ಬೆಂಗಳೂರು: ರಾಜ್ಯವು ಪ್ರಧಾನಿ ಮೋದಿ ಅವರ ಆಶೀರ್ವಾದದಿಂದ ವಂಚಿತರಾಗಬಾರದು ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ದಾ ಹೇಳಿಕೆಗೆ ತಿರುಗೇಟು ನೀಡಿರುವ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಈಗ ಅವರು ಎಂಟು ಪ್ರಶ್ನೆಗಳನ್ನು ನಡ್ದಾ ಎದುರು ಇಟ್ಟಿದ್ದಾರೆ.


COMMERCIAL BREAK
SCROLL TO CONTINUE READING

ಸರಣಿ ಟ್ವೀಟ್ ಗಳ ಮೂಲಕ ವಾಗ್ದಾಳಿ ನಡೆಸಿರುವ ಅವರು ತಮ್ಮ ಎಂಟು ಪ್ರಶ್ನೆಗಳಿಗೆ ಉತ್ತರ ನೀಡಿ ಎಂದು ಅವರು ಆಗ್ರಹಿಸಿದ್ದಾರೆ.


ಜೆಪಿ ನಡ್ಡಾ ಅವರೇ, ತೆರಿಗೆ ಹಂಚಿಕೆಯ ತಾರತಮ್ಯ ನೀತಿಯಲ್ಲಿ ಕರ್ನಾಟಕ ಅಂದಾಜು ಒಂದು ಲಕ್ಷ ಕೋಟಿ ರೂಪಾಯಿ ಕಳೆದುಕೊಂಡದ್ದು,ಕನ್ನಡಿಗರು ಕೇಂದ್ರಕ್ಕೆ ನೀಡುವ ಪ್ರತಿ ಒಂದು ರೂಪಾಯಿ ತೆರಿಗೆಯಲ್ಲಿ ಹದಿನೈದು ಪೈಸೆ ಮಾತ್ರ ವಾಪಸು ನೀಡುವುದು,ಮೋದಿಯವರ ಆಶೀರ್ವಾದವೇ ಶಾಪವೇ? 


ಇದನ್ನೂ ಓದಿ: ವರುಣ ಬಳಿಕ ಚಾಮರಾಜನಗರದಲ್ಲಿ 2ನೇ ಸುತ್ತಿನ ಮತಬೇಟೆ


ಕೇಂದ್ರ ಸರ್ಕಾರದ ಅನುದಾನ ಕಡಿತದಿಂದಾಗಿ ರಾಜ್ಯ ಸರ್ಕಾರ ಮಾಡಿಕೊಂಡ ಸಾಲ ರೂ.2.4.0 ಲಕ್ಷ ಕೋಟಿಗಳಿಂದ ರೂ.5.60 ಲಕ್ಷ ಕೋಟಿಗೆ ಏರಿಕೆಯಾಗಿದ್ದು ಮತ್ತು
ಪ್ರತಿಯೊಬ್ಬ ಕನ್ನಡಿಗನ ತಲೆಮೇಲೆ ರೂ.86,000 ಸಾಲದ ಹೊರೆ ಬಿದ್ದಿರುವುದು ಮೋದಿ ಆಶೀರ್ವಾದವೇ? ಶಾಪವೇ? 


2019ರಲ್ಲಿ ನೆರೆ ಹಾವಳಿ ನಷ್ಟಕ್ಕೆ ರೂ.35,000 ಕೋಟಿ ಪರಿಹಾರ ಕೇಳಿದ್ದರೂ, ಕೇವಲ ರೂ.1,869 ಕೋಟಿ ಮಾತ್ರ ಕೇಂದ್ರ ಸರ್ಕಾರ  ಕೊಟ್ಟಿದ್ದು,
2020 ಮತ್ತು 2021ರಲ್ಲಿಯೂ ಇದೇ ಅನ್ಯಾಯ ಮುಂದುವರಿಸಿದ್ದು ಮೋದಿ ಆಶೀರ್ವಾದವೇ? ಶಾಪವೇ?


ʼಲಿಂಗಾಯತ ಸಿಎಂʼ ಘೋಷಣೆ ಬಗ್ಗೆ ಯಾವುದೇ ನಿರ್ಣಯ ಆಗಿಲ್ಲ : ಸಿಎಂ ಸ್ಪಷ್ಟನೆ


ಮಹದಾಹಿ ಯೋಜನೆಗೆ ತಾತ್ವಿಕ ಒಪ್ಪಿಗೆ ನೀಡಲು ವಿಳಂಬ ಮಾಡಿದ್ದು, ಮೇಕೆದಾಟು ಯೋಜನೆಗೆ ಅನುಮತಿ ನೀಡಲು ವಿಫಲವಾಗಿದ್ದು, ಕೇಂದ್ರ ಸರ್ಕಾರದ ನೆರವಿನ ಕೊರತೆಯಿಂದ ಎತ್ತಿನಹೊಳೆ ಯೋಜನೆ ಕುಂಟುತ್ತಾ ಸಾಗಿರುವುದು ಮೋದಿ ಆಶೀರ್ವಾದವೇ? ಶಾಪವೇ? 


ರಾಜ್ಯ ಬಿಜೆಪಿ ನಾಯಕರು 40% ಕಮಿಷನ್ ಮೂಲಕ ಕಳೆದ ನಾಲ್ಕು ವರ್ಷಗಳಲ್ಲಿ ಅಂದಾಜು ಒಂದುವರೆ ಲಕ್ಷ ಕೋಟಿ ರೂಪಾಯಿಗಳನ್ನು ನುಂಗಿ ಹಾಕಿರುವುದು ಮೋದಿ ಆಶೀರ್ವಾದವೇ? ಶಾಪವೇ?https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.