Siddaramaiah: ಕಾಂಗ್ರೆಸ್ ಕಾಲದಲ್ಲಿ ಐಟಿ-ಬಿಟಿ ರಾಜಧಾನಿ, ಬಿಜೆಪಿ ಅವಧಿಯಲ್ಲಿ ಅಪರಾಧಿಗಳ ಜಗತ್ತಿನ ರಾಜಧಾನಿ - ಸಿದ್ದರಾಮಯ್ಯ
Siddaramaiah: ಪ್ರಧಾನ ಮಂತ್ರಿಯವರು ಕರ್ನಾಟಕದಲ್ಲಿಯೇ ಠಿಕಾಣಿ ಹೂಡಿ ಬಾಯ್ತುಂಬಾ ಮಾತನಾಡುತ್ತಿದ್ದಾರೆ. ಆದರೆ ಗುತ್ತಿಗೆದಾರರ ಸಂಘದ ಅಧ್ಯಕ್ಷರು ಮತ್ತು ಅನುದಾನಿತ ಶಿಕ್ಷಣ ಸಂಸ್ಥೆಗಳ ಒಕ್ಕೂಟದ ಅಧ್ಯಕ್ಷರು ಪ್ರಧಾನಿಗಳಿಗೇ ಪತ್ರ ಬರೆಯುವಷ್ಟು ಭ್ರಷ್ಟಾಚಾರ ಇಲ್ಲಿ ತಾರಕಕ್ಕೇರಿದೆ.
ಬೆಂಗಳೂರು: ಪ್ರಧಾನ ಮಂತ್ರಿಯವರು ಕರ್ನಾಟಕದಲ್ಲಿಯೇ ಠಿಕಾಣಿ ಹೂಡಿ ಬಾಯ್ತುಂಬಾ ಮಾತನಾಡುತ್ತಿದ್ದಾರೆ. ಆದರೆ ಗುತ್ತಿಗೆದಾರರ ಸಂಘದ ಅಧ್ಯಕ್ಷರು ಮತ್ತು ಅನುದಾನಿತ ಶಿಕ್ಷಣ ಸಂಸ್ಥೆಗಳ ಒಕ್ಕೂಟದ ಅಧ್ಯಕ್ಷರು ಪ್ರಧಾನಿಗಳಿಗೇ ಪತ್ರ ಬರೆಯುವಷ್ಟು ಭ್ರಷ್ಟಾಚಾರ ಇಲ್ಲಿ ತಾರಕಕ್ಕೇರಿದೆ.
ಕಾಂಗ್ರೆಸ್ ಸರ್ಕಾರದ ಕಾಲದಲ್ಲಿ ಬೆಂಗಳೂರು ನಗರ ಉದ್ಯಾನಗಳ ನಗರ, ಸಿಲಿಕಾನ್ ಸಿಟಿ, ಐಟಿ-ಬಿಟಿ ರಾಜಧಾನಿ, ಸ್ಟಾರ್ಟ್ಅಪ್ ರಾಜಧಾನಿ ಎಂದೆಲ್ಲ ಖ್ಯಾತಿ ಗಳಿಸಿತ್ತು.ಬಿಜೆಪಿ ಸರ್ಕಾರದ ಕಾಲದಲ್ಲಿ ಗುಂಡಿಬಿದ್ದ ರಸ್ತೆಗಳು, ನೆರೆನೀರಿನಲ್ಲಿ ಮುಳುಗುವ ಮನೆಗಳು, ಅಪರಾಧಿಗಳ ಜಗತ್ತಿನ ರಾಜಧಾನಿ ಎಂಬ ಕುಖ್ಯಾತಿ ಗಳಿಸಿದೆ ಬಿಜೆಪಿ ಆಡಳಿತ ವಿರುದ್ಧ ಸಿದ್ದರಾಮಯ್ಯ ವ್ಯಂಗ್ಯ ಮಾಡಿದ್ದಾರೆ.
ಇದನ್ನೂ ಓದಿ: Karnataka Assembly Election: ಚುನಾವಣೆಗೆ ಕೌಂಟ್ ಡೌನ್ ಶುರು: ಉದ್ಯಾನನಗರಿಯಲ್ಲಿ ಭರ್ಜರಿ ಪ್ರಚಾರ
ಕಾಂಗ್ರೆಸ್ ಸರ್ಕಾರದ ಕಾಲದಲ್ಲಿ ಬೆಂಗಳೂರು ನಗರ ಉದ್ಯಮಶೀಲರ ಆಸಕ್ತಿಯ ನಂಬರ್ ಒನ್ ತಾಣವಾಗಿತ್ತು. ಬಿಜೆಪಿ ಸರ್ಕಾರದ ಕಾಲದಲ್ಲಿ ಬೆಂಗಳೂರು ನಗರ ಉದ್ಯಮಶೀಲರ ಆಸಕ್ತಿಯ ನಗರಗಳ ಪಟ್ಟಿಯಲ್ಲಿ ಹದಿನೇಳನೇ ಸ್ಥಾನಕ್ಕೆ ಕುಸಿದಿದೆ.
