ಬೆಂಗಳೂರು: ಕನ್ನಡದಲ್ಲಿಯೂ CRPF ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿ ಎಂದು ಕೇಂದ್ರ ಸರ್ಕಾರಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. #ಭಾಷಾತಾರತಮ್ಯ ಹ್ಯಾಶ್ಟ್ಯಾಗ್ ಬಳಸಿ ಸೋಮವಾರ ಸರಣಿ ಟ್ವೀಟ್ ಮಾಡಿದ್ದಾರೆ.
‘ಕೇಂದ್ರ ಮೀಸಲು ಪೊಲೀಸ್ ಪಡೆಯ ನೇಮಕಾತಿ ಪರೀಕ್ಷೆಯನ್ನು ಹಿಂದಿ ಮತ್ತು ಇಂಗ್ಲಿಷ್ ಭಾಷೆಯಲ್ಲಿ ಬರೆಯುವುದನ್ನು ಕಡ್ಡಾಯಗೊಳಿಸಿರುವುದನ್ನು ತಕ್ಷಣ ಸಡಿಲಿಸಿ, ಕನ್ನಡ ಭಾಷೆಯಲ್ಲಿಯೂ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಟ್ಟು ಈ ಅನ್ಯಾಯವನ್ನು ಸರಿಪಡಿಸಬೇಕೆಂದು ಪ್ರಧಾನಿ ನರೇಂದ್ರ ಮೋದಿಯವರನ್ನು ಆಗ್ರಹಪಡಿಸುತ್ತಿದ್ದೇನೆ’ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಕೇಂದ್ರ ಮೀಸಲು ಪೊಲೀಸ್ ಪಡೆಯ ನೇಮಕಾತಿ ಪರೀಕ್ಷೆಯನ್ನು ಹಿಂದಿ ಮತ್ತು ಇಂಗ್ಲೀಷ್ ಭಾಷೆಯಲ್ಲಿ ಬರೆಯುವುದನ್ನು ಕಡ್ಡಾಯಗೊಳಿಸಿರುವುದನ್ನು ತಕ್ಷಣ ಸಡಿಲಿಸಿ, ಕನ್ನಡ ಭಾಷೆಯಲ್ಲಿಯೂ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಟ್ಟು ಈ ಅನ್ಯಾಯವನ್ನು ಸರಿಪಡಿಸಬೇಕೆಂದು ಪ್ರಧಾನಿ @narendramodi ಅವರನ್ನು ಆಗ್ರಹಪಡಿಸುತ್ತಿದ್ದೇನೆ.
1/5#ಭಾಷಾತಾರತಮ್ಯ pic.twitter.com/vY1oJ1GHpS— Siddaramaiah (@siddaramaiah) April 10, 2023
ಇದನ್ನೂ ಓದಿ: "ನಾಯಕರನ್ನು ಪಕ್ಷದಲ್ಲಿ ಹಿಡಿದಿಟ್ಟುಕೊಳ್ಳಲು ಬಿಜೆಪಿಯಿಂದ ಪಟ್ಟಿ ಬಿಡುಗಡೆ ವಿಳಂಬ"
‘ಭಾಷೆಯೇ ಜ್ಞಾನ ಅಲ್ಲ, ಅದು ಜ್ಞಾನದ ಸಂವಹನ ಸಾಧನ ಅಷ್ಟೆ. ಕನ್ನಡ ಭಾಷಾ ಮಾಧ್ಯಮದಲ್ಲಿ ಓದಿದ ನಮ್ಮ ಯುವಜನರು ಜ್ಞಾನಿಗಳಾಗಿದ್ದರೂ ಭಾಷೆಯ ಸಮಸ್ಯೆಯಿಂದಾಗಿ ಕೇಂದ್ರ ಸರ್ಕಾರ ನಡೆಸುವ ಪರೀಕ್ಷೆಯಲ್ಲಿ ಅನುತ್ತೀರ್ಣರಾಗುತ್ತಿದ್ದಾರೆ. ಇದು ಅನ್ಯಾಯ’ವೆಂದು ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದ್ದಾರೆ.
