ದೆಹಲಿ : ನಿಯೋಜಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ದೆಹಲಿಯಲ್ಲಿದ್ದಾರೆ. ಸಚಿವ ಸಂಪುಟ ರಚನೆ ಕುರಿತು ಕೈ ನಾಯಕರು ಸಭೆ ನಡೆಸುತ್ತಿದ್ದಾರೆ. ಅಲ್ಲದೆ, 40ಕ್ಕೂ ಹೆಚ್ಚು ಶಾಸಕರಿಗೆ ಮಂತ್ರಿ ಪಟ್ಟ ಕಟ್ಟಲು ಚರ್ಚೆ ನಡೆಯುತ್ತಿದೆ.


COMMERCIAL BREAK
SCROLL TO CONTINUE READING

ರಾಷ್ಟ್ರರಾಜಧಾನಿಯಲ್ಲಿ ಕಾಂಗ್ರೆಸ್‌ ನಾಯಕರು ಸಚಿವ ಸಂಪುಟ ರಚನೆ ಕಸರತ್ತು ನಡೆಸಿದ್ದಾರೆ. ನಾಲ್ವರು ನಾಯಕರ ನಡುವೆ ಮಹತ್ವದ ಸಭೆ ಜರುಗುತ್ತಿದೆ. ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ಕೆ.ಸಿ.ವೇಣುಗೋಪಾಲ್, ನಿಯೋಜಿತ ಸಿಎಂ ಸಿದ್ದರಾಮಯ್ಯ ಮತ್ತು ನಿಯೋಜಿತ ಡಿಸಿಎಂ ಡಿಕೆಶಿ ಸಭೆಯಲ್ಲಿ ಉಪಸ್ಥಿತರಿದ್ದಾರೆ.  40 ಕ್ಕೂ ಹೆಚ್ಚು ಶಾಸಕರ ಬಗ್ಗೆ ಚರ್ಚೆ ನಡೆಯುತ್ತಿದೆ. 


ಇದನ್ನೂ ಓದಿ: ಸಿದ್ದರಾಮಯ್ಯ ಪ್ರಮಾಣ ವಚನಕ್ಕೆ ವೇದಿಕೆ ಸಜ್ಜು : ಕಾರ್ಯಕ್ರಮದಲ್ಲಿ ಸೇರಲಿದೆ ಗಣ್ಯರ ದಂಡು, ಭದ್ರತೆಗೆ ಹೆಚ್ಚಿನ ಒತ್ತು


ಜಿಲ್ಲಾವಾರು, ಜಾತಿವಾರು ಆದಾರದ ಮೇಲೆ ಸಚಿವ ಸ್ಥಾನ ನೀಡಿಕೆ, ಅಲ್ಪಸಂಖ್ಯಾತ ಸಮುದಾಯದಿಂದ ಮೂವರಿಗೆ ಸ್ಥಾನ, ಜಮೀರ್ ಅಹ್ಮದ್, ಯು.ಟಿ.ಖಾದರ್, ತನ್ವೀರ್ ಸೇಠ್‌ಗೆ ಸಚಿವ ಸ್ಥಾನ, ಚಾಮರಾಜನಗರದ ಪುಟ್ಟರಂಗ ಶೆಟ್ಟಿಗೆ ಮಂತ್ರಿಗಿರಿ ನೀಡುವ ಬಗ್ಗೆ ಚರ್ಚೆಯೂ ಸಹ ನಡೆಯುತ್ತಿದೆ. ಅಲ್ಲದೆ, ಮೈಸೂರಿನಿಂದ ಅನಿಲ್ ಚಿಕ್ಕಮಾದು, ಕೊಡಗಿನ ಪೊನ್ನಣ್ಣ, ಎಂ.ಬಿ.ಪಾಟೀಲ್, ಈಶ್ವರ್ ಖಂಡ್ರೆ , ಎಸ್.ಎಸ್.ಮಲ್ಲಿಕಾರ್ಜುನ್, ಆರ್.ಬಿ.ತಿಮ್ಮಾಪೂರ, ಕೆ.ಹೆಚ್.ಮುನಿಯಪ್ಪ ಹೆಸರು ಸಹ ಸಚಿವ ಸ್ಥಾನದ ಪಟ್ಟಿಯಲ್ಲಿ ಕೇಳಿ ಬರುತ್ತಿವೆ. ಸ್ಪೀಕರ್ ಸ್ಥಾನದ ಬಗ್ಗೆಯೂ ಚರ್ಚೆ ನಡೆಯುತ್ತಿದೆ.


