ಬೆಂಗಳೂರು: ಬೆಂಗಳೂರಿನ ಕೋರಮಂಗಲದಲ್ಲಿ ನಡೆದಿರುವ ಸಾಮೂಹಿಕ ಅತ್ಯಾಚಾರ ಪ್ರರಕಣವನ್ನು ಖಂಡಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. #LawAndOrder ಹ್ಯಾಶ್‍ಟ್ಯಾಗ್ ಬಳಸಿ ಶನಿವಾರ ಅವರು ಸರಣಿ ಟ್ವೀಟ್ ಮಾಡಿದ್ದಾರೆ.
‘ಬೆಂಗಳೂರಿನ ಕಗ್ಗಲೀಪುರದ ಬಾಲಕಿಯ ಅತ್ಯಾಚಾರ ಪ್ರಕರಣ ನಡೆದು ವಾರ ಕಳೆದಿಲ್ಲ, ಅಷ್ಟರಲ್ಲೇ ಕೋರಮಂಗಲದ ಯುವತಿಯನ್ನು ನಾಲ್ವರು ರಾಕ್ಷಸರು ಅತ್ಯಾಚಾರಗೈದು ಅಟ್ಟಹಾಸ ಮೆರೆದಿದ್ದಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಜೀವಂತವಾಗಿದೆ ಎಂಬ ನಂಬಿಕೆಯನ್ನೇ ಜನ ಕಳೆದುಕೊಂಡಿದ್ದಾರೆ’ ಎಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಬೆಂಗಳೂರಿನ ಕಗ್ಗಲೀಪುರದ ಬಾಲಕಿಯ ಅತ್ಯಾಚಾರ ಪ್ರಕರಣ ನಡೆದು ವಾರ ಕಳೆದಿಲ್ಲ ಅಷ್ಟರಲ್ಲೇ ಕೋರಮಂಗಲದ ಯುವತಿಯನ್ನು ನಾಲ್ವರು ರಾಕ್ಷಸರು ಅತ್ಯಾಚಾರಗೈದು ಅಟ್ಟಹಾಸ ಮೆರೆದಿದ್ದಾರೆ.
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಜೀವಂತವಾಗಿದೆ ಎಂಬ ನಂಬಿಕೆಯನ್ನೇ ಜನ ಕಳೆದುಕೊಂಡಿದ್ದಾರೆ. 1/5— Siddaramaiah (@siddaramaiah) April 1, 2023
ಇದನ್ನೂ ಓದಿ: ಕೈಬೀಸಿ ಹೋಗುವ ಶೋಕಿವಾಲನ ಶೋಕಿಗೆ ಜನರ ಜೇಬು ಬರಿದಾಗುತ್ತಿದೆ: ಕಾಂಗ್ರೆಸ್
‘ದುಷ್ಟರನ್ನು, ಸಮಾಜಘಾತುಕರನ್ನು ಹಿಡಿದು ಸದೆಬಡಿಯಬೇಕಿದ್ದ ಬಿಜೆಪಿ ಸರ್ಕಾರ, ಬದಲಿಗೆ ರೌಡಿ ಶೀಟರ್ ಗಳು, ಕೊಲೆಗಡುಕರನ್ನು ರತ್ನಗಂಬಳಿ ಹಾಸಿ, ಸನ್ಮಾನಿಸಿ ಪಕ್ಷಕ್ಕೆ ಸೇರಿಸಿಕೊಂಡಿದ್ದರ ಫಲವನ್ನು ಜನಸಾಮಾನ್ಯರು ಉಣ್ಣಬೇಕಿದೆ’ ಎಂದು ಸಿದ್ದರಾಮಯ್ಯ ಕುಟುಕಿದ್ದಾರೆ.