ಭಾಷೆಯೇ ಜ್ಞಾನ ಅಲ್ಲ, ಅದು ಜ್ಞಾನದ ಸಂವಹನ ಸಾಧನ ಅಷ್ಟೆ. ಕನ್ನಡ ಭಾಷಾ ಮಾಧ್ಯಮದಲ್ಲಿ ಓದಿದ ನಮ್ಮ ಯುವಜನರು ಜ್ಞಾನಿಗಳಾಗಿದ್ದರೂ ಭಾಷೆಯ ಸಮಸ್ಯೆಯಿಂದಾಗಿ ಕೇಂದ್ರ ಸರ್ಕಾರ ನಡೆಸುವ ಪರೀಕ್ಷೆಯಲ್ಲಿ ಅನುತ್ತೀರ್ಣರಾಗುತ್ತಿದ್ದಾರೆ. ಇದು ಅನ್ಯಾಯ.
2/5#ಭಾಷಾತಾರತಮ್ಯ pic.twitter.com/3Pm8k4xSaK— Siddaramaiah (@siddaramaiah) April 10, 2023
‘ರಾಜ್ಯ ಬಿಜೆಪಿ ಸರ್ಕಾರದ ಭ್ರಷ್ಟಾಚಾರದಿಂದಾಗಿ ರಾಜ್ಯದಲ್ಲಿ ಮತ್ತು ಕೇಂದ್ರದ ಬಿಜೆಪಿ ಸರ್ಕಾರದ ಭಾಷಾ ನೀತಿಯಿಂದಾಗಿ ಕೇಂದ್ರದಲ್ಲಿ ಕನ್ನಡಿಗ ಯುವಜನರು ಉದ್ಯೋಗ ವಂಚಿತರಾಗುತ್ತಿದ್ದಾರೆ. ಇದರಿಂದ ರಾಜ್ಯದಲ್ಲಿ ನಿರುದ್ಯೋಗದ ಪ್ರಮಾಣ ಹೆಚ್ಚಾಗುತ್ತಿದೆ, ಯುವಜನರ ಭವಿಷ್ಯ ಮಂಕಾಗುತ್ತಿದೆ. ಕೇಂದ್ರದ ಬಿಜೆಪಿ ಸರ್ಕಾರ ರಾಜ್ಯ ಭಾಷೆಗಳನ್ನು ಮೂಲೆಗೆ ತಳ್ಳಿ ಹಿಂದಿ ಭಾಷೆಯನ್ನು ನಮ್ಮ ತಲೆ ಮೇಲೆ ಹೇರುವ ಪ್ರಯತ್ನವನ್ನು ನಿರಂತರವಾಗಿ ಮಾಡುತ್ತಾ ಬಂದಿದೆ. ಉದ್ಯಮ, ಉದ್ಯೋಗ, ಶಿಕ್ಷಣ ಹೀಗೆ ಪ್ರತಿಯೊಂದು ಕ್ಷೇತ್ರದಲ್ಲಿಯೂ ಹಿಂದಿ ಭಾಷೆಯ ಯಜಮಾನಿಕೆ ಹೆಚ್ಚಾಗುತ್ತಿದೆ. ಇದನ್ನು ಸಹಿಸಲು ಸಾಧ್ಯ ಇಲ್ಲ’ವೆಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ರಾಜ್ಯ @BJP4Karnataka ಸರ್ಕಾರದ ಭ್ರಷ್ಟಾಚಾರದಿಂದಾಗಿ ರಾಜ್ಯದಲ್ಲಿ ಮತ್ತು ಕೇಂದ್ರದ @BJP4India ಸರ್ಕಾರದ ಭಾಷಾ ನೀತಿಯಿಂದಾಗಿ ಕೇಂದ್ರದಲ್ಲಿ ಕನ್ನಡಿಗ ಯುವಜನರು ಉದ್ಯೋಗ ವಂಚಿತರಾಗುತ್ತಿದ್ದಾರೆ. ಇದರಿಂದ ರಾಜ್ಯದಲ್ಲಿ ನಿರುದ್ಯೋಗದ ಪ್ರಮಾಣ ಹೆಚ್ಚಾಗುತ್ತಿದೆ, ಯುವಜನರ ಭವಿಷ್ಯ ಮಂಕಾಗುತ್ತಿದೆ.