ಇನ್ನು ಸಂತೋಷ್ ಲಾಡ್, ಪ್ರಿಯಾಂಕ್ ಖರ್ಗೆ, ಸತೀಶ್ ಜಾರಕಿಹೊಳಿಗೆ ಸಚಿವ ಸ್ಥಾನ ನೀಡುವ ನಿರೀಕ್ಷೆ ಇದೆ. ಶರಣ ಪ್ರಕಾಶ್ ಪಾಟೀಲ್ ಆಯ್ಕೆ ಪೆಂಡಿಂಗ್‌ನಲ್ಲಿದೆ ಎನ್ನಲಾಗಿದೆ. ಕೆ.ಎನ್.ರಾಜಣ್ಣ, ಎಸ್.ಆರ್.ಶ್ರೀನಿವಾಸ್ ಹೆಸರು ಇನ್ನೂ ಚರ್ಚೆಗೆ ಬಂದಿಲ್ಲ. ಲಕ್ಷ್ಮೀ‌ಹೆಬ್ಬಾಳ್ಕರ್ ಗೆ ಸಚಿವ ಸ್ಥಾನ ನೀಡುವ ಬಗ್ಗೆ ಪ್ರಸ್ತಾಪ ಮಾಡಲಾಗಿದೆ ಎನ್ನಲಾಗಿದೆ. ಲಕ್ಷ್ಮಣ್ ಸವದಿ ಹೆಸರು ‌ಚರ್ಚೆಗೆ ಬಂದಿಲ್ಲ ಆದ್ರೆ, ಜಗದೀಶ್ ಶೆಟ್ಟರ್‌ಗೆ ಸಚಿವ ಸ್ಥಾನ ನೀಡಲು ಸಮ್ಮತಿ ಇದೆ ಎಂದು ತಿಳಿದು ಬಂದಿದೆ.


ಇದನ್ನೂ ಓದಿ: ಸಚಿವ ಸ್ಥಾನಕ್ಕೆ ಶಾಸಕರ ನಡುವೆ ಭಾರಿ ಪೈಪೋಟಿ: ಸಿದ್ದು ಬಣಕ್ಕೆ ಎಷ್ಟು..? ಡಿಕೆ ಬಣಕ್ಕೆ ಎಷ್ಟು..?


ನಾಲ್ವರು ನಾಯಕರು ಒಮ್ಮತ ನಿರ್ಧಾರದಿಂದ ಸಚಿವ ಸಂಪುಟ ರಚನೆಯ ಬಳಿಕೆ ಈ ಪಟ್ಟಿಯನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಮುಂದಿಡಲಾಗುತ್ತದೆ. ಅವರು ಯಾವ ರೀತಿಯ ನಿರ್ಧಾರ ಕೈಗೊಳ್ಳುತ್ತಾರೆ ಎಂದು ಕಾಯ್ದು ನೋಡಬೇಕಿದೆ. ಅಲ್ಲದೆ, ಈಗಾಗಲೇ ಹಲವು ಶಾಸಕರು ತಮಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡುವಂತೆ ಲಾಭಿ ನಡೆಸಿದ್ದಾರೆ. ನಾಳೆ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್‌ ಅವರು ಸೇರಿದಂತೆ ಹಲವು ಸಚಿವರು ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ.https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