ದುಷ್ಟರನ್ನು, ಸಮಾಜಘಾತುಕರನ್ನು ಹಿಡಿದು ಸದೆಬಡಿಯಬೇಕಿದ್ದ @BJP4Karnataka ಸರ್ಕಾರ, ಬದಲಿಗೆ ರೌಡಿ ಶೀಟರ್ ಗಳು, ಕೊಲೆಗಡುಕರನ್ನು ರತ್ನಗಂಬಳಿ ಹಾಸಿ, ಸನ್ಮಾನಿಸಿ ಪಕ್ಷಕ್ಕೆ ಸೇರಿಸಿಕೊಂಡಿದ್ದರ ಫಲವನ್ನು ಜನಸಾಮಾನ್ಯರು ಉಣ್ಣಬೇಕಿದೆ. 2/5#LawAndOrder
— Siddaramaiah (@siddaramaiah) April 1, 2023
‘ರಾಜ್ಯದಲ್ಲಿ ಕುಸಿದಿರುವ ಕಾನೂನು ಸುವ್ಯವಸ್ಥೆ ಬಗ್ಗೆ ಸದನದಲ್ಲಿ ಪ್ರಶ್ನೆ ಮಾಡಿದಾಗ ಮೈಮೇಲೆ ಕಂಬಳಿಹುಳ ಬಿದ್ದವರಂತೆ ಕುಣಿದಾಡಿ, ಎಗರಾಡಿದ ಗೃಹ ಸಚಿವ ಆರಗ ಜ್ಞಾನೇಂದ್ರರ ಅಸಾಮರ್ಥ್ಯವೇ ಈ ಎಲ್ಲಾ ದೌರ್ಜನ್ಯಗಳಿಗೆ ಕಾರಣ. ಕಠಿಣ ಕ್ರಮದ ಭರವಸೆ ನೀಡುವ ಗೃಹ ಸಚಿವರು ಸ್ಯಾಂಟ್ರೋ ರವಿ ಹೇಳುವ ವರ್ಗಾವಣೆ ಮಾಡಿಸಲಷ್ಟೇ ಶಕ್ತರು ಎಂಬ ಜನರ ಮಾತು ನಿಜವಾಗಿದೆ. ಸಾಮರ್ಥ್ಯ, ನೈತಿಕತೆ ಈ ಯಾವುದೂ ಇಲ್ಲದೆ ಕುರ್ಚಿಗೆ ಅಂಟಿಕೊಂಡು ಕೂತಿರುವ ಆರಗ ಜ್ಞಾನೇಂದ್ರ ಅವರು ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು’ ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
ರಾಜ್ಯದಲ್ಲಿ ಕುಸಿದಿರುವ ಕಾನೂನು ಸುವ್ಯವಸ್ಥೆ ಬಗ್ಗೆ ಸದನದಲ್ಲಿ ಪ್ರಶ್ನೆ ಮಾಡಿದಾಗ ಮೈಮೇಲೆ ಕಂಬಳಿಹುಳ ಬಿದ್ದವರಂತೆ ಕುಣಿದಾಡಿ, ಎಗರಾಡಿದ ಗೃಹ ಸಚಿವ @JnanendraAraga ಅವರ ಅಸಾಮರ್ಥ್ಯವೇ ಈ ಎಲ್ಲಾ ದೌರ್ಜನ್ಯಗಳಿಗೆ ಕಾರಣ. 3/5#LawAndOrder
— Siddaramaiah (@siddaramaiah) April 1, 2023
ಇದನ್ನೂ ಓದಿ: Karnataka Elections 2023: ಮತದಾರರ ಸೆಳೆಯಲು ನಕಲಿ ಲಕ್ಷ್ಮಿದೇವಿಯ ಬೆಳ್ಳಿ ಫೋಟೋ ಹಂಚಿಕೆ..?
ಕಠಿಣ ಕ್ರಮದ ಭರವಸೆ ನೀಡುವ ಗೃಹಸಚಿವರು ಸ್ಯಾಂಟ್ರೋ ರವಿ ಹೇಳುವ ವರ್ಗಾವಣೆ ಮಾಡಿಸಲಷ್ಟೇ ಶಕ್ತರು ಎಂಬ ಜನರ ಮಾತು ನಿಜವಾಗಿದೆ.
ಸಾಮರ್ಥ್ಯ, ನೈತಿಕತೆ ಈ ಯಾವುದೂ ಇಲ್ಲದೆ ಕುರ್ಚಿಗೆ ಅಂಟಿಕೊಂಡು ಕೂತಿರುವ @JnanendraAraga ಅವರು ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸುತ್ತೇನೆ. 4/5#LawAndOrder— Siddaramaiah (@siddaramaiah) April 1, 2023
ಗೃಹ ಸಚಿವ @JnanendraAraga ಅವರ ಅದಕ್ಷತೆಯಿಂದಾಗಿ ರಾಜ್ಯದ ಪೊಲೀಸ್ ಇಲಾಖೆ ಸಂಪೂರ್ಣವಾಗಿ ಹಾದಿ ತಪ್ಪಿದೆ. ಚುನಾವಣಾ ಕಾಲದಲ್ಲಿ ಈ ರೀತಿಯ ಪೊಲೀಸ್ ನಿಷ್ಕ್ರಿಯತೆ ಅಪಾಯಕಾರಿಯಾದುದು. ಆದ್ದರಿಂದ
ಚುನಾವಣಾ ಆಯೋಗ ಪೊಲೀಸ್ ಇಲಾಖೆಯ ಕಾರ್ಯನಿರ್ವಹಣೆಯ ಮೇಲೆ ನಿಗಾ ಇಡಬೇಕು ಎಂದು ಮನವಿ ಮಾಡುತ್ತೇನೆ. 5/5#LawAndOrder— Siddaramaiah (@siddaramaiah) April 1, 2023
‘ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಅದಕ್ಷತೆಯಿಂದಾಗಿ ರಾಜ್ಯದ ಪೊಲೀಸ್ ಇಲಾಖೆ ಸಂಪೂರ್ಣವಾಗಿ ಹಾದಿ ತಪ್ಪಿದೆ. ಚುನಾವಣಾ ಕಾಲದಲ್ಲಿ ಈ ರೀತಿಯ ಪೊಲೀಸ್ ನಿಷ್ಕ್ರಿಯತೆ ಅಪಾಯಕಾರಿಯಾದುದು. ಆದ್ದರಿಂದ ಚುನಾವಣಾ ಆಯೋಗ ಪೊಲೀಸ್ ಇಲಾಖೆಯ ಕಾರ್ಯನಿರ್ವಹಣೆಯ ಮೇಲೆ ನಿಗಾ ಇಡಬೇಕು ಎಂದು ಮನವಿ ಮಾಡುತ್ತೇನೆ’ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.