3/5#ಭಾಷಾತಾರತಮ್ಯ— Siddaramaiah (@siddaramaiah) April 10, 2023
ಇದನ್ನೂ ಓದಿ: 80 ವರ್ಷ ಮೇಲ್ಪಟ್ಟವರಿಗೆ ಮನೆಯಲ್ಲೇ ಮತದಾನಕ್ಕೆ ಅವಕಾಶ ! ಹೇಗಿರಲಿದೆ ವೋಟಿಂಗ್ ಪ್ರಕ್ರಿಯೆ ?
ಕೇಂದ್ರದ @BJP4India ಸರ್ಕಾರ ರಾಜ್ಯ ಭಾಷೆಗಳನ್ನು ಮೂಲೆಗೆ ತಳ್ಳಿ ಹಿಂದಿ ಭಾಷೆಯನ್ನು ನಮ್ಮ ತಲೆ ಮೇಲೆ ಹೇರುವ ಪ್ರಯತ್ನವನ್ನು ನಿರಂತರವಾಗಿ ಮಾಡುತ್ತಾ ಬಂದಿದೆ. ಉದ್ಯಮ, ಉದ್ಯೋಗ, ಶಿಕ್ಷಣ ಹೀಗೆ ಪ್ರತಿಯೊಂದು ಕ್ಷೇತ್ರದಲ್ಲಿಯೂ ಹಿಂದಿ ಭಾಷೆಯ ಯಜಮಾನಿಕೆ ಹೆಚ್ಚಾಗುತ್ತಿದೆ. ಇದನ್ನು ಸಹಿಸಲು ಸಾಧ್ಯ ಇಲ್ಲ.
4/5#ಭಾಷಾತಾರತಮ್ಯ— Siddaramaiah (@siddaramaiah) April 10, 2023
ಈಗಲೂ ಕಾಲ ಮಿಂಚಿಲ್ಲ ಪ್ರಧಾನಿ @narendramodi ಅವರು ತಕ್ಷಣ ಮಧ್ಯೆ ಪ್ರವೇಶಿಸಿ ಸಿಆರ್ಪಿಎಫ್ ಪರೀಕ್ಷೆಗಳನ್ನು ಕನ್ನಡವೂ ಸೇರಿದಂತೆ ರಾಜ್ಯ ಭಾಷೆಗಳಲ್ಲಿ ಬರೆಯಲು ಅನುಕೂಲ ಮಾಡಿಕೊಡಬೇಕು. ರಾಜ್ಯದ ಮುಖ್ಯಮಂತ್ರಿ @BSBommai ಅವರು ಮತ್ತು @BJP4Karnataka ಸಂಸದರು ಇದಕ್ಕಾಗಿ ಪ್ರಧಾನಿಗಳ ಮೇಲೆ ಒತ್ತಡ ಹೇರಬೇಕು.
5/5#ಭಾಷಾತಾರತಮ್ಯ pic.twitter.com/ZYMUgBDoXw— Siddaramaiah (@siddaramaiah) April 10, 2023
‘ಈಗಲೂ ಕಾಲ ಮಿಂಚಿಲ್ಲ ಪ್ರಧಾನಿ ಮೋದಿಯವರು ತಕ್ಷಣ ಮಧ್ಯೆ ಪ್ರವೇಶಿಸಿ ಸಿಆರ್ಪಿಎಫ್ ಪರೀಕ್ಷೆಗಳನ್ನು ಕನ್ನಡವೂ ಸೇರಿದಂತೆ ರಾಜ್ಯ ಭಾಷೆಗಳಲ್ಲಿ ಬರೆಯಲು ಅನುಕೂಲ ಮಾಡಿಕೊಡಬೇಕು. ರಾಜ್ಯದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರು ಮತ್ತು ಬಿಜೆಪಿ ಸಂಸದರು ಇದಕ್ಕಾಗಿ ಪ್ರಧಾನಿಗಳ ಮೇಲೆ ಒತ್ತಡ ಹೇರಬೇಕು’ ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.