾಳಿಕೆಯಾಗಲಿದೆ ಎಂದು ಸಿಎಂ ಇದೇ ವೇಳೆ ಭರವಸೆ ನೀಡಿದರು.

ಇದನ್ನೂ ಓದಿ- ಭಾರತದ ಪ್ರಯಾಣಿಕ ಸಾರಿಗೆ ದೈತ್ಯರಾದ ಓಲಾ ಊಬರ್ ಗಳನ್ನು ನಡುಗಿಸಿದ ಒಎನ್‌ಡಿಸಿಯ ಶೂನ್ಯ ಕಮಿಷನ್ ಸೇವೆ

ಮೀಸಲಾತಿ-ಕಾಂಗ್ರೆಸ್ ಗೆ ಸಹಿಸಲಾಗುತ್ತಿಲ್ಲ: 
ಮೀಸಲಾತಿ ಹೆಚ್ಚಳ ಮಾಡಿರುವುದು ಕಾಂಗ್ರೆಸ್ ನವರಿಗೆ ಸಹಿಸಲಿಕ್ಕೆ ಆಗುತ್ತಿಲ್ಲ. ಹೀಗಾಗಿ ಅವರು ವಿರೋಧ ಮಾಡುತ್ತಿದ್ದಾರೆ. ನಾವು ಯಾವ ಸಮುದಾಯಕ್ಕೆ ಮೀಸಲಾತಿ ಹೆಚ್ಚಳ ಮಾಡಿದ್ದೇವೆಯೋ ಅದನ್ನು ವಿರೋಧಿಸುತ್ತೇವೆ ಎಂದು ಹೇಳಲಿ. ಮುಸ್ಲಿಮರಿಗೆ ಯಾವುದೇ ರೀತಿಯ ಅನ್ಯಾಯವಾಗಿಲ್ಲ. ಅವರನ್ನು ಇಡಬ್ಲುಎಸ್ ವರ್ಗದಲ್ಲಿ ಸೇರಿಸಿದ್ದೇವೆ. ಅಲ್ಲಿ 10% ಮೀಸಲಾತಿ ಇದೆ. ನಮ್ಮ ಸಂವಿಧಾನದಲ್ಲಿ  ಧಾರ್ಮಿಕ ಆಧಾರದಲ್ಲಿ ಮಿಸಲಾತಿ ಇಲ್ಲ. ಮುಸ್ಲೀಮರಿಗೆ ಯಾವುದೇ ರೀತಿಯ ಅನ್ಯಾಯ ಮಾಡಿಲ್ಲ ಎಂದು ಸ್ಪಷ್ಟ ಪಡಿಸಿದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News