ಅಪರಾಧ ಸಂಖ್ಯೆಗಳ ಹೆಚ್ಚಳ, ಕುಸಿದುಬಿದ್ದಿರುವ ಮೂಲಸೌಕರ್ಯ ವ್ಯವಸ್ಥೆ ಮತ್ತು ಗುಂಡಿಬಿದ್ದ ರಸ್ತೆಗಳಿಂದಾಗಿ ಜಾಗತಿಕ ವಾಸಯೋಗ್ಯ ಸೂಚ್ಯಂಕದಲ್ಲಿ ಬೆಂಗಳೂರು ಕನಿಷ್ಠ ಶ್ರೇಣಿಗೆ ತಲುಪಿದೆ.
ಕಳೆದ ಮೂರು ವರ್ಷಗಳಲ್ಲಿ ಕೇವಲ ಗುಂಡಿಬಿದ್ದ ರಸ್ತೆಗಳಿಂದಾಗಿ 31 ಮಂದಿಪ್ರಾಣ ಕಳೆದುಕೊಂಡಿದ್ದಾರೆ.
ಕಳೆದ ಮೂರು ವರ್ಷಗಳಲ್ಲಿ ಬಿಬಿಎಂಪಿ ಕೇವಲ ರಸ್ತೆ ಗುಂಡಿಮುಚ್ಚಲು ರೂ.7,121 ಖರ್ಚು ಮಾಡಿದರೂ ಇನ್ನೂ ನೂರಾರು ಹಳೆಯ ಗುಂಡಿಗಳು ಉಳಿದಿವೆ, ಹೊಸ ಗುಂಡಿಗಳು ತಯರಾಗುತ್ತಿವೆ.
ಇದನ್ನೂ ಓದಿ: MOdi Road Show: ಪ್ರಧಾನಿ ಮೋದಿ ಆಗಮನಕ್ಕಾಗಿ ಸಿಂಗಾರಗೊಂಡು ಸಜ್ಜಾಗಿದೆ ಶಿವಮೊಗ್ಗದ ಆಯನೂರು
ಶೇಕಡಾ 48ರಷ್ಟು ವಾಹನದಟ್ಟಣೆಯ ಪ್ರಮಾಣದಿಂದಾಗಿ ಬೆಂಗಳೂರು ನಗರ ದೇಶದಲ್ಲಿ ಎರಡನೇ ಅತ್ಯಂತ ಹೆಚ್ಚು ವಾಹನ ದಟ್ಟಣೆಯ ನಗರ ಎಂಬ ಕುಖ್ಯಾತಿಗೆ ಒಳಪಟ್ಟಿದೆ. ಇದರಿಂದಾಗಿ ನಗರವಾಸಿಗಳು ಮನೆಗಿಂತ ಹೆಚ್ಚಿನ ಸಮಯ ರಸ್ತೆಯಲ್ಲಿ ಕಳೆಯುವಂತಾಗಿದೆ.
ಎನ್.ಸಿ.ಆರ್.ಬಿ ವರದಿ ಪ್ರಕಾರ ದೇಶದ ಮೆಟ್ರೋಪಾಲಿಟನ್ ನಗರಗಳಲ್ಲಿ ನಡೆಯುವ ಅಪರಾಧಗಳ ಪೈಕಿ 72% ಕಳ್ಳತನಗಳು ಬೆಂಗಳೂರು ನಗರದಲ್ಲಿ ನಡೆಯುತ್ತಿರುವ ಕಾರಣ ಬೆಂಗಳೂರು ನಗರ ಈಗ ಅಪರಾಧಗಳ ತಾಣವಾಗಿದೆ.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೇಲಿನ ದೌರ್ಜನ್ಯದ ಪ್ರಮಾಣ 2021ರಲ್ಲಿ ಶೇಕಡಾ 18ರಷ್ಟು ಹೆಚ್ಚಾಗಿದೆ.
ಎನ್.ಡಿ.ಪಿ.ಎಸ್ ಕಾಯ್ದೆಯಡಿ ದಾಖಲಾಗುತ್ತಿರುವ ಪ್ರಕರಣಗಳ ಸಂಖ್ಯೆ 1493% ರಷ್ಟು ಹೆಚ್ಚಾಗಿವೆ. 2021ರಲ್ಲಿ ಇಮ್ಮೊರಲ್ ಟ್ರಾಪಿಕಿಂಗ್ ಶೇಕಡಾ 61ರಷ್ಟು ಹೆಚ್ಚಾಗಿದೆ.
ಬೆಂಗಳೂರು ನಗರಕ್ಕೆ ಕುಡಿಯುವ ನೀರು ಪೂರೈಸಲು ರೂಪಿಸಲಾಗಿರುವ ಮೇಕೆದಾಟು ಯೋಜನೆಗೆ ಅನುಮತಿ ನೀಡದೆ ಇರುವ ಕಾರಣದಿಂದಾಗಿ ನಗರದಲ್ಲಿ ಕುಡಿಯುವ ನೀರಿನ ಕೊರತೆ ಹೆಚ್ಚಾಗುತ್ತಿದೆ. ನಗರದ ಜನ ಕುಡಿಯುವ ನೀರಿಗಾಗಿ ಖಾಸಗಿ ಬೋರ್ ವೆಲ್ ಮತ್ತು ಟ್ಯಾಂಕರ್ ನೀರನ್ನು ಬಳಸುತ್ತಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಕಿಡಿಕಾರಿದ್ದಾರೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.